
ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಇಂದು ಅಂದರೆ ಸೆಪ್ಟೆಂಬರ್ 27 ರಂದು ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪರಸ್ಪರ ಮುಖಾಮುಖಿಯಾಗಿದ್ದವು. ಈ ಪಂದ್ಯದೊಂದಿಗೆ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಬಹಳ ದಿನಗಳ ನಂತರ ಕಾಣಿಸಿಕೊಂಡಿದ್ದರು. ಅಲ್ಲದೆ ಮೊದಲ ಏಕದಿನ ಪಂದ್ಯದಲ್ಲಿ ಮೈದಾನಕ್ಕಿಳಿದ ಕೊಹ್ಲಿ, ಭಾರತದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರ 28 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ(PC-PTI).
ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಪಂದ್ಯಗಳಲ್ಲಿ ಭಾರತ ಪರ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರನೆಂಬ ದಾಖಲೆ ಇದೀಗ ವಿರಾಟ್ ಕೊಹ್ಲಿ ಪಾಲಾಗಿದೆ. ಇದು ವೆಸ್ಟ್ ಇಂಡೀಸ್ ವಿರುದ್ಧ ವಿರಾಟ್ ಕೊಹ್ಲಿ ಅವರ 44 ನೇ ಏಕದಿನ ಪಂದ್ಯವಾಗಿದೆ(PC-PTI).
ಇದಕ್ಕೂ ಮೊದಲು, ಭಾರತದ ಪರ ವೆಸ್ಟ್ ಇಂಡೀಸ್ ವಿರುದ್ಧ ಅತಿ ಹೆಚ್ಚು ಏಕದಿನ ಪಂದ್ಯಗಳನ್ನು ಆಡಿದ ದಾಖಲೆ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರ ಹೆಸರಲ್ಲಿತ್ತು. ಅಜರ್, ವೆಸ್ಟ್ ಇಂಡೀಸ್ ವಿರುದ್ಧ 43 ಪಂದ್ಯಗಳನ್ನು ಆಡಿದ್ದರು(PC-RCB).
ಇನ್ನು ವೆಸ್ಟ್ ಇಂಡೀಸ್ ವಿರುದ್ಧ ಅತಿ ಹೆಚ್ಚು ಏಕದಿನ ಪಂದ್ಯಗಳನ್ನು ಆಡಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ, ಕಪಿಲ್ ದೇವ್ 42 ಪಂದ್ಯಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ರಾಹುಲ್ ದ್ರಾವಿಡ್ 40 ಪಂದ್ಯಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ ಮತ್ತು ಎಂಎಸ್ ಧೋನಿ 39 ಪಂದ್ಯಗಳೊಂದಿಗೆ ಐದನೇ ಸ್ಥಾನ ಹಾಗೂ ಸಚಿನ್ ತೆಂಡೂಲ್ಕರ್ 39 ಏಕದಿನ ಪಂದ್ಯಗಳನ್ನಾಡುವ ಮೂಲಕ 6ನೇ ಸ್ಥಾನದಲ್ಲಿದ್ದಾರೆ(PC-PTI).
ವೆಸ್ಟ್ ಇಂಡೀಸ್ ತಂಡದ ಮಾಜಿ ನಾಯಕ ಶಿವ್ನರೇನ್ ಚಂದ್ರಪಾಲ್ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಅತಿ ಹೆಚ್ಚು ಏಕದಿನ ಪಂದ್ಯಗಳನ್ನು ಆಡಿದ ದಾಖಲೆಯನ್ನು ಹೊಂದಿದ್ದಾರೆ. ಅವರು 1994 ಮತ್ತು 2009 ರ ನಡುವೆ ಭಾರತದ ವಿರುದ್ಧ ಒಟ್ಟು 46 ಏಕದಿನ ಪಂದ್ಯಗಳನ್ನು ಆಡಿದ್ದಾರೆ(PC-PTI).
ಕೊಹ್ಲಿ ಪ್ರಸ್ತುತ ಸರಣಿಯ ಮೂರು ಪಂದ್ಯಗಳಲ್ಲಿ ಆಡಿದರೆ ಚಂದ್ರಪಾಲ್ ಅವರ ದಾಖಲೆಯನ್ನು ಸರಿಗಟ್ಟುತ್ತಾರೆ. ಏತನ್ಮಧ್ಯೆ, ವೆಸ್ಟ್ ಇಂಡೀಸ್ ವಿರುದ್ಧ ಅತಿ ಹೆಚ್ಚು ಏಕದಿನ ಪಂದ್ಯಗಳನ್ನು ಆಡಿದ ಆಟಗಾರರ ವಿಷಯಕ್ಕೆ ಬಂದಾಗ, ಪಾಕಿಸ್ತಾನದ ಮಾಜಿ ನಾಯಕರಾದ ಜಾವೇದ್ ಮಿಯಾಂದಾದ್ ಮತ್ತು ವಾಸಿಮ್ ಅಕ್ರಮ್ ಜಂಟಿಯಾಗಿ ಅಗ್ರಸ್ಥಾನದಲ್ಲಿದ್ದಾರೆ. ಇಬ್ಬರೂ ಕೆರಿಬಿಯನ್ ತಂಡದ ವಿರುದ್ಧ ತಲಾ 64 ಏಕದಿನ ಪಂದ್ಯಗಳನ್ನು ಆಡಿದ್ದಾರೆ(PC-PTI).
Published On - 5:55 pm, Sun, 27 September 26