AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಒಂದು ರನ್​​ನೊಂದಿಗೆ ವರ್ಲ್ಡ್​ ರೆಕಾರ್ಡ್ ಮುರಿದ ವಿರಾಟ್ ಕೊಹ್ಲಿ

Virat Kohli: ಬೆಂಗಳೂರಿನಲ್ಲಿ ನಡೆದ ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಂಧ್ರ ತಂಡವು 50 ಓವರ್​ಗಳಲ್ಲಿ 298 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ದೆಹಲಿ ಪರ ವಿರಾಟ್ ಕೊಹ್ಲಿ 101 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 14 ಫೋರ್​ಗಳೊಂದಿಗೆ 131 ರನ್ ಬಾರಿಸಿದ್ದರು. ಈ ಶತಕದ ನೆರವಿನೊಂದಿಗೆ ದೆಹಲಿ ತಂಡ 37.4 ಓವರ್​ಗಳಲ್ಲಿ 300 ರನ್​ಗಳಿಸಿ 6 ವಿಕೆಟ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Dec 25, 2025 | 8:25 AM

Share
ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ವಿರಾಟ್ ಕೊಹ್ಲಿ (Virat Kohli) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ವರ್ಲ್ಡ್​ ರೆಕಾರ್ಡ್ ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಬೆಂಗಳೂರಿನ ಸಿಒಇ ಮೈದಾನದಲ್ಲಿ ನಡೆದ ಆಂಧ್ರ ವಿರುದ್ಧದ ಪಂದ್ಯದಲ್ಲಿ ದೆಹಲಿ ಪರ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಈ ಪಂದ್ಯದಲ್ಲಿ ಗಳಿಸಿದ ಮೊದಲ ರನ್​​ನೊಂದಿಗೆ ಕಿಂಗ್ ಕೊಹ್ಲಿ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು.

2 / 5
ಅಂದರೆ ಆಂಧ್ರ ವಿರುದ್ಧದ ಪಂದ್ಯಕ್ಕೂ ಮುನ್ನ ಲಿಸ್ಟ್​ ಎ (ಏಕದಿನ) ಕ್ರಿಕೆಟ್​ನಲ್ಲಿ 15999 ರನ್​ಗಳಿಸಿದ್ದ ಕೊಹ್ಲಿ ಒಂದು ರನ್​ಗಳಿಸುವ ಮೂಲಕ 16 ಸಾವಿರ ರನ್​ಗಳ ಸಾಧನೆ ಮಾಡಿದರು. ಈ ಮೂಲಕ ಲಿಸ್ಟ್ ಎ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 16000 ರನ್​ಗಳಿಸಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು.

3 / 5
ಇದಕ್ಕೂ ಮುನ್ನ ಈ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿತ್ತು. ಸಚಿನ್ ತೆಂಡೂಲ್ಕರ್ ಲಿಸ್ಟ್ ಎ ಕ್ರಿಕೆಟ್​ನಲ್ಲಿ 391 ಇನಿಂಗ್ಸ್​ಗಳ ಮೂಲಕ 16000 ರನ್ ಪೂರೈಸಿದ್ದರು. ಈ ಮೂಲಕ ವಿಶ್ವ ದಾಖಲೆಯನ್ನು ನಿರ್ಮಿಸಿದ್ದರು.

4 / 5
ಇದೀಗ ಕೇವಲ 330 ಇನಿಂಗ್ಸ್​ಗಳ ಮೂಲಕ ವಿರಾಟ್ ಕೊಹ್ಲಿ ಲಿಸ್ಟ್ ಎ ಕ್ರಿಕೆಟ್​ನಲ್ಲಿ 16000 ರನ್​ಗಳಿಸಿದ್ದಾರೆ. ಈ ಮೂಲಕ ಏಕದಿನ ಪಂದ್ಯಗಳಲ್ಲಿ ಅತೀ ಕಡಿಮೆ ಇನಿಂಗ್ಸ್​ಗಳ ಮೂಲಕ 16 ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.

5 / 5
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ

ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು

ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ

ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ

ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?

ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ

ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್

ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ

ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ

ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್