Virat Kohli: ದಾಖಲೆಗಳ ಮೇಲೆ ದಾಖಲೆ ಬರೆದ ಕಿಂಗ್ ಕೊಹ್ಲಿ

Edited By:

Updated on: Oct 08, 2023 | 9:51 PM

Virat Kohli Records: ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ 75 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿದರು. ಇದರೊಂದಿಗೆ ಕಿಂಗ್ ಕೊಹ್ಲಿ ಹೆಸರಿಗೆ ಹಲವು ದಾಖಲೆಗಳು ಸೇರ್ಪಡೆಯಾಯಿತು. ಆ ದಾಖಲೆಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

1 / 7
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಆ ದಾಖಲೆಗಳಲ್ಲಿ ಕೆಲವು ವಿಶ್ವ ದಾಖಲೆ ಎಂಬುದು ವಿಶೇಷ.

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಆ ದಾಖಲೆಗಳಲ್ಲಿ ಕೆಲವು ವಿಶ್ವ ದಾಖಲೆ ಎಂಬುದು ವಿಶೇಷ.

2 / 7

ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ 75 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿದರು. ಇದರೊಂದಿಗೆ ಕಿಂಗ್ ಕೊಹ್ಲಿ ಹೆಸರಿಗೆ ಹಲವು ದಾಖಲೆಗಳು ಸೇರ್ಪಡೆಯಾಯಿತು. ಆ ದಾಖಲೆಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

3 / 7

11 ಸಾವಿರ ರನ್: ಏಕದಿನ ಕ್ರಿಕೆಟ್​ನಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದು 11 ಸಾವಿರ ರನ್ ಪೂರೈಸಿದ ಮೊದಲ ಭಾರತೀಯ ಎಂಬ ದಾಖಲೆಯನ್ನು ವಿರಾಟ್ ಕೊಹ್ಲಿ ನಿರ್ಮಿಸಿದ್ದಾರೆ.

4 / 7

ಅತ್ಯಧಿಕ ಫಿಫ್ಟಿ+: ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ಫಿಫ್ಟಿ ಪ್ಲಸ್​ ಸ್ಕೋರ್​ ಗಳಿಸಿದ ಆರಂಭಿಕನಲ್ಲದ ಬ್ಯಾಟರ್​ ಎಂಬ ದಾಖಲೆ ಇದೀಗ ಕಿಂಗ್ ಕೊಹ್ಲಿಯ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾದ ಕುಮಾರ ಸಂಗಾಕ್ಕಾರ ಹೆಸರಿನಲ್ಲಿತ್ತು. ಸಂಗಾಕ್ಕರ 369 ಇನಿಂಗ್ಸ್​ಗಳಲ್ಲಿ 112 ಬಾರಿ ಫಿಫ್ಟಿ ಪ್ಲಸ್ ಸ್ಕೋರ್​ಗಳಿಸಿದ್ದರು. ಇದೀಗ ಕೇವಲ 262 ಇನಿಂಗ್ಸ್​ಗಳ ಮೂಲಕ ವಿರಾಟ್ ಕೊಹ್ಲಿ 113 ಬಾರಿ ಅರ್ಧಶತಕಕ್ಕಿಂತ ಹೆಚ್ಚಿನ ಸ್ಕೋರ್​ ಗಳಿಸಿದ್ದಾರೆ.

5 / 7

ಅತ್ಯಧಿಕ ರನ್: ಐಸಿಸಿ ವೈಟ್​ ಬಾಲ್​ ಟೂರ್ನಿಗಳಲ್ಲಿ ಭಾರತದ ಪರ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ಇದೀಗ ವಿರಾಟ್ ಕೊಹ್ಲಿ ಹೆಸರಿಗೆ ಸೇರ್ಪಡೆಯಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಸಚಿನ್ ಐಸಿಸಿ ಟೂರ್ನಿಗಳಲ್ಲಿ ಒಟ್ಟು 2719 ರನ್ ಕಲೆಹಾಕಿದ್ದರು. ಇದೀಗ ಕೊಹ್ಲಿ 2730+ ರನ್ ಗಳಿಸಿದ್ದಾರೆ.

6 / 7

ವಿಶ್ವಕಪ್​ನ ರನ್ ಸರದಾರ: ಏಕದಿನ ವಿಶ್ವಕಪ್​ನಲ್ಲಿ ಭಾರತದ ಪರ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ 2278 ರನ್ ಕಲೆಹಾಕಿರುವ ಸಚಿನ್ ಅಗ್ರಸ್ಥಾನದಲ್ಲಿದ್ದರೆ, 1050+ ಸ್ಕೋರ್​ಗಳಿಸಿರುವ ಕೊಹ್ಲಿ 2ನೇ ಸ್ಥಾನದಲ್ಲಿದ್ದಾರೆ.

7 / 7

ಒಟ್ಟಿನಲ್ಲಿ ವಿಶ್ವಕಪ್​ನ ಮೊದಲ ಪಂದ್ಯದಲ್ಲೇ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಹೀಗಾಗಿ ಮುಂಬರುವ ಪಂದ್ಯಗಳ ಮೂಲಕ ಮತ್ತಷ್ಟು ವಿಶ್ವ ದಾಖಲೆಗಳನ್ನು ನಿರೀಕ್ಷಿಸಬಹುದು.

TV9 Web

TV9 Kannada

Read More
Loading...
Unable to load recommendations.
Follow Us