Virat Kohli: ಸಚಿನ್ ಅವರ 3 ವಿಶ್ವ ದಾಖಲೆ ಮುರಿದ ಕಿಂಗ್ ಕೊಹ್ಲಿ

| Updated By: ಝಾಹಿರ್ ಯೂಸುಫ್

Updated on: Nov 15, 2023 | 10:31 PM

Virat Kohli Records: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಮೂಲಕ 106 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದೊಂದಿಗೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ 3 ವಿಶ್ವ ದಾಖಲೆಗಳನ್ನು ತಮ್ಮದಾಗಿಸಿಕೊಂಡರು. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

1 / 5
ಏಕದಿನ ವಿಶ್ವಕಪ್​ನ ಮೊದಲ ಸೆಮಿಫೈನಲ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಹಲವು ವಿಶ್ವ ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ದಾಖಲೆಗಳನ್ನು ಮುರಿಯುವ ಮೂಲಕ ಎಂಬುದು ವಿಶೇಷ.

2 / 5
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಮೂಲಕ 106 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದೊಂದಿಗೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ 3 ವಿಶ್ವ ದಾಖಲೆಗಳನ್ನು ತಮ್ಮದಾಗಿಸಿಕೊಂಡರು. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

3 / 5
1- ಈ ಪಂದ್ಯದಲ್ಲಿ ಶತಕ ಪೂರೈಸುವುದರೊಂದಿಗೆ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ಶತಕ ಬಾರಿಸಿದ ವಿಶ್ವ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ 49 ಶತಕಗಳನ್ನು ಬಾರಿಸಿದ್ದ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಇದೀಗ 50ನೇ ಸೆಂಚುರಿ ಸಿಡಿಸುವ ಮೂಲಕ ಕಿಂಗ್ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

4 / 5
2- ಈ ಮ್ಯಾಚ್​ನಲ್ಲಿ ವಿರಾಟ್ ಕೊಹ್ಲಿ 80 ರನ್ ಪೂರೈಸುವುದರೊಂದಿಗೆ ಏಕದಿನ ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ನಿರ್ಮಿಸಿದರು. ಈ ದಾಖಲೆ ಕೂಡ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. 2003 ರ ವಿಶ್ವಕಪ್​ನಲ್ಲಿ ಸಚಿನ್ 673 ರನ್​ ಬಾರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಈ ಬಾರಿಯ ವಿಶ್ವಕಪ್​ನಲ್ಲಿ 711 ರನ್​ ಕಲೆಹಾಕುವ ಮೂಲಕ ಕಿಂಗ್ ಕೊಹ್ಲಿ ಈ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 5
3- ಈ ಬಾರಿಯ ವಿಶ್ವಕಪ್​ನಲ್ಲಿ ವಿರಾಟ್ ಕೊಹ್ಲಿ 3 ಶತಕ ಹಾಗೂ 5 ಅರ್ಧಶತಕಗಳನ್ನು ಬಾರಿಸಿ ಮಿಂಚಿದ್ದಾರೆ. ಈ ಮೂಲಕ ಏಕದಿನ ವಿಶ್ವಕಪ್​ ಆವೃತ್ತಿಯೊಂದರಲ್ಲಿ ಅತ್ಯಧಿಕ 50+ ಸ್ಕೋರ್​ಗಳಿಸಿದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. 2003 ರ ವಿಶ್ವಕಪ್​ನಲ್ಲಿ ಸಚಿನ್ ತೆಂಡೂಲ್ಕರ್ 7 ಬಾರಿ 50+ ಸ್ಕೋರ್​ಗಳಿಸಿದ್ದರು. ಇದೀಗ 8ನೇ ಬಾರಿ 50+ ಸ್ಕೋರ್​ಗಳಿಸುವ ಮೂಲಕ ಕಿಂಗ್ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ 3 ವಿಶ್ವ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.