Virat Kohli: ಶತಕ ಜಸ್ಟ್ ಮಿಸ್..ಆದ್ರೂ 6 ದಾಖಲೆ ಬರೆದ ಕಿಂಗ್ ಕೊಹ್ಲಿ
TV9 Web | Updated By: ಝಾಹಿರ್ ಯೂಸುಫ್
Updated on:
Nov 02, 2023 | 8:51 PM
Virat Kohli Records: ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ಗೆ ಒತ್ತು ನೀಡಿದ್ದ ಕೊಹ್ಲಿ, ಕ್ರೀಸ್ ಕಚ್ಚಿ ನಿಲ್ಲುತ್ತಿದ್ದಂತೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ 51 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದಾದ ಬಳಿಕ ಉತ್ತಮ ಆಟ ಮುಂದುವರೆಸಿದ ಕೊಹ್ಲಿ 94 ಎಸೆತಗಳಲ್ಲಿ 11 ಫೋರ್ಗಳೊಂದಿಗೆ 88 ರನ್ ಬಾರಿಸಿ ಶತಕ ವಂಚಿತರಾಗಿ ನಿರ್ಗಮಿಸಿದರು.
1 / 9
ಏಕದಿನ ವಿಶ್ವಕಪ್ನ 33ನೇ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ವಿರಾಟ್ ಕೊಹ್ಲಿ (Virat Kohli) ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ ಅದ್ಭುತ ಇನಿಂಗ್ಸ್ ಆಡಿದರು.
2 / 9
ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ಗೆ ಒತ್ತು ನೀಡಿದ್ದ ಕೊಹ್ಲಿ, ಕ್ರೀಸ್ ಕಚ್ಚಿ ನಿಲ್ಲುತ್ತಿದ್ದಂತೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ 51 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದಾದ ಬಳಿಕ ಉತ್ತಮ ಆಟ ಮುಂದುವರೆಸಿದ ಕೊಹ್ಲಿ 94 ಎಸೆತಗಳಲ್ಲಿ 11 ಫೋರ್ಗಳೊಂದಿಗೆ 88 ರನ್ ಬಾರಿಸಿ ಶತಕ ವಂಚಿತರಾಗಿ ನಿರ್ಗಮಿಸಿದರು.
3 / 9
ಇದಾಗ್ಯೂ ಈ 88 ರನ್ಗಳೊಂದಿಗೆ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿರುವುದು ವಿಶೇಷ. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...
4 / 9
1000 ರನ್ ಸರದಾರ: ಈ ಅರ್ಧಶತಕದೊಂದಿಗೆ ಕ್ಯಾಲೆಂಡರ್ ವರ್ಷದಲ್ಲಿ ಅತ್ಯಧಿಕ ಬಾರಿ ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಸಚಿನ್ ಒಟ್ಟು 7 ಬಾರಿ ಈ ಸಾಧನೆ ಮಾಡಿದ್ದರು. ಇದೀಗ ವಿರಾಟ್ ಕೊಹ್ಲಿ 8ನೇ ಬಾರಿ ಒಂದು ವರ್ಷದೊಳಗೆ 1000 ರನ್ ಪೂರೈಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.
5 / 9
50+ ರನ್ ವೀರ: ಏಕದಿನ ವಿಶ್ವಕಪ್ನಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್ಗಳಿಸಿದ ವಿಶ್ವದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಕಿಂಗ್ ಕೊಹ್ಲಿ ಒಟ್ಟು 13 ಬಾರಿ 50+ ಸ್ಕೋರ್ಗಳಿಸಿ ಈ ದಾಖಲೆ ಬರೆದಿದ್ದಾರೆ. ಈ ಪಟ್ಟಿಯಲ್ಲಿ ಒಟ್ಟು 21 ಬಾರಿ 50+ ಸ್ಕೋರ್ಗಳಿಸಿರುವ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ.
6 / 9
50+ ರನ್ ಶೂರ: ಏಕದಿನ ವಿಶ್ವಕಪ್ನಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್ಗಳಿಸಿದ ಆರಂಭಿಕನಲ್ಲದ ಬ್ಯಾಟರ್ ಎಂಬ ವಿಶ್ವ ದಾಖಲೆ ಕೂಡ ಕಿಂಗ್ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ 12 ಬಾರಿ 50+ ಸ್ಕೋರ್ಗಳಿಸಿದ್ದ ಶ್ರೀಲಂಕಾದ ಕುಮಾರ ಸಂಗಾಕ್ಕರ ಹೆಸರಿನಲ್ಲಿತ್ತು. ಇದೀಗ 13ನೇ ಬಾರಿಗೆ 50+ ಸ್ಕೋರ್ಗಳಿಸುವ ಮೂಲಕ ಕಿಂಗ್ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.
7 / 9
50+ ರನ್ ಕಲೆಗಾರ: ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್ಗಳಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಕೊಹ್ಲಿ 2ನೇ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ 145 ಬಾರಿ 50+ ಸ್ಕೋರ್ಗಳಿಸಿರುವ ಸಚಿನ್ ಅಗ್ರಸ್ಥಾನದಲ್ಲಿದ್ದರೆ, 118 ಬಾರಿ ಈ ಸಾಧನೆ ಮಾಡಿರುವ ಕೊಹ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ.
8 / 9
8 ಸಾವಿರ ರನ್: ಈ ಅರ್ಧಶತಕದೊಂದಿಗೆ ಏಷ್ಯಾದಲ್ಲಿ ಅತೀ ವೇಗವಾಗಿ 8 ಸಾವಿರ ರನ್ ಪೂರೈಸಿದ ವಿಶ್ವ ದಾಖಲೆ ಕೂಡ ವಿರಾಟ್ ಕೊಹ್ಲಿ ಪಾಲಾಗಿದೆ.
9 / 9
4 ಸಾವಿರ ರನ್: ಶ್ರೀಲಂಕಾ ವಿರುದ್ಧ 4 ಸಾವಿರ ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ 5108 ರನ್ ಕಲೆಹಾಕಿರುವ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದರೆ, ಇದೀಗ 4 ಸಾವಿರಕ್ಕೂ ಅಧಿಕ ರನ್ಗಳಿಸುವ ಮೂಲಕ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ 2ನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.