Virat Kohli: ಶತಕ ಜಸ್ಟ್​ ಮಿಸ್..ಆದ್ರೂ 6 ದಾಖಲೆ ಬರೆದ ಕಿಂಗ್ ಕೊಹ್ಲಿ

Virat Kohli Records: ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಿದ್ದ ಕೊಹ್ಲಿ, ಕ್ರೀಸ್ ಕಚ್ಚಿ ನಿಲ್ಲುತ್ತಿದ್ದಂತೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ 51 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದಾದ ಬಳಿಕ ಉತ್ತಮ ಆಟ ಮುಂದುವರೆಸಿದ ಕೊಹ್ಲಿ 94 ಎಸೆತಗಳಲ್ಲಿ 11 ಫೋರ್​ಗಳೊಂದಿಗೆ 88 ರನ್ ಬಾರಿಸಿ ಶತಕ ವಂಚಿತರಾಗಿ ನಿರ್ಗಮಿಸಿದರು.

TV9 Web
| Updated By: ಝಾಹಿರ್ ಯೂಸುಫ್

Updated on: Nov 02, 2023 | 8:51 PM

ಏಕದಿನ ವಿಶ್ವಕಪ್​ನ 33ನೇ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ವಿರಾಟ್ ಕೊಹ್ಲಿ (Virat Kohli) ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ ಅದ್ಭುತ ಇನಿಂಗ್ಸ್​ ಆಡಿದರು.

1 / 9
ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಿದ್ದ ಕೊಹ್ಲಿ, ಕ್ರೀಸ್ ಕಚ್ಚಿ ನಿಲ್ಲುತ್ತಿದ್ದಂತೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ 51 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದಾದ ಬಳಿಕ ಉತ್ತಮ ಆಟ ಮುಂದುವರೆಸಿದ ಕೊಹ್ಲಿ 94 ಎಸೆತಗಳಲ್ಲಿ 11 ಫೋರ್​ಗಳೊಂದಿಗೆ 88 ರನ್ ಬಾರಿಸಿ ಶತಕ ವಂಚಿತರಾಗಿ ನಿರ್ಗಮಿಸಿದರು.

2 / 9
ಇದಾಗ್ಯೂ ಈ 88 ರನ್​ಗಳೊಂದಿಗೆ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿರುವುದು ವಿಶೇಷ. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

3 / 9
1000 ರನ್ ಸರದಾರ: ಈ ಅರ್ಧಶತಕದೊಂದಿಗೆ ಕ್ಯಾಲೆಂಡರ್ ವರ್ಷದಲ್ಲಿ​ ಅತ್ಯಧಿಕ ಬಾರಿ ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಸಚಿನ್ ಒಟ್ಟು 7 ಬಾರಿ ಈ ಸಾಧನೆ ಮಾಡಿದ್ದರು. ಇದೀಗ ವಿರಾಟ್ ಕೊಹ್ಲಿ 8ನೇ ಬಾರಿ ಒಂದು ವರ್ಷದೊಳಗೆ 1000 ರನ್ ಪೂರೈಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.

4 / 9
50+ ರನ್​ ವೀರ: ಏಕದಿನ ವಿಶ್ವಕಪ್​ನಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್​ಗಳಿಸಿದ ವಿಶ್ವದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಕಿಂಗ್ ಕೊಹ್ಲಿ ಒಟ್ಟು 13 ಬಾರಿ 50+ ಸ್ಕೋರ್​ಗಳಿಸಿ ಈ ದಾಖಲೆ ಬರೆದಿದ್ದಾರೆ. ಈ ಪಟ್ಟಿಯಲ್ಲಿ ಒಟ್ಟು 21 ಬಾರಿ 50+ ಸ್ಕೋರ್​ಗಳಿಸಿರುವ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ.

5 / 9
50+ ರನ್ ಶೂರ: ಏಕದಿನ ವಿಶ್ವಕಪ್​ನಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್​ಗಳಿಸಿದ ಆರಂಭಿಕನಲ್ಲದ ಬ್ಯಾಟರ್ ಎಂಬ ವಿಶ್ವ ದಾಖಲೆ ಕೂಡ ಕಿಂಗ್ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ 12 ಬಾರಿ 50+ ಸ್ಕೋರ್​ಗಳಿಸಿದ್ದ ಶ್ರೀಲಂಕಾದ ಕುಮಾರ ಸಂಗಾಕ್ಕರ ಹೆಸರಿನಲ್ಲಿತ್ತು. ಇದೀಗ 13ನೇ ಬಾರಿಗೆ 50+ ಸ್ಕೋರ್​ಗಳಿಸುವ ಮೂಲಕ ಕಿಂಗ್ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

6 / 9
50+ ರನ್​ ಕಲೆಗಾರ: ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್​ಗಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಕೊಹ್ಲಿ 2ನೇ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ 145 ಬಾರಿ 50+ ಸ್ಕೋರ್​​ಗಳಿಸಿರುವ ಸಚಿನ್ ಅಗ್ರಸ್ಥಾನದಲ್ಲಿದ್ದರೆ, 118 ಬಾರಿ ಈ ಸಾಧನೆ ಮಾಡಿರುವ ಕೊಹ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ.

7 / 9
8 ಸಾವಿರ ರನ್: ಈ ಅರ್ಧಶತಕದೊಂದಿಗೆ ಏಷ್ಯಾದಲ್ಲಿ ಅತೀ ವೇಗವಾಗಿ 8 ಸಾವಿರ ರನ್ ಪೂರೈಸಿದ ವಿಶ್ವ ದಾಖಲೆ ಕೂಡ ವಿರಾಟ್ ಕೊಹ್ಲಿ ಪಾಲಾಗಿದೆ.

8 / 9
4 ಸಾವಿರ ರನ್: ಶ್ರೀಲಂಕಾ ವಿರುದ್ಧ 4 ಸಾವಿರ ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ  5108 ರನ್ ಕಲೆಹಾಕಿರುವ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದರೆ, ಇದೀಗ 4 ಸಾವಿರಕ್ಕೂ ಅಧಿಕ ರನ್​ಗಳಿಸುವ ಮೂಲಕ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ 2ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

9 / 9
Follow us
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ

ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ

ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?

ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ