Updated on: Oct 23, 2022 | 10:24 PM
ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಪಾಕಿಸ್ತಾನ್ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಪಾಕ್ ವಿರುದ್ಧ ಕೇವಲ 53 ಎಸೆತಗಳಲ್ಲಿ 82 ರನ್ ಚಚ್ಚಿದ ಕೊಹ್ಲಿ ಟೀಮ್ ಇಂಡಿಯಾಗೆ 4 ವಿಕೆಟ್ಗಳ ರೋಚಕ ಜಯ ತಂದುಕೊಟ್ಟರು. ಈ ಅರ್ಧಶತಕದ ಮೂಲಕ ರೋಹಿತ್ ಶರ್ಮಾ ಹಾಗೂ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನೂ ಕೂಡ ಮುರಿದರು.
ಪಾಕಿಸ್ತಾನ್ ವಿರುದ್ಧ ಭರ್ಜರಿ ಅರ್ಧಶತಕ ಬಾರಿಸುವುದರೊಂದಿಗೆ ಐಸಿಸಿ ಟೂರ್ನಿಗಳಲ್ಲಿ ಅತ್ಯಧಿಕ 50+ ರನ್ ಬಾರಿಸಿದ ವಿಶೇಷ ದಾಖಲೆ ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿತ್ತು.
ಸಚಿನ್ ತೆಂಡೂಲ್ಕರ್ ಐಸಿಸಿ ಟೂರ್ನಿಗಳಲ್ಲಿ ಒಟ್ಟು 23 ಬಾರಿ 50+ ರನ್ ಕಲೆಹಾಕಿದ್ದಾರೆ. ಇದರಲ್ಲಿ 7 ಶತಕಗಳಿದ್ದರೆ, 16 ಅರ್ಧಶತಕಗಳಿವೆ. ಇದೀಗ ವಿರಾಟ್ ಕೊಹ್ಲಿ ಈ ದಾಖಲೆಯನ್ನು ಮುರಿದಿದ್ದಾರೆ.
ಕಿಂಗ್ ಕೊಹ್ಲಿ ಐಸಿಸಿ ಟೂರ್ನಿಯಲ್ಲಿ ಒಟ್ಟು 24 ಬಾರಿ 50+ ಸ್ಕೋರ್ ಬಾರಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಕೊಹ್ಲಿಯ ಈ ಅಬ್ಬರದ ದಾಖಲೆಯಲ್ಲಿ 2 ಶತಕ ಹಾಗೂ 22 ಅರ್ಧಶತಕಗಳಿವೆ. ಈ ಮೂಲಕ ಸಚಿನ್ ತೆಂಡೂಲ್ಕರ್ ಅವರ ವಿಶೇಷ ದಾಖಲೆಯನ್ನು ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.
ಇನ್ನು ಪಾಕಿಸ್ತಾನ ವಿರುದ್ಧದ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ದಾಖಲೆ ಬರೆದರು.
ಈ ಹಿಂದೆ ಈ ದಾಖಲೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (3741) ಅವರ ಹೆಸರಿನಲ್ಲಿತ್ತು. ಇದೀಗ ವಿರಾಟ್ ಕೊಹ್ಲಿ 3794 ರನ್ಗಳಿಸುವ ಮೂಲಕ ನಂಬರ್ 1 ಸ್ಥಾನಕ್ಕೇರಿದ್ದಾರೆ.
ವಿರಾಟ್ ಕೊಹ್ಲಿ