- Kannada News Photo gallery Cricket photos Virat Kohli becomes the fastest player ever to complete 1000 runs in VHT
Virat Kohli: ಆಡಿದ್ದು 2 ಇನಿಂಗ್ಸ್… ಬರೆದದ್ದು ಭರ್ಜರಿ ದಾಖಲೆ
Virat Kohli Records: ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆಯಾಗಿದೆ. ಈ ಬಾರಿ ದಾಖಲೆ ನಿರ್ಮಾಣವಾಗಿದ್ದು ದೇಶೀಯ ಅಂಗಳದಲ್ಲಿ. ಅಂದರೆ 15 ವರ್ಷಗಳ ಬಳಿಕ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿದ ಕಿಂಗ್ ಕೊಹ್ಲಿ ಇದೀಗ ಭರ್ಜರಿ ದಾಖಲೆಯೊಂದಿಗೆ ಮರಳಿದ್ದಾರೆ.
Updated on: Dec 28, 2025 | 7:53 AM

15 ವರ್ಷಗಳ ಬಳಿಕ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ (Virat Kohli) ಇದೀಗ ಭರ್ಜರಿ ದಾಖಲೆಯೊಂದಿಗೆ ಮರಳಿದ್ದಾರೆ. ಅದು ಕೂಡ ದಿನೇಶ್ ಕಾರ್ತಿಕ್ ಹೆಸರಿನಲ್ಲಿದ್ದ ದೇಶೀಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಈ ಬಾರಿಯ ವಿಜಯ ಹಝಾರೆ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ 2 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಮೊದಲ ಪಂದ್ಯದಲ್ಲಿ ಆಂಧ್ರ ಪ್ರದೇಶ್ ವಿರುದ್ಧ 131 ರನ್ ಬಾರಿಸಿದ್ದ ಕಿಂಗ್ ಕೊಹ್ಲಿ ದ್ವಿತೀಯ ಮ್ಯಾಚ್ನಲ್ಲಿ ಗುಜರಾತ್ ವಿರುದ್ಧ 77 ರನ್ ಕಲೆಹಾಕಿದ್ದರು. ಈ ಎರಡು ಇನಿಂಗ್ಸ್ಗಳ ಮೂಲಕ ಕೊಹ್ಲಿ ವಿಜಯ ಹಝಾರೆ ಟೂರ್ನಿಯಲ್ಲಿ 1000 ರನ್ ಪೂರೈಸಿದ್ದಾರೆ.

ಈ ಒಂದು ಸಾವಿರ ರನ್ಗಳೊಂದಿಗೆ ವಿರಾಟ್ ಕೊಹ್ಲಿ ದೇಶೀಯ ಅಂಗಳದಲ್ಲೂ ಇತಿಹಾಸ ನಿರ್ಮಿಸಿದ್ದಾರೆ. ಅಂದರೆ ವಿಜಯ ಹಝಾರೆ ಟೂರ್ನಿಯಲ್ಲಿ ಅತೀ ವೇಗವಾಗಿ 1000 ರನ್ ಕಲೆಹಾಕಿದ ಭರ್ಜರಿ ದಾಖಲೆ ಇದೀಗ ವಿರಾಟ್ ಕೊಹ್ಲಿಯ ಹೆಸರಿಗೆ ಸೇರ್ಪಡೆಯಾಗಿದೆ.

ಇದಕ್ಕೂ ಮುನ್ನ ಈ ದಾಖಲೆ ದಿನೇಶ್ ಕಾರ್ತಿಕ್ ಹೆಸರಿನಲ್ಲಿತ್ತು. ವಿಜಯ ಹಝಾರೆ ಟೂರ್ನಿಯಲ್ಲಿ ತಮಿಳುನಾಡು ಪರ ಕಣಕ್ಕಿಳಿಯುತ್ತಿದ್ದ ದಿನೇಶ್ ಕಾರ್ತಿಕ್ 18 ಇನಿಂಗ್ಸ್ಗಳ ಮೂಲಕ 1000 ರನ್ ಪೂರೈಸಿದ್ದರು. ಇದೀಗ ಈ ದಾಖಲೆಯನ್ನು ಕೊಹ್ಲಿ ಮುರಿದಿದ್ದಾರೆ.

ದೆಹಲಿ ಪರ ಈವರೆಗೆ 15 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 4 ಶತಕ ಹಾಗೂ 4 ಅರ್ಧಶತಕಗಳೊಂದಿಗೆ 1027 ರನ್ ಪೂರೈಸಿದ್ದಾರೆ. ಈ ಮೂಲಕ ವಿಜಯ ಹಝಾರೆ ಟೂರ್ನಿ ಇತಿಹಾಸದಲ್ಲೇ ಅತೀ ವೇಗವಾಗಿ ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More
