Updated on: Apr 20, 2023 | 5:09 PM
IPL 2023 PBKS vs RCB: ಮೊಹಾಲಿಯಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 5 ಫೋರ್ ಮೂಲಕ ವಿರಾಟ್ ಕೊಹ್ಲಿ ಐಪಿಎಲ್ನಲ್ಲಿ ಮತ್ತೊಂದು ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಫೋರ್ಗಳ ವಿಶೇಷ ದಾಖಲೆಯ ಬರೆಯುವ ಮೂಲಕ ಎಂಬುದು ವಿಶೇಷ.
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 47 ಎಸೆತಗಳಲ್ಲಿ 5 ಫೋರ್ ಹಾಗೂ 1 ಸಿಕ್ಸ್ನೊಂದಿಗೆ 59 ರನ್ ಬಾರಿಸಿದ್ದರು. ಈ 5 ಫೋರ್ಗಳೊಂದಿಗೆ ಐಪಿಎಲ್ನಲ್ಲಿ 600 ಫೋರ್ ಬಾರಿಸಿದ ಆರ್ಸಿಬಿ ತಂಡದ ಮೊದಲ ಬ್ಯಾಟರ್ ಎನಿಸಿಕೊಂಡರು.
ಅಲ್ಲದೆ ಒಂದೇ ಫ್ರಾಂಚೈಸಿ ಪರ ಕಣಕ್ಕಿಳಿದು ಐಪಿಎಲ್ನಲ್ಲಿ 600 ಫೋರ್ ಬಾರಿಸಿದ ದಾಖಲೆ ಕೂಡ ಕಿಂಗ್ ಕೊಹ್ಲಿಯ ಪಾಲಾಯಿತು. ಇದರ ಜೊತೆಗೆ ಐಪಿಎಲ್ನಲ್ಲಿ ಆರು ನೂರಕ್ಕೂ ಅಧಿಕ ಫೋರ್ ಬಾರಿಸಿದ 2ನೇ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು.
ಇದಕ್ಕೂ ಮುನ್ನ ಶಿಖರ್ ಧವನ್ ಈ ಸಾಧನೆ ಮಾಡಿದ್ದರು. ಧವನ್ 210 ಪಂದ್ಯಗಳಲ್ಲಿ 730 ಫೋರ್ಗಳನ್ನು ಬಾರಿಸುವ ಮೂಲಕ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
ಇದೀಗ ವಿರಾಟ್ ಕೊಹ್ಲಿ 221 ಇನಿಂಗ್ಸ್ಗಳ ಮೂಲಕ ಒಟ್ಟು 603 ಫೋರ್ಗಳನ್ನು ಬಾರಿಸಿದ್ದಾರೆ. ಈ ಮೂಲಕ ಐಪಿಎಲ್ನಲ್ಲಿ ಅತ್ಯಧಿಕ ಫೋರ್ ಬಾರಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಆರ್ಸಿಬಿ ಪರ ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ.