AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಸಚಿನ್ ದಾಖಲೆ ಮುರಿದರೂ ಇತಿಹಾಸ ಸೃಷ್ಟಿಸುವ ಅವಕಾಶ ಕೈಚೆಲ್ಲಿದ ವಿರಾಟ್

Virat Kohli Breaks Sachin's Record: ರಾಜ್‌ಕೋಟ್‌ನಲ್ಲಿ ಭಾರತ-ನ್ಯೂಜಿಲೆಂಡ್ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ಅವರ ನ್ಯೂಜಿಲೆಂಡ್ ವಿರುದ್ಧದ ಗರಿಷ್ಠ ರನ್‌ಗಳ ದಾಖಲೆಯನ್ನು ಮುರಿದು ಇತಿಹಾಸ ಸೃಷ್ಟಿಸಿದ್ದಾರೆ. 1773 ರನ್ ಗಳಿಸುವ ಮೂಲಕ ಈ ಸಾಧನೆ ಮಾಡಿದರು. ಆದಾಗ್ಯೂ, ಸತತ ಆರು ಅರ್ಧಶತಕಗಳ ಮತ್ತೊಂದು ದಾಖಲೆ ನಿರ್ಮಿಸುವ ಅವಕಾಶವನ್ನು ಕಳೆದುಕೊಂಡರು. ಈ ಪಂದ್ಯದಲ್ಲಿ ಅವರು 23 ರನ್‌ಗಳಿಗೆ ಔಟಾಗುವ ಮೂಲಕ ನಿರಾಸೆ ಮೂಡಿಸಿದರು.

ಪೃಥ್ವಿಶಂಕರ
|

Updated on: Jan 14, 2026 | 5:54 PM

Share
ರಾಜ್‌ಕೋಟ್‌ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಆದಾಗ್ಯೂ ಕೊಹ್ಲಿ ಮತ್ತೊಂದು ಇತಿಹಾಸ ಸೃಷ್ಟಿಸುವ ಅವಕಾಶವನ್ನು ಕೈಚೆಲ್ಲಿದ್ದಾರೆ. ಮೂರನೇ ಏಕದಿನದಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ವಿರಾಟ್, ಸಚಿನ್ ತೆಂಡೂಲ್ಕರ್ ಅವರ ಪ್ರಮುಖ ದಾಖಲೆಯೊಂದನ್ನು ಮುರಿದಿದ್ದಾರೆ.

1 / 6
ಈ ಪಂದ್ಯದಲ್ಲಿ ಎಂದಿನಂತೆ ಮೂರನೇ ಕ್ರಮಾಂಕದಲ್ಲಿ ಬಂದ ವಿರಾಟ್ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ಅದ್ಭುತ ಬೌಂಡರಿ ಬಾರಿಸಿದರು. ಈ ಬೌಂಡರಿಯೊಂದಿಗೆ ಕೊಹ್ಲಿ, ನ್ಯೂಜಿಲೆಂಡ್ ವಿರುದ್ಧ ಏಕದಿನ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡರು. ಆದರೆ ಬೇಗ ವಿಕೆಟ್ ಒಪ್ಪಿಸುವ ಮೂಲಕ ಮತ್ತೊಂದು ಇತಿಹಾಸ ನಿರ್ಮಿಸುವ ಅವಕಾಶ ಕೈಚೆಲ್ಲಿದರು.

2 / 6
ವಾಸ್ತವವಾಗಿ ವಿರಾಟ್​ಗೂ ಮೊದಲು ಈ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿತ್ತು. ಸಚಿನ್ ತೆಂಡೂಲ್ಕರ್ ಕಿವೀಸ್ ವಿರುದ್ಧದ ಏಕದಿನ ಪಂದ್ಯಗಳಲ್ಲಿ 1750 ರನ್ ಕಲೆಹಾಕಿದ್ದರು. ಇದೀಗ ವಿರಾಟ್ ಈ ದಾಖಲೆಯನ್ನು ಮೀರಿ ಹೊಸ ದಾಖಲೆ ನಿರ್ಮಿಸಿದ್ದಾರೆ. ವಿರಾಟ್ ಕೊಹ್ಲಿ ಈಗ ನ್ಯೂಜಿಲೆಂಡ್ ವಿರುದ್ಧ 1773 ಏಕದಿನ ರನ್ ಗಳಿಸಿದ್ದಾರೆ.

3 / 6
ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 29 ಎಸೆತಗಳಲ್ಲಿ 23 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇದರಲ್ಲಿ ಎರಡು ಬೌಂಡರಿಗಳು ಸೇರಿದ್ದವು. ಇದಕ್ಕೂ ಮೊದಲು, ಅವರು ಸತತ ಐದು ಏಕದಿನ ಇನ್ನಿಂಗ್ಸ್‌ಗಳಲ್ಲಿ 50+ ರನ್​ಗಳ ಇನ್ನಿಂಗ್ಸ್ ಆಡಿದ್ದರು. ಆದರೆ ಇಂದಿನ ಪಂದ್ಯದಲ್ಲಿ ಅದನ್ನು ಮುಂದುವರೆಸಲು ಕೊಹ್ಲಿಗೆ ಸಾಧ್ಯವಾಗಲಿಲ್ಲ.

4 / 6
ಒಂದು ವೇಳೆ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ 50 ರನ್ ಗಳಿಸಿದ್ದರೆ, ಸತತ ಆರು ಏಕದಿನ ಇನ್ನಿಂಗ್ಸ್‌ಗಳಲ್ಲಿ 50+ ರನ್ ಗಳಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಿದ್ದರು. ಆದಾಗ್ಯೂ, ಕೊಹ್ಲಿ ಈ ಇತಿಹಾಸ ನಿರ್ಮಿಸುವ ಅವಕಾಶವನ್ನು ಕಳೆದುಕೊಂಡರು.

5 / 6
ನ್ಯೂಜಿಲೆಂಡ್ ವೇಗಿ ಕ್ರಿಶ್ಚಿಯನ್ ಕ್ಲಾರ್ಕ್ ಅದ್ಭುತ ಬೌಲಿಂಗ್ ಮಾಡಿದರು. ವಿರಾಟ್ ಗೂ ಮುನ್ನ ಕ್ಲಾರ್ಕ್ ರೋಹಿತ್ ಶರ್ಮಾ ಮತ್ತು ಶ್ರೇಯಸ್ ಅಯ್ಯರ್ ಅವರ ವಿಕೆಟ್ ಗಳನ್ನು ಸಹ ಪಡೆದಿದ್ದರು. ವಾಸ್ತವವಾಗಿ ರಾಜ್ ಕೋಟ್ ಪಿಚ್ ಬ್ಯಾಟ್ಸ್​ಮನ್​ಗಳಿಗೆ ಸಹಾಯ ಮಾಡುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಇಂದಿನ ಪಂದ್ಯದಲ್ಲಿ ಭಾರತ ಬ್ಯಾಟ್ಸ್​ಮನ್​ಗಳು ರನ್ ಗಳಿಸಲು ಹೆಣಗಾಡಿದರು.

6 / 6