Virat Kohli: ಪ್ರಶಸ್ತಿಗಳ ವಿಷಯದಲ್ಲೂ ವಿಶ್ವ ದಾಖಲೆ ಬರೆದ ಕಿಂಗ್ ಕೊಹ್ಲಿ
TV9 Web | Updated By: ಝಾಹಿರ್ ಯೂಸುಫ್
Updated on:
Mar 13, 2023 | 11:09 PM
Virat Kohli's Records: ಪ್ರಥಮ ಇನಿಂಗ್ಸ್ನಲ್ಲಿ 241 ಎಸೆತಗಳಲ್ಲಿ ಶತಕ ಪೂರೈಸುವ ಮೂಲಕ ಕಿಂಗ್ ಕೊಹ್ಲಿ ತಮ್ಮ ಟೆಸ್ಟ್ ಶತಕದ ಬರವನ್ನು ನೀಗಿಸಿದ್ದರು. ಅಷ್ಟೇ ಅಲ್ಲದೆ 186 ರನ್ ಬಾರಿಸಿ ಭಾರತ ತಂಡದ ಮೊತ್ತವನ್ನು 571 ಕ್ಕೆ ತಂದು ನಿಲ್ಲಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
1 / 7
ಅಹಮದಾಬಾದ್ನಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ನಡುವಣ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿದೆ. ಇದರೊಂದಿಗೆ ಬಾರ್ಡರ್-ಗವಾಸ್ಕರ್ ಸರಣಿಯನ್ನು ಟೀಮ್ ಇಂಡಿಯಾ 2-1 ಅಂತರದಿಂದ ಗೆದ್ದುಕೊಂಡಿದೆ. ಇನ್ನು ಅಂತಿಮ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.
2 / 7
ಪ್ರಥಮ ಇನಿಂಗ್ಸ್ನಲ್ಲಿ 241 ಎಸೆತಗಳಲ್ಲಿ ಶತಕ ಪೂರೈಸುವ ಮೂಲಕ ಕಿಂಗ್ ಕೊಹ್ಲಿ ತಮ್ಮ ಟೆಸ್ಟ್ ಶತಕದ ಬರವನ್ನು ನೀಗಿಸಿದ್ದರು. ಅಷ್ಟೇ ಅಲ್ಲದೆ 186 ರನ್ ಬಾರಿಸಿ ತಂಡದ ಮೊತ್ತವನ್ನು 571 ಕ್ಕೆ ತಂದು ನಿಲ್ಲಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
3 / 7
ಈ ಭರ್ಜರಿ ಬ್ಯಾಟಿಂಗ್ ಫಲವಾಗಿ ವಿರಾಟ್ ಕೊಹ್ಲಿಗೆ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಒಲಿದಿದೆ. ಇದರೊಂದಿಗೆ ಕಿಂಗ್ ಕೊಹ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ 10ನೇ ಬಾರಿ ಪಂದ್ಯ ಪುರುಷೋತ್ತಮನಾಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಮೂರು ಮಾದರಿಯ ಕ್ರಿಕೆಟ್ನಲ್ಲೂ ಕನಿಷ್ಠ 10 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ವಿಶ್ವದ ಏಕೈಕ ಕ್ರಿಕೆಟಿಗನಾಗಿ ಕಿಂಗ್ ಕೊಹ್ಲಿ ಹೊರಹೊಮ್ಮಿದ್ದಾರೆ.
4 / 7
ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿ ಇದುವರೆಗೆ 63 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಇದರಲ್ಲಿ 10 ಬಾರಿ ಟೆಸ್ಟ್ ಕ್ರಿಕೆಟ್ನಲ್ಲಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರೆ, ಏಕದಿನ (38) ಹಾಗೂ ಟಿ20 (15) ಕ್ರಿಕೆಟ್ನಲ್ಲಿ ಒಟ್ಟು 53 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
5 / 7
ವಿಶೇಷ ಎಂದರೆ ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿದರೆ ಬೇರೆ ಯಾವುದೇ ಆಟಗಾರ ಮೂರು ಮಾದರಿಯಲ್ಲಿ 10 ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಪಡೆದಿಲ್ಲ. ಇದರೊಂದಿಗೆ ಪ್ರಶಸ್ತಿಗಳ ವಿಷಯದಲ್ಲೂ ಕಿಂಗ್ ಕೊಹ್ಲಿಯ ಹೆಸರಿಗೆ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ.
6 / 7
ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರರ ಪಟ್ಟಿಯಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟು 664 ಪಂದ್ಯಗಳನ್ನಾಡಿರುವ ಸಚಿನ್ 76 ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದಿದ್ದರು. ಈ ವೇಳೆ ಟೆಸ್ಟ್ ಕ್ರಿಕೆಟ್ನಲ್ಲಿ 14 ಬಾರಿ ಪ್ರಶಸ್ತಿ ಪಡೆದರೆ, ಏಕದಿನ ಕ್ರಿಕೆಟ್ನಲ್ಲಿ 62 ಬಾರಿ ಪಂದ್ಯ ಶ್ರೇಷ್ಠರಾಗಿ ಹೊರಹೊಮ್ಮಿದ್ದರು. ಇನ್ನು ಟಿ20 ಕ್ರಿಕೆಟ್ನಲ್ಲಿ ಏಕೈಕ ಪಂದ್ಯವಾಡಿದ್ದ ಸಚಿನ್ ಚುಟುಕು ಮಾದರಿಯಲ್ಲಿ ಪ್ರಶಸ್ತಿ ಪಡೆದಿಲ್ಲ.
7 / 7
ಸದ್ಯ ಅತೀ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 2ನೇ ಸ್ಥಾನದಲ್ಲಿದ್ದಾರೆ. ಕಿಂಗ್ ಕೊಹ್ಲಿ 494 ಪಂದ್ಯಗಳಿಂದ ಒಟ್ಟು 63 ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದಿದ್ದಾರೆ. ಕಿಂಗ್ ಕೊಹ್ಲಿ ಟಿ20 ಕ್ರಿಕೆಟ್ನಲ್ಲಿ 15 ಬಾರಿ, ಏಕದಿನ ಕ್ರಿಕೆಟ್ನಲ್ಲಿ 38 ಬಾರಿ ಹಾಗೂ ಟೆಸ್ಟ್ನಲ್ಲಿ 10 ಸಲ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಇದೀಗ ಸಚಿನ್ ತೆಂಡೂಲ್ಕರ್ ಅವರ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ದಾಖಲೆ ಮುರಿಯಲು ವಿರಾಟ್ ಕೊಹ್ಲಿ 14 ಪ್ರಶಸ್ತಿಗಳ ಅವಶ್ಯಕತೆಯಿದೆ.