Virat Kohli: SENA ದೇಶಗಳ ವಿರುದ್ದದ ಅತ್ಯಂತ ಯಶಸ್ವಿ ನಾಯಕ ವಿರಾಟ್ ಕೊಹ್ಲಿ

Edited By:

Updated on: Sep 07, 2021 | 7:37 PM

Team India: 65 ಟೆಸ್ಟ್ ಪಂದ್ಯಗಳಲ್ಲಿ ನಾಯಕತ್ವ ವಹಿಸಿದ್ದ ವಿರಾಟ್ ಕೊಹ್ಲಿ 38 ಟೆಸ್ಟ್‌ಗಳಲ್ಲಿ ಟೀಮ್ ಇಂಡಿಯಾವನ್ನು ಗೆಲುವಿನತ್ತ ಮುನ್ನಡೆಸಿದ್ದಾರೆ.

1 / 5
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದ್ದಾರೆ. ಇಂಗ್ಲೆಂಡ್ ತಂಡವನ್ನು ಓವಲ್​ ಮೈದಾನದಲ್ಲಿ 157 ರನ್​ಗಳಿಂದ ಮಣಿಸುವ ಮೂಲಕ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಕೊಹ್ಲಿ ಇಂಗ್ಲೆಂಡ್ ವಿರುದ್ಧ 10 ಟೆಸ್ಟ್ ಪಂದ್ಯಗಳನ್ನು ಗೆದ್ದ ಏಕೈಕ ನಾಯಕನಾಗಿ ಹೊರಹೊಮ್ಮಿದ್ದಾರೆ. ಅಷ್ಟೇ ಅಲ್ಲದೆ 4 ಪ್ರಮುಖ ದೇಶಗಳ ವಿರುದ್ಧ ಅತಿ ಹೆಚ್ಚು ಟೆಸ್ಟ್ ಗೆಲುವು ಸಾಧಿಸಿದ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೂ ಕೊಹ್ಲಿ ಪಾತ್ರರಾಗಿದ್ದಾರೆ.

2 / 5

ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧ 10 ಟೆಸ್ಟ್ ಪಂದ್ಯಗಳನ್ನು ಗೆದ್ದಿದ್ದಾರೆ. ಆದರೆ ಟೀಮ್ ಇಂಡಿಯಾವನ್ನು ಮುನ್ನಡೆಸಿದ ಬೇರೆ ಯಾವ ಭಾರತೀಯ ನಾಯಕನೂ ಕೂಡ ಇಷ್ಟೊಂದು ಗೆಲುವಿನ ಸಮೀಪ ತಲುಪಲು ಸಾಧ್ಯವಾಗಿಲ್ಲ ಎಂಬುದು ಇಲ್ಲಿ ವಿಶೇಷ. ಅಂದರೆ, ಇಂಗ್ಲೆಂಡ್​ ವಿರುದ್ದ ಭಾರತದ ಯಾವ ನಾಯಕ ಕೂಡ 5 ಟೆಸ್ಟ್‌ ಪಂದ್ಯಗಳನ್ನು ಗೆಲ್ಲಲು ಸಾಧ್ಯವಾಗಿಲ್ಲ. ಕೊಹ್ಲಿ ತಮ್ಮ ನಾಯಕತ್ವದಲ್ಲಿ ಇಂಗ್ಲೆಂಡ್ ವಿರುದ್ಧ ಒಟ್ಟು 18 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಅದರಲ್ಲಿ 10 ಪಂದ್ಯಗಳನ್ನು ಗೆದ್ದಿದ್ದಾರೆ. ಇನ್ನು 6 ಪಂದ್ಯಗಳನ್ನು ಸೋತಿದ್ದರೆ, 2 ಪಂದ್ಯಗಳು ಡ್ರಾದಲ್ಲಿ ಕೊನೆಗೊಂಡಿವೆ.

3 / 5

ಮತ್ತೊಂದೆಡೆ, ಟೀಮ್ ಇಂಡಿಯಾದ ಯಶಸ್ವಿ ನಾಯಕ ಎನಿಸಿಕೊಂಡಿದ್ದ ಎಂಎಸ್ ಧೋನಿ ಇಂಗ್ಲೆಂಡ್ ವಿರುದ್ಧ 15 ಟೆಸ್ಟ್‌ಗಳಲ್ಲಿ ನಾಯಕತ್ವ ವಹಿಸಿದ್ದರು. ಆದರೆ ಅವರು ಕೇವಲ 3 ಟೆಸ್ಟ್‌ಗಳನ್ನು ಮಾತ್ರ ಗೆದಿದ್ದಾರೆ. ಅಲ್ಲದೆ 9 ಪಂದ್ಯಗಳಲ್ಲಿ ಸೋಲನುಭವಿಸಿದರೆ 3 ಪಂದ್ಯಗಳು ಡ್ರಾ ಆಗಿವೆ. ಇನ್ನು ಮಾಜಿ ನಾಯಕರುಗಳಾದ ಮೊಹಮ್ಮದ್ ಅಜರುದ್ದೀನ್ ಮತ್ತು ಅಜಿತ್ ವಾಡೇಕರ್ ಅವರು ಇಂಗ್ಲೆಂಡ್ ವಿರುದ್ಧ ತಲಾ 3 ಟೆಸ್ಟ್ ಪಂದ್ಯಗಳನ್ನು ಗೆದ್ದುಕೊಂಡಿದ್ದರು.

4 / 5

ಇಷ್ಟೇ ಅಲ್ಲದೆ ವಿರಾಟ್ ಕೊಹ್ಲಿ ಭಾರತದ ನಾಯಕನಾಗಿ 4 ದೇಶಗಳ ವಿರುದ್ಧ ಅತೀ ಹೆಚ್ಚಿನ ಟೆಸ್ಟ್ ಪಂದ್ಯಗಳನ್ನು ಗೆದ್ದ ಕ್ಯಾಪ್ಟನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಇಂಗ್ಲೆಂಡ್ ವಿರುದ್ದ 10, ದಕ್ಷಿಣ ಆಫ್ರಿಕಾ ವಿರುದ್ಧ 7 ಟೆಸ್ಟ್ ಗೆದ್ದರೆ, ಶ್ರೀಲಂಕಾ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ತಲಾ 6 ಗೆಲುವು ಸಾಧಿಸಿದ್ದಾರೆ. ಹಾಗೆಯೇ SENA ದೇಶಗಳಲ್ಲಿ ಅಂದರೆ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲ್ಯಾಂಡ್ ಮತ್ತು ಆಸ್ಟ್ರೇಲಿಯಾದಲ್ಲಿ 6 ಟೆಸ್ಟ್‌ಗಳನ್ನು ಗೆದ್ದ ಏಕೈಕ ಏಷ್ಯನ್ ನಾಯಕ ಎಂಬ ದಾಖಲೆ ಕೂಡ ಕೊಹ್ಲಿ ಪಾಲಾಗಿದೆ.

5 / 5

65 ಟೆಸ್ಟ್ ಪಂದ್ಯಗಳಲ್ಲಿ ನಾಯಕತ್ವ ವಹಿಸಿದ್ದ ವಿರಾಟ್ ಕೊಹ್ಲಿ 38 ಟೆಸ್ಟ್‌ಗಳಲ್ಲಿ ಟೀಮ್ ಇಂಡಿಯಾವನ್ನು ಗೆಲುವಿನತ್ತ ಮುನ್ನಡೆಸಿದ್ದಾರೆ. ಇನ್ನು 16 ಟೆಸ್ಟ್‌ಗಳಲ್ಲಿ ಸೋತರೆ 11 ಪಂದ್ಯಗಳು ಡ್ರಾ ಆಗಿವೆ. ಈ ಮೂಲಕ ಟೀಮ್ ಇಂಡಿಯಾ ಇತಿಹಾಸದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕ ಎನಿಸಿಕೊಂಡಿದ್ದಾರೆ ವಿರಾಟ್ ಕೊಹ್ಲಿ.

Loading...
Unable to load recommendations.
Follow Us