Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರ್ಪ್​ ಕ್ಯಾಚ್ ಹಿಡಿದು ದಾಖಲೆ ಬರೆದ ವಿರಾಟ್ ಕೊಹ್ಲಿ

Australia vs India, 3rd Test: ಟೀಮ್ ಇಂಡಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿರುವ ಆಸ್ಟ್ರೇಲಿಯಾ ತಂಡವು 42 ಓವರ್​​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 100 ರನ್ ಕಲೆಹಾಕಿದೆ. ಇತ್ತ ಟೀಮ್ ಇಂಡಿಯಾ ಪರ ಜಸ್​ಪ್ರೀತ್ ಬುಮ್ರಾ 2 ವಿಕೆಟ್ ಕಬಳಿಸಿದರೆ, ನಿತೀಶ್ ಕುಮಾರ್ ರೆಡ್ಡಿ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on:Dec 15, 2024 | 7:53 AM

ಬ್ರಿಸ್ಬೇನ್​​ನ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದ 2ನೇ ದಿನದಾಟದಲ್ಲಿ ವಿರಾಟ್ ಕೊಹ್ಲಿ ಎರಡು ಕ್ಯಾಚ್​​ಗಳನ್ನು ಹಿಡಿದಿದ್ದಾರೆ. ಈ ಕ್ಯಾಚ್​ಗಳೊಂದಿಗೆ ಕಿಂಗ್ ಕೊಹ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 7
ಈ ಪಂದ್ಯದ 19ನೇ ಓವರ್​​ನ 3ನೇ ಎಸೆತದಲ್ಲಿ ನಾಥನ್ ಮೆಕ್​ಸ್ವೀನಿ ಸ್ಲಿಪ್​​ನಲ್ಲಿ ನೀಡಿದ ಕ್ಯಾಚ್​ ಅನ್ನು ವಿರಾಟ್ ಕೊಹ್ಲಿ ಅತ್ಯಂತ ಸುಲಭವಾಗಿ ಹಿಡಿದರು. ಇನ್ನು 34ನೇ ಓವರ್​ನ 2ನೇ ಎಸೆತದಲ್ಲಿ ಮಾರ್ನಸ್ ಲಾಬುಶೇನ್ ಕ್ಯಾಚ್ ನೀಡಿದ್ದರು. ಸೆಕೆಂಡ್ ಸ್ಲಿಪ್​ನತ್ತ ತೂರಿ ಬಂದ ಚೆಂಡನ್ನು ಕ್ಷಣಾರ್ಧದಲ್ಲಿ ಅದ್ಭುತವಾಗಿ ಹಿಡಿಯುವಲ್ಲಿ ವಿರಾಟ್ ಕೊಹ್ಲಿ ಯಶಸ್ವಿಯಾದರು.

2 / 7
ಈ ಎರಡು ಕ್ಯಾಚ್​ಗಳೊಂದಿಗೆ ಟೆಸ್ಟ್ ಕ್ರಿಕೆಟ್​​ನಲ್ಲಿ ಅತೀ ಹೆಚ್ಚು ಕ್ಯಾಚ್ ಹಿಡಿದ ಭಾರತೀಯ ಫೀಲ್ಡರ್​​ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ 3ನೇ ಸ್ಥಾನದಲ್ಲಿ ಸಚಿನ್ ತೆಂಡೂಲ್ಕರ್ ಕಾಣಿಸಿಕೊಂಡಿದ್ದರು.

3 / 7
1989 ರಿಂದ 2013ರ ನಡುವೆ 200 ಟೆಸ್ಟ್ ಪಂದ್ಯಗಳನ್ನಾಡಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ 366	 ಇನಿಂಗ್ಸ್​ಗಳಿಂದ ಒಟ್ಟು 115	 ಕ್ಯಾಚ್​ಗಳನ್ನು ಹಿಡಿದಿದ್ದಾರೆ. ಈ ಮೂಲಕ ಟೆಸ್ಟ್​​ನಲ್ಲಿ ಅತ್ಯಧಿಕ ಕ್ಯಾಚ್ ಹಿಡಿದ ಮೂರನೇ ಭಾರತೀಯ ಫೀಲ್ಡರ್​ ಎನಿಸಿಕೊಂಡಿದ್ದರು.

4 / 7
ಇದೀಗ ಆಸ್ಟ್ರೇಲಿಯಾ ವಿರುದ್ಧದ 2 ಕ್ಯಾಚ್​​ಗಳೊಂದಿಗೆ ವಿರಾಟ್ ಕೊಹ್ಲಿ ತಮ್ಮ ಕ್ಯಾಚ್​​ಗಳ ಸಂಖ್ಯೆಯನ್ನು 117* ಕ್ಕೇರಿಸಿದ್ದಾರೆ. ಈವರೆಗೆ 231 ಇನಿಂಗ್ಸ್​ಗಳಲ್ಲಿ ಫೀಲ್ಡಿಂಗ್ ಮಾಡಿರುವ ಕೊಹ್ಲಿ ಇದೀಗ ಟೆಸ್ಟ್​​ನಲ್ಲಿ ಅತೀ ಹೆಚ್ಚು ಕ್ಯಾಚ್​ಗಳನ್ನು ಹಿಡಿದ ಭಾರತದ ಮೂರನೇ ಫೀಲ್ಡರ್​ ಹಿರಿಮೆಗೆ ಪಾತ್ರರಾಗಿದ್ದಾರೆ.

5 / 7
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ರಾಹುಲ್ ದ್ರಾವಿಡ್. 1996 ರಿಂದ 2012 ನಡುವೆ 299 ಇನಿಂಗ್ಸ್​​ಗಳಲ್ಲಿ ಫೀಲ್ಡಿಂಗ್ ಮಾಡಿರುವ ದ್ರಾವಿಡ್ ಒಟ್ಟು 209 ಕ್ಯಾಚ್​ಗಳನ್ನು ಹಿಡಿದಿದ್ದಾರೆ. ಈ ಮೂಲಕ ಭಾರತದ ಅತ್ಯಂತ ಯಶಸ್ವಿ ಫೀಲ್ಡರ್ ಎನಿಸಿಕೊಂಡಿದ್ದಾರೆ.

6 / 7
ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ವಿವಿಎಸ್​ ಲಕ್ಷ್ಮಣ್. 1996 ರಿಂದ 2012 ರ ನಡುವೆ 248 ಇನಿಂಗ್ಸ್ ಆಡಿರುವ ಲಕ್ಷ್ಮಣ್ ಒಟ್ಟು 135 ಕ್ಯಾಚ್​​ಗಳನ್ನು ಹಿಡಿದ್ದಾರೆ. ಇದೀಗ 117 ಕ್ಕೇರಿರುವ ವಿರಾಟ್ ಕೊಹ್ಲಿ ಇನ್ನು 18 ಕ್ಯಾಚ್​​ಗಳನ್ನು ಹಿಡಿದರೆ ಲಕ್ಷ್ಮಣ್ ಅವರ ದಾಖಲೆಯನ್ನು ಮುರಿಯಬಹುದು.

7 / 7

Published On - 7:53 am, Sun, 15 December 24

Follow us
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ

ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ

ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?

‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ

ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು

ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ

ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ

ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ

ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ

ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು