8ನೇ ಬಾರಿ ರನ್ ಸರದಾರ…ಸಚಿನ್ ವಿಶ್ವ ದಾಖಲೆ ಮುರಿದ ಕಿಂಗ್ ಕೊಹ್ಲಿ
TV9 Web | Updated By: ಝಾಹಿರ್ ಯೂಸುಫ್
Updated on:
Dec 02, 2023 | 9:07 PM
Virat Kohli Records: ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಈಗಾಗಲೇ 1377 ರನ್ ಕಲೆಹಾಕಿರುವ ಕಿಂಗ್ ಕೊಹ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಶುಭ್ಮನ್ ಗಿಲ್ (1584) ನಂತರದ ಸ್ಥಾನದಲ್ಲಿದ್ದಾರೆ.
1 / 5
ಭಾರತ-ಸೌತ್ ಆಫ್ರಿಕಾ ನಡುವಣ 3 ಪಂದ್ಯಗಳ ಏಕದಿನ ಸರಣಿಯು ಡಿಸೆಂಬರ್ 17 ರಿಂದ ಶುರುವಾಗಲಿದೆ. ಆದರೆ ಈ ಸರಣಿಯಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುತ್ತಿಲ್ಲ. ವಿಶ್ರಾಂತಿಯ ಸಲುವಾಗಿ ಕಿಂಗ್ ಕೊಹ್ಲಿ ಸೌತ್ ಆಫ್ರಿಕಾ ವಿರುದ್ಧದ ಸೀಮಿತ ಓವರ್ಗಳ ಸರಣಿಯಿಂದ ಹೊರಗುಳಿದಿದ್ದಾರೆ.
2 / 5
ಇದಾಗ್ಯೂ 2023 ರಲ್ಲಿ ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಈಗಾಗಲೇ 1377 ರನ್ ಕಲೆಹಾಕಿರುವ ಕಿಂಗ್ ಕೊಹ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಶುಭ್ಮನ್ ಗಿಲ್ (1584) ನಂತರದ ಸ್ಥಾನದಲ್ಲಿದ್ದಾರೆ.
3 / 5
ವಿಶೇಷ ಎಂದರೆ ಈ 1377 ರನ್ಗಳೊಂದಿಗೆ ಏಕದಿನ ಕ್ರಿಕೆಟ್ನಲ್ಲಿ ಕ್ಯಾಲೆಂಡರ್ ವರ್ಷಗಳಲ್ಲಿ ಅತ್ಯಧಿಕ ಬಾರಿ 1000+ ರನ್ ಕಲೆಹಾಕಿದ ವಿಶೇಷ ದಾಖಲೆಯೊಂದು ಕಿಂಗ್ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು.
4 / 5
ಸಚಿನ್ ತೆಂಡೂಲ್ಕರ್ 7 ಬಾರಿ ಏಕದಿನ ಕ್ರಿಕೆಟ್ನ ಕ್ಯಾಲೆಂಡರ್ ವರ್ಷದಲ್ಲಿ ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ್ದರು. 1994, 1996, 1997, 1998, 2000, 2003 ಮತ್ತು 2007ರಲ್ಲಿ ಸಾವಿರಕ್ಕೂ ಅಧಿಕ ರನ್ ಪೇರಿಸುವ ಮೂಲಕ ಸಚಿನ್ ಈ ವಿಶ್ವ ದಾಖಲೆ ಬರೆದಿದ್ದರು.
5 / 5
ಇದೀಗ ವಿರಾಟ್ ಕೊಹ್ಲಿ 8ನೇ ಬಾರಿಗೆ ಕ್ಯಾಲೆಂಡರ್ ವರ್ಷದಲ್ಲಿ ಸಾವಿರಕ್ಕೂ ಅಧಿಕ ರನ್ ಪೇರಿಸಿದ್ದಾರೆ. ಕಿಂಗ್ ಕೊಹ್ಲಿ 2011, 2012, 2013, 2014, 2017, 2018, 2019 ಮತ್ತು 2023 ರಲ್ಲಿ ಈ ಸಾಧನೆ ಮಾಡಿದ್ದಾರೆ. ಈ ಮೂಲಕ ಸಚಿನ್ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.