Updated on: Dec 10, 2022 | 2:51 PM
ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಬಾಂಗ್ಲಾದೇಶ್ ವಿರುದ್ಧ ಭರ್ಜರಿ ಶತಕ ಬಾರಿಸುವ ಮೂಲಕ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಶತಕದ ಸರದಾರನಾಗಿ ಎಂಬುದು ವಿಶೇಷ.
ಅಂದರೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಶತಕ ಬಾರಿಸಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಇದೀಗ ಕೊಹ್ಲಿ 2ನೇ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಹೆಸರಿನಲ್ಲಿತ್ತು.
ಆಸ್ಟ್ರೇಲಿಯಾ ಪರ 668 ಇನಿಂಗ್ಸ್ ಆಡಿದ್ದ ಪಾಂಟಿಂಗ್ 71 ಶತಕ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ವಿರಾಟ್ ಕೊಹ್ಲಿ ಈ ದಾಖಲೆಯನ್ನು ಮುರಿದು ಮುನ್ನುಗ್ಗಿರುವುದು ವಿಶೇಷ.
ಕಿಂಗ್ ಕೊಹ್ಲಿ 535 ಇನಿಂಗ್ಸ್ಗಳ ಮೂಲಕ ಒಟ್ಟು 72 ಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಶತಕ ಬಾರಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಸದ್ಯ ಅಗ್ರಸ್ಥಾನದಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಇದ್ದಾರೆ. ಸಚಿನ್ 782 ಇನಿಂಗ್ಸ್ ಮೂಲಕ 100 ಶತಕ ಬಾರಿಸಿದ ವಿಶ್ವದ ಏಕೈಕ ಬ್ಯಾಟರ್ ಆಗಿ ಗುರುತಿಸಿಕೊಂಡಿದ್ದಾರೆ.
ಸಚಿನ್ ತೆಂಡೂಲ್ಕರ್ ಅವರ ವಿಶ್ವ ದಾಖಲೆ ಮುರಿಯಲು ವಿರಾಟ್ ಕೊಹ್ಲಿಗೆ ಇನ್ನು 29 ಶತಕಗಳ ಅವಶ್ಯಕತೆಯಿದೆ. ಈ ದಾಖಲೆಯನ್ನು ಮುರಿದು ಇತಿಹಾಸ ನಿರ್ಮಿಸಲಿದ್ದಾರಾ ಕಾದು ನೋಡಬೇಕಿದೆ,