IPL 2023: ಫೋರ್ಗಳ ಮೂಲಕವೇ ದಾಖಲೆ ಬರೆದ ವಿರಾಟ್ ಕೊಹ್ಲಿ
TV9 Web | Updated By: ಝಾಹಿರ್ ಯೂಸುಫ್
Updated on:
Apr 20, 2023 | 5:09 PM
IPL 2023 Kannada: ಐಪಿಎಲ್ ಸೀಸನ್ 16 ರಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಆರ್ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ದಾಖಲೆ ಮೇಲೆ ದಾಖಲೆ ಬರೆಯುತ್ತಿರುವುದು ವಿಶೇಷ.
1 / 5
IPL 2023 PBKS vs RCB: ಮೊಹಾಲಿಯಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 5 ಫೋರ್ ಮೂಲಕ ವಿರಾಟ್ ಕೊಹ್ಲಿ ಐಪಿಎಲ್ನಲ್ಲಿ ಮತ್ತೊಂದು ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಫೋರ್ಗಳ ವಿಶೇಷ ದಾಖಲೆಯ ಬರೆಯುವ ಮೂಲಕ ಎಂಬುದು ವಿಶೇಷ.
2 / 5
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 47 ಎಸೆತಗಳಲ್ಲಿ 5 ಫೋರ್ ಹಾಗೂ 1 ಸಿಕ್ಸ್ನೊಂದಿಗೆ 59 ರನ್ ಬಾರಿಸಿದ್ದರು. ಈ 5 ಫೋರ್ಗಳೊಂದಿಗೆ ಐಪಿಎಲ್ನಲ್ಲಿ 600 ಫೋರ್ ಬಾರಿಸಿದ ಆರ್ಸಿಬಿ ತಂಡದ ಮೊದಲ ಬ್ಯಾಟರ್ ಎನಿಸಿಕೊಂಡರು.
3 / 5
ಅಲ್ಲದೆ ಒಂದೇ ಫ್ರಾಂಚೈಸಿ ಪರ ಕಣಕ್ಕಿಳಿದು ಐಪಿಎಲ್ನಲ್ಲಿ 600 ಫೋರ್ ಬಾರಿಸಿದ ದಾಖಲೆ ಕೂಡ ಕಿಂಗ್ ಕೊಹ್ಲಿಯ ಪಾಲಾಯಿತು. ಇದರ ಜೊತೆಗೆ ಐಪಿಎಲ್ನಲ್ಲಿ ಆರು ನೂರಕ್ಕೂ ಅಧಿಕ ಫೋರ್ ಬಾರಿಸಿದ 2ನೇ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು.
4 / 5
ಇದಕ್ಕೂ ಮುನ್ನ ಶಿಖರ್ ಧವನ್ ಈ ಸಾಧನೆ ಮಾಡಿದ್ದರು. ಧವನ್ 210 ಪಂದ್ಯಗಳಲ್ಲಿ 730 ಫೋರ್ಗಳನ್ನು ಬಾರಿಸುವ ಮೂಲಕ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
5 / 5
ಇದೀಗ ವಿರಾಟ್ ಕೊಹ್ಲಿ 221 ಇನಿಂಗ್ಸ್ಗಳ ಮೂಲಕ ಒಟ್ಟು 603 ಫೋರ್ಗಳನ್ನು ಬಾರಿಸಿದ್ದಾರೆ. ಈ ಮೂಲಕ ಐಪಿಎಲ್ನಲ್ಲಿ ಅತ್ಯಧಿಕ ಫೋರ್ ಬಾರಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಆರ್ಸಿಬಿ ಪರ ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ.