- Kannada News Photo gallery Cricket photos Virat Kohli Becomes First Batter To Score 550 Fours and 200 Sixes in IPL History
Virat Kohli: ಐಪಿಎಲ್ ಇತಿಹಾಸದಲ್ಲೇ ಯಾರೂ ಮಾಡಿರದ ದಾಖಲೆ ಬರೆದ ಕಿಂಗ್ ಕೊಹ್ಲಿ
IPL 2022: ಸದ್ಯ ಐಪಿಎಲ್ನಲ್ಲಿ ಅತ್ಯಧಿಕ ರನ್ ಬಾರಿಸಿರುವ ದಾಖಲೆ ಹೊಂದಿರುವ ವಿರಾಟ್ ಕೊಹ್ಲಿ ಈ ಬಾರಿಯ ಐಪಿಎಲ್ನಲ್ಲಿ ಮತ್ತಷ್ಟು ದಾಖಲೆ ನಿರ್ಮಿಸುವುದರಲ್ಲಿ ಅನುಮಾನವೇ ಇಲ್ಲ ಎನ್ನಬಹುದು.
Updated on:Apr 10, 2022 | 2:38 PM

ಮುಂಬೈ ಇಂಡಿಯನ್ಸ್ ವಿರುದ್ದದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ಐಪಿಎಲ್ ಇತಿಹಾಸದಲ್ಲಿ ಯಾರು ಕೂಡ ಮಾಡಿರದ ದಾಖಲೆ ಎಂಬುದು ವಿಶೇಷ.

ಹೌದು, ಐಪಿಎಲ್ನಲ್ಲಿ ಒಂದೇ ತಂಡದ ಪರ 550 ಫೋರ್ ಬಾರಿಸಿದ ಏಕೈಕ ಆಟಗಾರ ಎಂಬ ದಾಖಲೆಯನ್ನು ವಿರಾಟ್ ಕೊಹ್ಲಿ ಬರೆದಿದ್ದಾರೆ. 2008 ರಿಂದ ಆರ್ಸಿಬಿ ಪರ ಆಡುತ್ತಿರುವ ಕೊಹ್ಲಿ ಇದೀಗ 550 ಕ್ಕೂ ಅಧಿಕ ಫೋರ್ ಬಾರಿಸಿದ್ದಾರೆ. ಈ ಮೂಲಕ ಐಪಿಎಲ್ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ.

ಅಷ್ಟೇ ಅಲ್ಲದೆ ಐಪಿಎಲ್ನಲ್ಲಿ 200 ಕ್ಕೂ ಅಧಿಕ ಸಿಕ್ಸ್ ಹಾಗೂ 550 ಕ್ಕೂ ಅಧಿಕ ಫೋರ್ ಬಾರಿಸಿದ ಏಕೈಕ ಆಟಗಾರ ಎಂಬ ದಾಖಲೆಯನ್ನೂ ಕೂಡ ಕೊಹ್ಲಿ ನಿರ್ಮಿಸಿದ್ದಾರೆ.

ಹಾಗೆಯೇ ಐಪಿಎಲ್ ಇತಿಹಾಸದಲ್ಲಿ 550 ಕ್ಕಿಂತ ಹೆಚ್ಚು ಫೋರ್ ಬಾರಿಸಿದ 2ನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ 668 ಫೋರ್ ಬಾರಿಸಿರುವ ಶಿಖರ್ ಧವನ್ ಅಗ್ರಸ್ಥಾನದಲ್ಲಿದ್ದಾರೆ.

ಸದ್ಯ ಐಪಿಎಲ್ನಲ್ಲಿ ಅತ್ಯಧಿಕ ರನ್ ಬಾರಿಸಿರುವ ದಾಖಲೆ ಹೊಂದಿರುವ ವಿರಾಟ್ ಕೊಹ್ಲಿ ಈ ಬಾರಿಯ ಐಪಿಎಲ್ನಲ್ಲಿ ಮತ್ತಷ್ಟು ದಾಖಲೆ ನಿರ್ಮಿಸುವುದರಲ್ಲಿ ಡೌಟೇ ಇಲ್ಲ ಎನ್ನಬಹುದು.
Published On - 2:37 pm, Sun, 10 April 22




