Updated on: Jan 15, 2023 | 7:54 PM
ಶ್ರೀಲಂಕಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಅಬ್ಬರಿಸುವ ಮೂಲಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದ ಕೊಹ್ಲಿ 85 ಎಸೆತಗಳಲ್ಲಿ ಶತಕ ಪೂರೈಸಿದರು. ಅಲ್ಲದೆ 110 ಎಸೆತಗಳಲ್ಲಿ 13 ಫೋರ್ ಹಾಗೂ 8 ಭರ್ಜರಿ ಸಿಕ್ಸ್ನೊಂದಿಗೆ ಅಜೇಯ 166 ರನ್ ಬಾರಿಸಿದರು. ಈ ಭರ್ಜರಿ ಶತಕದೊಂದಿಗೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ವಿಶ್ವ ದಾಖಲೆಯನ್ನು ಕಿಂಗ್ ಕೊಹ್ಲಿ ಮುರಿದಿರುವುದು ವಿಶೇಷ.
ತಿರುವನಂತಪುರದಲ್ಲಿ ಶತಕ ಸಿಡಿಸುವ ಮೂಲಕ ಭಾರತದಲ್ಲಿ ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ವಿಶೇಷ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಈ ಹಿಂದೆ ಈ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು.
ಸಚಿನ್ ತೆಂಡೂಲ್ಕರ್ ಭಾರತದಲ್ಲಿ 164 ಏಕದಿನ ಪಂದ್ಯಗಳನ್ನಾಡಿ ಒಟ್ಟು 20 ಶತಕಗಳನ್ನು ಬಾರಿಸಿದ್ದರು. ಇದೀಗ ವಿರಾಟ್ ಕೊಹ್ಲಿ ಈ ದಾಖಲೆ ಮುರಿದಿದ್ದಾರೆ.
ಶ್ರೀಲಂಕಾ ವಿರುದ್ಧದ ಶತಕದೊಂದಿಗೆ ಕೊಹ್ಲಿ ಕೂಡ ಭಾರತದ ಪಿಚ್ನಲ್ಲಿ ಒಟ್ಟು 21 ಶತಕ ಸಿಡಿಸಿದ್ದಾರೆ. ವಿಶೇಷ ಎಂದರೆ ಕೊಹ್ಲಿ ತವರಿನಲ್ಲಿ 21 ಶತಕ ಬಾರಿಸಲು ತೆಗೆದುಕೊಂಡಿರುವುದು ಕೇವಲ 104 ಇನಿಂಗ್ಸ್ ಮಾತ್ರ.
ಇದರೊಂದಿಗೆ ತವರಿನ ಶತಕದ ಸರದಾರ ಎಂಬ ಮಾಸ್ಟರ್ ಬ್ಲಾಸ್ಟರ್ ಅವರ ಮತ್ತೊಂದು ದಾಖಲೆಯನ್ನು ಕಿಂಗ್ ಕೊಹ್ಲಿ ಮುರಿದಿರುವುದು ವಿಶೇಷ.