ದಾಖಲೆಗಳ ಮೇಲೆ ದಾಖಲೆ: ವಿರಾಟ್ ಕೊಹ್ಲಿ ಮುಂದಿದೆ 10 ದಾಖಲೆಗಳು

Border-Gavaskar Trophy 2024: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ನಾಳೆಯಿಂದ (ನ.22) ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಪರ್ತ್​ನ ಒಪ್ಟಸ್​ ಸ್ಟೇಡಿಯಂನಲ್ಲಿ ನಡೆಯಲಿದ್ದು, ಈ ಪಂದ್ಯದ ಮೂಲಕ ಕಿಂಗ್ ಕೊಹ್ಲಿ ಹಲವು ದಾಖಲೆಗಳನ್ನು ನಿರ್ಮಿಸಬಹುದು.

ಝಾಹಿರ್ ಯೂಸುಫ್
|

Updated on: Nov 21, 2024 | 2:08 PM

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ಶುಕ್ರವಾರದಿಂದ (ನವೆಂಬರ್ 22) ಆರಂಭವಾಗಲಿದೆ. ಈ ಸರಣಿಯ ಐದು ಪಂದ್ಯಗಳ ಮೂಲಕ ವಿರಾಟ್ ಕೊಹ್ಲಿಗೆ ಹಲವು ದಾಖಲೆಗಳನ್ನು ಬರೆಯಲು ಉತ್ತಮ ಅವಕಾಶವಿದೆ. ಈ ಎಲ್ಲಾ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ...

1 / 11
ಅತ್ಯಧಿಕ ರನ್: ಆಸ್ಟ್ರೇಲಿಯಾದಲ್ಲಿ ಟೆಸ್ಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಸಚಿನ್ ತೆಂಡೂಲ್ಕರ್ (1,809) ಅವರನ್ನು ಹಿಂದಿಕ್ಕಲು ವಿರಾಟ್ ಕೊಹ್ಲಿ (1352) ಗೆ ಇನ್ನು ಕೇವಲ 458 ರನ್‌ಗಳ ಅಗತ್ಯವಿದೆ.

2 / 11
ಅತ್ಯಧಿಕ ಶತಕ: 2. ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ನೆಲದಲ್ಲಿ 6 ಟೆಸ್ಟ್ ಶತಕಗಳನ್ನು ಬಾರಿಸಿದ್ದಾರೆ. ಈ ಸರಣಿಯಲ್ಲಿ 4 ಸೆಂಚುರಿ ಸಿಡಿಸಿದರೆ, ಇಂಗ್ಲೆಂಡ್‌ನ ಜಾಕ್ ಹಾಬ್ಸ್ (9) ಹೆಸರಿನಲ್ಲಿರುವ ಸಾರ್ವಕಾಲಿಕ ದಾಖಲೆ ಮುರಿಯಬಹುದು.

3 / 11
ಅತಿ ಹೆಚ್ಚು ಟೆಸ್ಟ್ ರನ್‌: ಅಡಿಲೇಡ್ ಸ್ಟೇಡಿಯಂನೊಂದಿಗೆ ವಿಶೇಷ ಬಾಂಧವ್ಯ ಹೊಂದಿರುವ ವಿರಾಟ್ ಕೊಹ್ಲಿ 2ನೇ ಟೆಸ್ಟ್​ನಲ್ಲಿ 93 ರನ್​ಗಳಿಸಿದರೆ, ಅಡಿಲೇಡ್​ನಲ್ಲಿ ಅತ್ಯಧಿಕ ರನ್​ಗಳಿಸಿದ ವಿದೇಶಿ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.

4 / 11
ರನ್ ಸರದಾರ: ಆಸ್ಟ್ರೇಲಿಯಾದಲ್ಲಿ ಅತಿ ಹೆಚ್ಚು ಅಂತಾರಾಷ್ಟ್ರೀಯ ರನ್‌ಗಳ ದಾಖಲೆ ಹೊಂದಿರುವ ವಿರಾಟ್ ಕೊಹ್ಲಿ 74 ರನ್​ಗಳಿಸಿದರೆ 3500 ರನ್ ಗಡಿಯನ್ನು ಮುಟ್ಟಬಹುದು.

5 / 11
ಸೆಂಚುರಿ ಸ್ಟಾರ್: ಆಸ್ಟ್ರೇಲಿಯಾದ ಒಂದೇ ಮೈದಾನದಲ್ಲಿ ಅತ್ಯಧಿಕ ಶತಕ ಸಿಡಿಸಿದ ವಿದೇಶಿ ಬ್ಯಾಟರ್​ ಎನಿಸಿಕೊಳ್ಳಲು ವಿರಾಟ್ ಕೊಹ್ಲಿಗೆ ಒಂದು ಶತಕದ ಅಗತ್ಯವಿದೆ. ಅದರಂತೆ ಅಡಿಲೇಡ್​ನಲ್ಲಿ ಒಂದು ಸೆಂಚುರಿ ಸಿಡಿಸಿದರೆ ಈ ದಾಖಲೆ ಕಿಂಗ್ ಕೊಹ್ಲಿ ಪಾಲಾಗಲಿದೆ.

6 / 11
ಅತ್ಯಧಿಕ ಬೌಂಡರಿ: ಆಸ್ಟ್ರೇಲಿಯಾದಲ್ಲಿ ಟೆಸ್ಟ್​ನಲ್ಲಿ ಅತಿ ಹೆಚ್ಚು ಬೌಂಡರಿಗಳನ್ನು ಬಾರಿಸಿದ ದಾಖಲೆ ಸಚಿನ್ ತೆಂಡೂಲ್ಕರ್ (209) ಹೆಸರಿನಲ್ಲಿದೆ. ಇನ್ನು 59 ಬೌಂಡರಿಸಿದರೆ ಈ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಳ್ಳಬಹುದು.

7 / 11
ಅತ್ಯಧಿಕ ಪಂದ್ಯಗಳ ದಾಖಲೆ: ಒಂದು ರಾಷ್ಟ್ರದ ವಿರುದ್ಧ 100 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಸರಿಗಟ್ಟಲು ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ 3 ಪಂದ್ಯಗಳನ್ನಾಡಿದರೆ ಸಾಕು.

8 / 11
ಸೆಂಚುರಿ ವೀರ: ಆಸ್ಟ್ರೇಲಿಯಾ ವಿರುದ್ಧ ಅತೀ ಹೆಚ್ಚು ಶತಕ ಸಿಡಿಸಿದ ಸಚಿನ್ ತೆಂಡೂಲ್ಕರ್ (20 ಶತಕ) ಸಾರ್ವಕಾಲಿಕ ದಾಖಲೆಯನ್ನು ಮೀರಿಸಲು ವಿರಾಟ್ ಕೊಹ್ಲಿಗೆ (16 ಶತಕ) 5 ಶತಕಗಳ ಅವಶ್ಯಕತೆಯಿದೆ.

9 / 11
ಅತಿ ಹೆಚ್ಚು ಕ್ಯಾಚ್‌ಗಳು: ಆಸ್ಟ್ರೇಲಿಯಾ ವಿರುದ್ಧ ಅತ್ಯಧಿಕ ಕ್ಯಾಚ್ ಹಿಡಿದ ಫೀಲ್ಡರ್​ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ (66)ಅಗ್ರಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ 70 ಸಂಖ್ಯೆಯ ಮಾರ್ಕ್ ಮುಟ್ಟಲು 4 ಕ್ಯಾಚ್​ಗಳನ್ನು ಹಿಡಿದರೆ ಸಾಕು.

10 / 11
ಬೌಂಡರಿ ಬ್ಯಾಟರ್: ಆಸ್ಟ್ರೇಲಿಯಾ ವಿರುದ್ಧ ವಿರಾಟ್ ಕೊಹ್ಲಿ ಈವರೆಗೆ 496 ಬೌಂಡರಿಗಳನ್ನು ಬಾರಿಸಿದ್ದಾರೆ. ಇದೀಗ 4 ಬೌಂಡರಿಗಳನ್ನು ಸಿಡಿಸಿದರೆ 500ರ ಗಡಿ ತಲುಪಬಹುದು. ಇದರೊಂದಿಗೆ ಸಚಿನ್ ತೆಂಡೂಲ್ಕರ್ (764) ಮತ್ತು ಬ್ರಿಯಾನ್ ಲಾರಾ (550) ನಂತರ ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.

11 / 11
Follow us
Daily Devotional: ಹಲ್ಲಿನ ಮೇಲೆ ಹಲ್ಲು ಬಂದರೆ ಅದೃಷ್ಟವೇ?

ಈ ರಾಶಿಯವರ ಜೀವನದಲ್ಲಿ ಸಂಪತ್ತು ಮತ್ತು ಖ್ಯಾತಿ ಹೆಚ್ಚಾಗುತ್ತದೆ

ಯುಐ, ಮ್ಯಾಕ್ಸ್ ಒಟ್ಟಿಗೆ ರಿಲೀಸ್ ಆಗುತ್ತಿರುವ ಬಗ್ಗೆ ಉಪೇಂದ್ರ ಪ್ರತಿಕ್ರಿಯೆ

ಏಕದಿನ ಸರಣಿಗಾಗಿ ಕಾಂಗರೂಗಳ ನಾಡಿಗೆ ಕಾಲಿಟ್ಟ ಟೀಂ ಇಂಡಿಯಾ

ಅಣ್ಣ 10 ವರ್ಷಗಳಿಂದ ಕಾಯುತ್ತಿದ್ದೇನೆ ಎಂದ ಫ್ಯಾನ್​ಗೆ ನಿರಾಸೆ ಮಾಡದ ರೋಹಿತ್

ಡಿಪೋದಲ್ಲಿ ಯುವಕನಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಬಚಾವ್

ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!

ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು

ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ

ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?