
ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ವಿರಾಟ್ ಕೊಹ್ಲಿ (Virat Kohli) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ವರ್ಲ್ಡ್ ರೆಕಾರ್ಡ್ ಮುರಿಯುವ ಮೂಲಕ ಎಂಬುದು ವಿಶೇಷ.

ಬೆಂಗಳೂರಿನ ಸಿಒಇ ಮೈದಾನದಲ್ಲಿ ನಡೆದ ಆಂಧ್ರ ವಿರುದ್ಧದ ಪಂದ್ಯದಲ್ಲಿ ದೆಹಲಿ ಪರ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಈ ಪಂದ್ಯದಲ್ಲಿ ಗಳಿಸಿದ ಮೊದಲ ರನ್ನೊಂದಿಗೆ ಕಿಂಗ್ ಕೊಹ್ಲಿ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು.

ಅಂದರೆ ಆಂಧ್ರ ವಿರುದ್ಧದ ಪಂದ್ಯಕ್ಕೂ ಮುನ್ನ ಲಿಸ್ಟ್ ಎ (ಏಕದಿನ) ಕ್ರಿಕೆಟ್ನಲ್ಲಿ 15999 ರನ್ಗಳಿಸಿದ್ದ ಕೊಹ್ಲಿ ಒಂದು ರನ್ಗಳಿಸುವ ಮೂಲಕ 16 ಸಾವಿರ ರನ್ಗಳ ಸಾಧನೆ ಮಾಡಿದರು. ಈ ಮೂಲಕ ಲಿಸ್ಟ್ ಎ ಕ್ರಿಕೆಟ್ನಲ್ಲಿ ಅತೀ ವೇಗವಾಗಿ 16000 ರನ್ಗಳಿಸಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು.

ಇದಕ್ಕೂ ಮುನ್ನ ಈ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿತ್ತು. ಸಚಿನ್ ತೆಂಡೂಲ್ಕರ್ ಲಿಸ್ಟ್ ಎ ಕ್ರಿಕೆಟ್ನಲ್ಲಿ 391 ಇನಿಂಗ್ಸ್ಗಳ ಮೂಲಕ 16000 ರನ್ ಪೂರೈಸಿದ್ದರು. ಈ ಮೂಲಕ ವಿಶ್ವ ದಾಖಲೆಯನ್ನು ನಿರ್ಮಿಸಿದ್ದರು.

ಇದೀಗ ಕೇವಲ 330 ಇನಿಂಗ್ಸ್ಗಳ ಮೂಲಕ ವಿರಾಟ್ ಕೊಹ್ಲಿ ಲಿಸ್ಟ್ ಎ ಕ್ರಿಕೆಟ್ನಲ್ಲಿ 16000 ರನ್ಗಳಿಸಿದ್ದಾರೆ. ಈ ಮೂಲಕ ಏಕದಿನ ಪಂದ್ಯಗಳಲ್ಲಿ ಅತೀ ಕಡಿಮೆ ಇನಿಂಗ್ಸ್ಗಳ ಮೂಲಕ 16 ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.