- Kannada News Photo gallery Cricket photos Virat Kohli becomes first Indian to complete 11000 runs in T20
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ
Virat Kohli: ಟಿ20 ವಿಶ್ವಕಪ್ ಹಾಗೂ ಮುಂಬರುವ ಐಪಿಎಲ್ ಮೂಲಕ ಕಿಂಗ್ ಕೊಹ್ಲಿ ಈ ಸಾಧನೆ ಮಾಡಲಿದ್ದಾರಾ ಕಾದು ನೋಡಬೇಕಿದೆ.
Updated on:Oct 03, 2022 | 10:56 AM

ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಸೌತ್ ಆಫ್ರಿಕಾ ವಿರುದ್ಧದ 2ನೇ ಪಂದ್ಯದಲ್ಲಿ ಅಕ್ಷರಶಃ ಅಬ್ಬರಿಸಿದ್ದರು. 28 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 7 ಫೋರ್ನೊಂದಿಗೆ ಅಜೇಯ 49 ರನ್ ಬಾರಿಸಿದ್ದರು. ಈ ಭರ್ಜರಿ ಬ್ಯಾಟಿಂಗ್ನೊಂದಿಗೆ ಇದೀಗ ಕಿಂಗ್ ಕೊಹ್ಲಿ ವಿಶೇಷ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.

ಸೌತ್ ಆಫ್ರಿಕಾ ವಿರುದ್ಧ 49 ರನ್ ಬಾರಿಸುವ ಮೂಲಕ ಟಿ20 ಕ್ರಿಕೆಟ್ನಲ್ಲಿ 11 ಸಾವಿರ ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.

2007 ರಿಂದ 2022 ರವರೆಗೆ ಐಪಿಎಲ್ ಹಾಗೂ ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿರುವ ಕೊಹ್ಲಿ ಒಟ್ಟು 337 ಇನಿಂಗ್ಸ್ ಮೂಲಕ ಈ ಸಾಧನೆ ಮಾಡಿದ್ದಾರೆ. ಈ ವೇಳೆ 6 ಶತಕ ಹಾಗೂ 81 ಅರ್ಧಶತಕಗಳನ್ನೂ ಕೂಡ ವಿರಾಟ್ ಕೊಹ್ಲಿ ಸಿಡಿಸಿದ್ದರು.

ಸದ್ಯ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಬಾರಿಸಿದ ದಾಖಲೆ ವೆಸ್ಟ್ ಇಂಡೀಸ್ನ ಸ್ಪೋಟಕ ಬ್ಯಾಟ್ಸ್ಮನ್ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಗೇಲ್ 455 ಇನಿಂಗ್ಸ್ ಮೂಲಕ ಒಟ್ಟು 14562 ರನ್ ಕಲೆಹಾಕಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ನ ಕೀರನ್ ಪೊಲಾರ್ಡ್ (11915) 2ನೇ ಸ್ಥಾನದಲ್ಲಿದ್ದು, ಹಾಗೆಯೇ ಪಾಕಿಸ್ತಾನದ ಶೊಯೇಬ್ ಮಲಿಕ್ (11902) ಮೂರನೇ ಸ್ಥಾನದಲ್ಲಿದ್ದಾರೆ. ಸದ್ಯ 11030 ರನ್ ಬಾರಿಸುವ ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ.

ಅಂದರೆ ಟಿ20 ಕ್ರಿಕೆಟ್ನಲ್ಲಿ ಇನ್ನು 1 ಸಾವಿರ ರನ್ ಪೂರೈಸಿದ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಲಿದ್ದಾರೆ. ಹೀಗಾಗಿ ಟಿ20 ವಿಶ್ವಕಪ್ ಹಾಗೂ ಮುಂಬರುವ ಐಪಿಎಲ್ ಮೂಲಕ ಕಿಂಗ್ ಕೊಹ್ಲಿ ಈ ಸಾಧನೆ ಮಾಡಲಿದ್ದಾರಾ ಕಾದು ನೋಡಬೇಕಿದೆ.
Published On - 10:55 am, Mon, 3 October 22
