AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಪ್ರಶಸ್ತಿಗಳ ವಿಷಯದಲ್ಲೂ ವಿಶ್ವ ದಾಖಲೆ ಬರೆದ ಕಿಂಗ್ ಕೊಹ್ಲಿ

Virat Kohli's Records: ಪ್ರಥಮ ಇನಿಂಗ್ಸ್​ನಲ್ಲಿ 241 ಎಸೆತಗಳಲ್ಲಿ ಶತಕ ಪೂರೈಸುವ ಮೂಲಕ ಕಿಂಗ್ ಕೊಹ್ಲಿ ತಮ್ಮ ಟೆಸ್ಟ್ ಶತಕದ ಬರವನ್ನು ನೀಗಿಸಿದ್ದರು. ಅಷ್ಟೇ ಅಲ್ಲದೆ 186 ರನ್​ ಬಾರಿಸಿ ಭಾರತ ತಂಡದ ಮೊತ್ತವನ್ನು 571 ಕ್ಕೆ ತಂದು ನಿಲ್ಲಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

TV9 Web
| Updated By: ಝಾಹಿರ್ ಯೂಸುಫ್|

Updated on: Mar 13, 2023 | 11:09 PM

Share
ಅಹಮದಾಬಾದ್​ನಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ನಡುವಣ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿದೆ. ಇದರೊಂದಿಗೆ ಬಾರ್ಡರ್-ಗವಾಸ್ಕರ್ ಸರಣಿಯನ್ನು ಟೀಮ್ ಇಂಡಿಯಾ 2-1 ಅಂತರದಿಂದ ಗೆದ್ದುಕೊಂಡಿದೆ. ಇನ್ನು ಅಂತಿಮ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

1 / 7
ಪ್ರಥಮ ಇನಿಂಗ್ಸ್​ನಲ್ಲಿ 241 ಎಸೆತಗಳಲ್ಲಿ ಶತಕ ಪೂರೈಸುವ ಮೂಲಕ ಕಿಂಗ್ ಕೊಹ್ಲಿ ತಮ್ಮ ಟೆಸ್ಟ್ ಶತಕದ ಬರವನ್ನು ನೀಗಿಸಿದ್ದರು. ಅಷ್ಟೇ ಅಲ್ಲದೆ 186 ರನ್​ ಬಾರಿಸಿ ತಂಡದ ಮೊತ್ತವನ್ನು 571 ಕ್ಕೆ ತಂದು ನಿಲ್ಲಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

2 / 7
ಈ ಭರ್ಜರಿ ಬ್ಯಾಟಿಂಗ್ ಫಲವಾಗಿ ವಿರಾಟ್ ಕೊಹ್ಲಿಗೆ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಒಲಿದಿದೆ. ಇದರೊಂದಿಗೆ ಕಿಂಗ್ ಕೊಹ್ಲಿ ಟೆಸ್ಟ್​ ಕ್ರಿಕೆಟ್​ನಲ್ಲಿ 10ನೇ ಬಾರಿ ಪಂದ್ಯ ಪುರುಷೋತ್ತಮನಾಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಮೂರು ಮಾದರಿಯ ಕ್ರಿಕೆಟ್​ನಲ್ಲೂ ಕನಿಷ್ಠ 10 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ವಿಶ್ವದ ಏಕೈಕ ಕ್ರಿಕೆಟಿಗನಾಗಿ ಕಿಂಗ್ ಕೊಹ್ಲಿ ಹೊರಹೊಮ್ಮಿದ್ದಾರೆ.

3 / 7
ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿ ಇದುವರೆಗೆ 63 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಇದರಲ್ಲಿ 10 ಬಾರಿ ಟೆಸ್ಟ್ ಕ್ರಿಕೆಟ್​ನಲ್ಲಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರೆ, ಏಕದಿನ (38) ಹಾಗೂ ಟಿ20 (15) ಕ್ರಿಕೆಟ್​ನಲ್ಲಿ ಒಟ್ಟು 53 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

4 / 7
ವಿಶೇಷ ಎಂದರೆ ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿದರೆ ಬೇರೆ ಯಾವುದೇ ಆಟಗಾರ ಮೂರು ಮಾದರಿಯಲ್ಲಿ 10 ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಪಡೆದಿಲ್ಲ. ಇದರೊಂದಿಗೆ ಪ್ರಶಸ್ತಿಗಳ ವಿಷಯದಲ್ಲೂ ಕಿಂಗ್ ಕೊಹ್ಲಿಯ ಹೆಸರಿಗೆ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ.

5 / 7
ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರರ ಪಟ್ಟಿಯಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟು 664 ಪಂದ್ಯಗಳನ್ನಾಡಿರುವ ಸಚಿನ್ 76	 ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದಿದ್ದರು. ಈ ವೇಳೆ ಟೆಸ್ಟ್ ಕ್ರಿಕೆಟ್​ನಲ್ಲಿ 14 ಬಾರಿ ಪ್ರಶಸ್ತಿ ಪಡೆದರೆ, ಏಕದಿನ ಕ್ರಿಕೆಟ್​ನಲ್ಲಿ 62 ಬಾರಿ ಪಂದ್ಯ ಶ್ರೇಷ್ಠರಾಗಿ ಹೊರಹೊಮ್ಮಿದ್ದರು. ಇನ್ನು ಟಿ20 ಕ್ರಿಕೆಟ್​ನಲ್ಲಿ ಏಕೈಕ ಪಂದ್ಯವಾಡಿದ್ದ ಸಚಿನ್ ಚುಟುಕು ಮಾದರಿಯಲ್ಲಿ ಪ್ರಶಸ್ತಿ ಪಡೆದಿಲ್ಲ.

6 / 7
ಸದ್ಯ ಅತೀ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 2ನೇ ಸ್ಥಾನದಲ್ಲಿದ್ದಾರೆ. ಕಿಂಗ್ ಕೊಹ್ಲಿ 494 ಪಂದ್ಯಗಳಿಂದ ಒಟ್ಟು 63 ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದಿದ್ದಾರೆ. ಕಿಂಗ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ 15 ಬಾರಿ, ಏಕದಿನ ಕ್ರಿಕೆಟ್​ನಲ್ಲಿ 38 ಬಾರಿ ಹಾಗೂ ಟೆಸ್ಟ್​​ನಲ್ಲಿ 10 ಸಲ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಇದೀಗ ಸಚಿನ್ ತೆಂಡೂಲ್ಕರ್ ಅವರ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ದಾಖಲೆ ಮುರಿಯಲು ವಿರಾಟ್ ಕೊಹ್ಲಿ 14 ಪ್ರಶಸ್ತಿಗಳ ಅವಶ್ಯಕತೆಯಿದೆ.

7 / 7
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!

ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್

ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!

ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ

ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ

ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ

ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು

ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು

ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ

ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ