Virat Kohli: ಫೈನಲ್ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಮುಂದಿದೆ 3 ವಿಶ್ವ ದಾಖಲೆಗಳು

Virat Kohli Records: ಈ ಫೈನಲ್ ಪಂದ್ಯದ ಮೂಲಕ ಮತ್ತೆ ಮೂರು ವಿಶ್ವ ದಾಖಲೆಯನ್ನು ನಿರ್ಮಿಸುವ ಅವಕಾಶ ವಿರಾಟ್ ಕೊಹ್ಲಿ ಮುಂದಿದೆ. ಈಗಾಗಲೇ ದಾಖಲೆಗಳ ಮೇಲೆ ದಾಖಲೆ ಬರೆದಿರುವ ಕಿಂಗ್ ಕೊಹ್ಲಿ ಅಂತಿಮ ಪಂದ್ಯದಲ್ಲಿ ನಿರ್ಮಿಸಬಲ್ಲ ದಾಖಲೆಗಳಾವುವು ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ...

| Updated By: ಝಾಹಿರ್ ಯೂಸುಫ್

Updated on: Nov 18, 2023 | 9:56 PM

ಏಕದಿನ ವಿಶ್ವಕಪ್​ನ ಅಂತಿಮ ಹಣಾಹಣಿಗಾಗಿ ವೇದಿಕೆ ಸಿದ್ಧವಾಗಿದೆ ಭಾನುವಾರ (ನ.19) ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ.

1 / 5
ಈ ಫೈನಲ್ ಪಂದ್ಯದ ಮೂಲಕ ಮತ್ತೆ ಮೂರು ವಿಶ್ವ ದಾಖಲೆಯನ್ನು ನಿರ್ಮಿಸುವ ಅವಕಾಶ ವಿರಾಟ್ ಕೊಹ್ಲಿ ಮುಂದಿದೆ. ಈಗಾಗಲೇ ದಾಖಲೆಗಳ ಮೇಲೆ ದಾಖಲೆ ಬರೆದಿರುವ ಕಿಂಗ್ ಕೊಹ್ಲಿ ಅಂತಿಮ ಪಂದ್ಯದಲ್ಲಿ ನಿರ್ಮಿಸಬಲ್ಲ ದಾಖಲೆಗಳಾವುವು ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ....

2 / 5
1- ರನ್​ ಸರದಾರ: ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ರನ್​ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್​ ಎನಿಸಿಕೊಳ್ಳಲು ವಿರಾಟ್ ಕೊಹ್ಲಿಗೆ ಕೇವಲ 3 ರನ್​ಗಳ ಅಗತ್ಯವಿದೆ. ಈ ಪಟ್ಟಿಯಲ್ಲಿ 2278 ರನ್ ಬಾರಿಸಿರುವ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದರೆ, 1743 ರನ್​ಗಳಿಸಿರುವ ರಿಕಿ ಪಾಂಟಿಂಗ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಇನ್ನು 1741 ರನ್​ ಕಲೆಹಾಕಿರುವ ವಿರಾಟ್ ಕೊಹ್ಲಿ ಫೈನಲ್ ಪಂದ್ಯದಲ್ಲಿ 3 ರನ್​ಗಳಿಸಿದರೆ ಏಕದಿನ ವಿಶ್ವಕಪ್​ನಲ್ಲಿ ಸಚಿನ್ ಬಳಿಕ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.

3 / 5
2- ಫೈನಲ್​ ರನ್​ವೀರ: ಐಸಿಸಿ ವಿಶ್ವಕಪ್​ ಫೈನಲ್ ಪಂದ್ಯದಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಶ್ರೀಲಂಕಾದ ಕುಮಾರ ಸಂಗಾಕ್ಕರ ಹೆಸರಿನಲ್ಲಿದೆ. ಸಂಗಾಕ್ಕರ 320 ರನ್​ ಬಾರಿಸಿ ದಾಖಲೆ ನಿರ್ಮಿಸಿದ್ದಾರೆ. ಇದೀಗ 280 ರನ್​ಗಳಿಸಿರುವ ವಿರಾಟ್ ಕೊಹ್ಲಿ 2ನೇ ಸ್ಥಾನದಲ್ಲಿದ್ದು, 41 ರನ್​ಗಳಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.

4 / 5
3- ಶತಕವೀರ: ಏಕದಿನ ಕ್ರಿಕೆಟ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಅತ್ಯಧಿಕ ಶತಕ ಬಾರಿಸಿದ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಸಚಿನ್ 9 ಶತಕಗಳೊಂದಿಗೆ ಈ ದಾಖಲೆ ಬರೆದಿದ್ದಾರೆ. ಇದೀಗ ಆಸ್ಟ್ರೇಲಿಯಾ ವಿರುದ್ಧ 8 ಶತಕ ಬಾರಿಸಿರುವ ವಿರಾಟ್ ಕೊಹ್ಲಿ ಫೈನಲ್​ನಲ್ಲಿ ಸೆಂಚುರಿ ಬಾರಿಸಿದರೆ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿಯಬಹುದು.

5 / 5
Follow us
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ

ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ

ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​

‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ

ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್

ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ

ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್

ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ

ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ