AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹಮ್ಮದ್ ಅಜರುದ್ದೀನ್ ದಾಖಲೆ ಮುರಿದ ವಿರಾಟ್ ಕೊಹ್ಲಿ

ವೆಸ್ಟ್ ಇಂಡೀಸ್ ವಿರುದ್ಧ ಭಾರತ ಪರ ಅತಿ ಹೆಚ್ಚು ಏಕದಿನ ಪಂದ್ಯಗಳನ್ನಾಡಿದ ಆಟಗಾರ ಎಂಬ ಹೊಸ ದಾಖಲೆಯನ್ನು ವಿರಾಟ್ ಕೊಹ್ಲಿ ನಿರ್ಮಿಸಿದ್ದಾರೆ. ಅಜರುದ್ದೀನ್ ಅವರ 28 ವರ್ಷಗಳ ಹಳೆಯ ದಾಖಲೆಯನ್ನು ಮುರಿದ ಕೊಹ್ಲಿ, ಇದು ವೆಸ್ಟ್ ಇಂಡೀಸ್ ವಿರುದ್ಧ ಆಡಿದ ಅವರ 44 ನೇ ಏಕದಿನ ಪಂದ್ಯವಾಗಿದೆ. ಭಾರತದ ಇತರ ಶ್ರೇಷ್ಠ ಆಟಗಾರರಾದ ಕಪಿಲ್ ದೇವ್, ರಾಹುಲ್ ದ್ರಾವಿಡ್ ಮತ್ತು ಸಚಿನ್ ತೆಂಡೂಲ್ಕರ್ ಅವರನ್ನೂ ಕೊಹ್ಲಿ ಹಿಂದಿಕ್ಕಿದ್ದಾರೆ.

ಪೃಥ್ವಿಶಂಕರ
|

Updated on:Sep 27, 2026 | 5:56 PM

Share
ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಇಂದು ಅಂದರೆ ಸೆಪ್ಟೆಂಬರ್ 27 ರಂದು ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪರಸ್ಪರ ಮುಖಾಮುಖಿಯಾಗಿದ್ದವು. ಈ ಪಂದ್ಯದೊಂದಿಗೆ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಬಹಳ ದಿನಗಳ ನಂತರ ಕಾಣಿಸಿಕೊಂಡಿದ್ದರು. ಅಲ್ಲದೆ ಮೊದಲ ಏಕದಿನ ಪಂದ್ಯದಲ್ಲಿ ಮೈದಾನಕ್ಕಿಳಿದ ಕೊಹ್ಲಿ, ಭಾರತದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರ 28 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ(PC-PTI).

1 / 6
ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಪಂದ್ಯಗಳಲ್ಲಿ ಭಾರತ ಪರ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರನೆಂಬ ದಾಖಲೆ ಇದೀಗ ವಿರಾಟ್ ಕೊಹ್ಲಿ ಪಾಲಾಗಿದೆ. ಇದು ವೆಸ್ಟ್ ಇಂಡೀಸ್ ವಿರುದ್ಧ ವಿರಾಟ್ ಕೊಹ್ಲಿ ಅವರ 44 ನೇ ಏಕದಿನ ಪಂದ್ಯವಾಗಿದೆ(PC-PTI).

2 / 6
ಇದಕ್ಕೂ ಮೊದಲು, ಭಾರತದ ಪರ ವೆಸ್ಟ್ ಇಂಡೀಸ್ ವಿರುದ್ಧ ಅತಿ ಹೆಚ್ಚು ಏಕದಿನ ಪಂದ್ಯಗಳನ್ನು ಆಡಿದ ದಾಖಲೆ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರ ಹೆಸರಲ್ಲಿತ್ತು. ಅಜರ್, ವೆಸ್ಟ್ ಇಂಡೀಸ್ ವಿರುದ್ಧ 43 ಪಂದ್ಯಗಳನ್ನು ಆಡಿದ್ದರು(PC-RCB).

3 / 6
ಇನ್ನು ವೆಸ್ಟ್ ಇಂಡೀಸ್ ವಿರುದ್ಧ ಅತಿ ಹೆಚ್ಚು ಏಕದಿನ ಪಂದ್ಯಗಳನ್ನು ಆಡಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ, ಕಪಿಲ್ ದೇವ್ 42 ಪಂದ್ಯಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ರಾಹುಲ್ ದ್ರಾವಿಡ್ 40 ಪಂದ್ಯಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ ಮತ್ತು ಎಂಎಸ್ ಧೋನಿ 39 ಪಂದ್ಯಗಳೊಂದಿಗೆ ಐದನೇ ಸ್ಥಾನ ಹಾಗೂ ಸಚಿನ್ ತೆಂಡೂಲ್ಕರ್ 39 ಏಕದಿನ ಪಂದ್ಯಗಳನ್ನಾಡುವ ಮೂಲಕ 6ನೇ ಸ್ಥಾನದಲ್ಲಿದ್ದಾರೆ(PC-PTI).

4 / 6
ವೆಸ್ಟ್ ಇಂಡೀಸ್ ತಂಡದ ಮಾಜಿ ನಾಯಕ ಶಿವ್​ನರೇನ್ ಚಂದ್ರಪಾಲ್ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಅತಿ ಹೆಚ್ಚು ಏಕದಿನ ಪಂದ್ಯಗಳನ್ನು ಆಡಿದ ದಾಖಲೆಯನ್ನು ಹೊಂದಿದ್ದಾರೆ. ಅವರು 1994 ಮತ್ತು 2009 ರ ನಡುವೆ ಭಾರತದ ವಿರುದ್ಧ ಒಟ್ಟು 46 ಏಕದಿನ ಪಂದ್ಯಗಳನ್ನು ಆಡಿದ್ದಾರೆ(PC-PTI).

5 / 6
ಕೊಹ್ಲಿ ಪ್ರಸ್ತುತ ಸರಣಿಯ ಮೂರು ಪಂದ್ಯಗಳಲ್ಲಿ ಆಡಿದರೆ ಚಂದ್ರಪಾಲ್ ಅವರ ದಾಖಲೆಯನ್ನು ಸರಿಗಟ್ಟುತ್ತಾರೆ. ಏತನ್ಮಧ್ಯೆ, ವೆಸ್ಟ್ ಇಂಡೀಸ್ ವಿರುದ್ಧ ಅತಿ ಹೆಚ್ಚು ಏಕದಿನ ಪಂದ್ಯಗಳನ್ನು ಆಡಿದ ಆಟಗಾರರ ವಿಷಯಕ್ಕೆ ಬಂದಾಗ, ಪಾಕಿಸ್ತಾನದ ಮಾಜಿ ನಾಯಕರಾದ ಜಾವೇದ್ ಮಿಯಾಂದಾದ್ ಮತ್ತು ವಾಸಿಮ್ ಅಕ್ರಮ್ ಜಂಟಿಯಾಗಿ ಅಗ್ರಸ್ಥಾನದಲ್ಲಿದ್ದಾರೆ. ಇಬ್ಬರೂ ಕೆರಿಬಿಯನ್ ತಂಡದ ವಿರುದ್ಧ ತಲಾ 64 ಏಕದಿನ ಪಂದ್ಯಗಳನ್ನು ಆಡಿದ್ದಾರೆ(PC-PTI).

6 / 6

Published On - 5:55 pm, Sun, 27 September 26

ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ

ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು

ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ

ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ

ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್

ಕರ್ನಾಟಕದ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಕೇಂದ್ರ ತಂಡ

ಚಾಮರಾಜನಗರ ಆದಿವಾಸಿಗಳಿಗೆ ಆಹಾರ ಕಿಟ್ ಸ್ಥಗಿತ
ಚಾಮರಾಜನಗರ ಆದಿವಾಸಿಗಳಿಗೆ ಆಹಾರ ಕಿಟ್ ಸ್ಥಗಿತ
ಗದಗದ ಕೆಆರ್​ಡಿಎಲ್​ ಎಇಇ ಪತ್ರ ಬರೆದು ನಾಪತ್ತೆ ವಿಚಾರಕ್ಕೆ ಸಿಎಂ ಹೀಗಂದ್ರು

ಬಿಗ್ ಬಾಸ್ ಕನ್ನಡ: ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ಸುದೀಪ್ ಸ್ವಾಗತ

ಖರ್ಗೆ ಜತೆ ಏನೇನು ಮಾತುಕತೆಯಾಯ್ತು? ಸಿಎಂ ಡಿಕೆ ಶಿವಕುಮಾರ್ ಮಾಹಿತಿ