AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್ ಗೇಲ್​ ವಿಶ್ವ ದಾಖಲೆ ಮುರಿದ ವಿರಾಟ್ ಕೊಹ್ಲಿ

Virat Kohli Records: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 38 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 50 ರನ್ ಬಾರಿಸಿದ್ದರು. ಈ ಭರ್ಜರಿ ಇನಿಂಗ್ಸ್​ನೊಂದಿಗೆ ಕಿಂಗ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಮತ್ತೊಂದು ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 13, 2026 | 8:48 AM

Share
ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಹೆಸರಿಗೆ ಮತ್ತೊಂದು ವಿಶ್ವ ದಾಖಲೆ ಸೇರ್ಪಡೆಯಾಗಿದೆ. ಈ ಬಾರಿ ಕೊಹ್ಲಿ ಮುರಿದಿರುವುದು ಯುನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಅವರ ವಿಶ್ವ ದಾಖಲೆಯನ್ನು. ಅದು ಸಹ ಶತಕದ ಜೊತೆಯಾಟವಾಡುವ ಮೂಲಕ.

1 / 5
ಹೌದು, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ ಜೊತೆಗೂಡಿ 120 ರನ್​ಗಳ ಜೊತೆಯಾಟವಾಡಿದ್ದರು.

2 / 5
ಈ ಜೊತೆಯಾಟದೊಂದಿಗೆ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಶತಕದ ಜೊತೆಯಾಟವಾಡಿದ ಬ್ಯಾಟರ್ ಎಂಬ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಪಾಲಾಯಿತು. ಇದಕ್ಕೂ ಮುನ್ನ ಈ ವಿಶ್ವ ದಾಖಲೆ ವೆಸ್ಟ್ ಇಂಡೀಸ್​ನ ಎಡಗೈ ದಾಂಡಿಗ ಕ್ರಿಸ್ ಗೇಲ್ ಹೆಸರಿನಲ್ಲಿತ್ತು.

3 / 5
ವೆಸ್ಟ್ ಇಂಡೀಸ್ ಹಾಗೂ ವಿವಿಧ ಲೀಗ್​ಗಳಲ್ಲಿ 455 ಇನಿಂಗ್ಸ್ ಆಡಿರುವ ಕ್ರಿಸ್ ಗೇಲ್ 46 ಬಾರಿ ಶತಕದ ಜೊತೆಯಾಟವಾಡಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲಿ ಅತ್ಯಧಿಕ ಬಾರಿ ಸೆಂಚುರಿ ಪಾರ್ಟನರ್​ಶಿಪ್ ಆಡಿದ ಬ್ಯಾಟರ್ ಎನಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ಕೊಹ್ಲಿ ಮುರಿದಿದ್ದಾರೆ.

4 / 5
ಟೀಮ್ ಇಂಡಿಯಾ ಹಾಗೂ ಆರ್​ಸಿಬಿ ಪರ ಮಾತ್ರ ಟಿ20 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ಒಟ್ಟು 400 ಇನಿಂಗ್ಸ್​ ಆಡಿದ್ದಾರೆ. ಈ ವೇಳೆ 47 ಬಾರಿ ಶತಕದ ಜೊತೆಯಾಟವಾಡಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಶತಕದ ಜೊತೆಯಾಟವಾಡಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 5
Follow Us