Virat Kohli: ಧೋನಿಯ ದಾಖಲೆ ಮುರಿದ ವಿರಾಟ್ ಕೊಹ್ಲಿ

|

Updated on: Oct 17, 2024 | 12:03 PM

Virat Kohli - MS Dhoni: ಮಹೇಂದ್ರ ಸಿಂಗ್ ಧೋನಿ ಟೀಮ್ ಇಂಡಿಯಾ ಪರ ಒಟ್ಟು 538 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 15 ಶತಕಗಳೊಂದಿಗೆ ಒಟ್ಟು 17092 ರನ್ ಕಲೆಹಾಕಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಪಂದ್ಯಗಳನ್ನಾಡಿದ ವಿಶ್ವದ 6ನೇ ಆಟಗಾರ ಎನಿಸಿಕೊಂಡಿದ್ದಾರೆ. ಇದೀಗ ಧೋನಿಯನ್ನು ವಿರಾಟ್ ಕೊಹ್ಲಿ ಹಿಂದಿಕ್ಕಿದ್ದಾರೆ.

1 / 6
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ (Virat Kohli) ವಿಶೇಷ ದಾಖಲೆ ಬರೆದಿದ್ದಾರೆ. ಈ ದಾಖಲೆಯೊಂದಿಗೆ ಕಿಂಗ್ ಕೊಹ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯನ್ನು ಹಿಂದಿಕ್ಕಿರುವುದು ವಿಶೇಷ.

2 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡ ಉತ್ತಮ ಆರಂಭ ಪಡೆದಿರಲಿಲ್. ಆರಂಭಿಕ ಆಟಗಾರ ರೋಹಿತ್ ಶರ್ಮಾ ಕೇವಲ 2 ರನ್​ಗಳಿಸಿ ಔಟಾದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ವಿರಾಟ್ ಕೊಹ್ಲಿ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡರು.

3 / 6
ಅಂದರೆ ಟೀಮ್ ಇಂಡಿಯಾ ಪರ ಅತೀ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಆಟಗಾರರ ಪಟ್ಟಿಯಲ್ಲಿ ಇದೀಗ ವಿರಾಟ್ ಕೊಹ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಮಹೇಂದ್ರ ಸಿಂಗ್ ಧೋನಿಯ ಹೆಸರಿನಲ್ಲಿತ್ತು.

4 / 6
2004 ರಿಂದ 2019 ರವರೆಗೆ ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದ ಧೋನಿ ಒಟ್ಟು 535 ಪಂದ್ಯಗಳನ್ನಾಡಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತೀ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ 2ನೇ ಆಟಗಾರ ಎನಿಸಿಕೊಂಡಿದ್ದರು.

5 / 6
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ವಿರಾಟ್ ಕೊಹ್ಲಿ ಯಶಸ್ವಿಯಾಗಿದ್ದಾರೆ. ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಕಿಂಗ್ ಕೊಹ್ಲಿ ಒಟ್ಟು 536 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಭಾರತದ ಪರ ಅತ್ಯಧಿಕ ಇಂಟರ್​ನ್ಯಾಷನಲ್ ಮ್ಯಾಚ್​ಗಳನ್ನು ಆಡಿದ 2ನೇ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.

6 / 6
ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್. 1989 ರಿಂದ 2013 ರವರೆಗೆ ಭಾರತ ತಂಡವನ್ನು ಪ್ರತಿನಿಧಿಸಿದ್ದ ಸಚಿನ್ ಒಟ್ಟು 664 ಪಂದ್ಯಗಳನ್ನಾಡಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಪಂದ್ಯಗಳನ್ನಾಡಿದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.