Virat Kohli: ಫೈನಲ್ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಮುಂದಿದೆ 3 ವಿಶ್ವ ದಾಖಲೆಗಳು
TV9 Web | Updated By: ಝಾಹಿರ್ ಯೂಸುಫ್
Updated on:
Nov 18, 2023 | 9:56 PM
Virat Kohli Records: ಈ ಫೈನಲ್ ಪಂದ್ಯದ ಮೂಲಕ ಮತ್ತೆ ಮೂರು ವಿಶ್ವ ದಾಖಲೆಯನ್ನು ನಿರ್ಮಿಸುವ ಅವಕಾಶ ವಿರಾಟ್ ಕೊಹ್ಲಿ ಮುಂದಿದೆ. ಈಗಾಗಲೇ ದಾಖಲೆಗಳ ಮೇಲೆ ದಾಖಲೆ ಬರೆದಿರುವ ಕಿಂಗ್ ಕೊಹ್ಲಿ ಅಂತಿಮ ಪಂದ್ಯದಲ್ಲಿ ನಿರ್ಮಿಸಬಲ್ಲ ದಾಖಲೆಗಳಾವುವು ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ...
1 / 5
ಏಕದಿನ ವಿಶ್ವಕಪ್ನ ಅಂತಿಮ ಹಣಾಹಣಿಗಾಗಿ ವೇದಿಕೆ ಸಿದ್ಧವಾಗಿದೆ ಭಾನುವಾರ (ನ.19) ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ.
2 / 5
ಈ ಫೈನಲ್ ಪಂದ್ಯದ ಮೂಲಕ ಮತ್ತೆ ಮೂರು ವಿಶ್ವ ದಾಖಲೆಯನ್ನು ನಿರ್ಮಿಸುವ ಅವಕಾಶ ವಿರಾಟ್ ಕೊಹ್ಲಿ ಮುಂದಿದೆ. ಈಗಾಗಲೇ ದಾಖಲೆಗಳ ಮೇಲೆ ದಾಖಲೆ ಬರೆದಿರುವ ಕಿಂಗ್ ಕೊಹ್ಲಿ ಅಂತಿಮ ಪಂದ್ಯದಲ್ಲಿ ನಿರ್ಮಿಸಬಲ್ಲ ದಾಖಲೆಗಳಾವುವು ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ....
3 / 5
1- ರನ್ ಸರದಾರ: ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಳ್ಳಲು ವಿರಾಟ್ ಕೊಹ್ಲಿಗೆ ಕೇವಲ 3 ರನ್ಗಳ ಅಗತ್ಯವಿದೆ. ಈ ಪಟ್ಟಿಯಲ್ಲಿ 2278 ರನ್ ಬಾರಿಸಿರುವ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದರೆ, 1743 ರನ್ಗಳಿಸಿರುವ ರಿಕಿ ಪಾಂಟಿಂಗ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಇನ್ನು 1741 ರನ್ ಕಲೆಹಾಕಿರುವ ವಿರಾಟ್ ಕೊಹ್ಲಿ ಫೈನಲ್ ಪಂದ್ಯದಲ್ಲಿ 3 ರನ್ಗಳಿಸಿದರೆ ಏಕದಿನ ವಿಶ್ವಕಪ್ನಲ್ಲಿ ಸಚಿನ್ ಬಳಿಕ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.
4 / 5
2- ಫೈನಲ್ ರನ್ವೀರ: ಐಸಿಸಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಶ್ರೀಲಂಕಾದ ಕುಮಾರ ಸಂಗಾಕ್ಕರ ಹೆಸರಿನಲ್ಲಿದೆ. ಸಂಗಾಕ್ಕರ 320 ರನ್ ಬಾರಿಸಿ ದಾಖಲೆ ನಿರ್ಮಿಸಿದ್ದಾರೆ. ಇದೀಗ 280 ರನ್ಗಳಿಸಿರುವ ವಿರಾಟ್ ಕೊಹ್ಲಿ 2ನೇ ಸ್ಥಾನದಲ್ಲಿದ್ದು, 41 ರನ್ಗಳಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.
5 / 5
3- ಶತಕವೀರ: ಏಕದಿನ ಕ್ರಿಕೆಟ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಅತ್ಯಧಿಕ ಶತಕ ಬಾರಿಸಿದ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಸಚಿನ್ 9 ಶತಕಗಳೊಂದಿಗೆ ಈ ದಾಖಲೆ ಬರೆದಿದ್ದಾರೆ. ಇದೀಗ ಆಸ್ಟ್ರೇಲಿಯಾ ವಿರುದ್ಧ 8 ಶತಕ ಬಾರಿಸಿರುವ ವಿರಾಟ್ ಕೊಹ್ಲಿ ಫೈನಲ್ನಲ್ಲಿ ಸೆಂಚುರಿ ಬಾರಿಸಿದರೆ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿಯಬಹುದು.