Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿ ಮುಂದಿದೆ 5 ವಿಶ್ವ ದಾಖಲೆಗಳು

Champions Trophy 2025: ಚಾಂಪಿಯನ್ಸ್ ಟ್ರೋಫಿಯ ಲೀಗ್ ಹಂತದಲ್ಲಿ ಟೀಮ್ ಇಂಡಿಯಾ ಮೂರು ಪಂದ್ಯಗಳನ್ನಾಡಲಿದೆ. ಬಾಂಗ್ಲಾದೇಶ್, ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ವಿರುದ್ಧ ನಡೆಯಲಿರುವ ಈ ಮ್ಯಾಚ್​ಗಳ ಮೂಲಕ ವಿರಾಟ್ ಕೊಹ್ಲಿ ಭರ್ಜರಿ ದಾಖಲೆಗಳನ್ನು ಬರೆಯಬಹುದು. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on: Feb 20, 2025 | 11:04 AM

ಟೀಮ್ ಇಂಡಿಯಾದ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಇಂದಿನಿಂದ (ಫೆ.20) ಶುರುವಾಗಲಿದೆ. ದುಬೈನ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶ್ ತಂಡವನ್ನು ಎದುರಿಸಲಿದೆ. ಈ ಮ್ಯಾಚ್​ನಲ್ಲಿ ವಿರಾಟ್ ಕೊಹ್ಲಿ ಮಿಂಚಿದರೆ ಹೊಸ ವಿಶ್ವ ದಾಖಲೆಯೊಂದು ನಿರ್ಮಾಣವಾಗಲಿದೆ.

1 / 7
ಅಷ್ಟೇ ಅಲ್ಲದೆ ಈ ಬಾರಿಯ ಟೂರ್ನಿಯ ಮೂಲಕ ವಿರಾಟ್ ಕೊಹ್ಲಿ 5 ವಿಶ್ವ ದಾಖಲೆಗಳನ್ನು ನಿರ್ಮಿಸಬಹುದು. ಆ ದಾಖಲೆಗಳಾವುವು, ಈ ದಾಖಲೆ ನಿರ್ಮಾಣಕ್ಕೆ ವಿರಾಟ್ ಕೊಹ್ಲಿ ಎಷ್ಟು ರನ್​ಗಳಿಸಬೇಕು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ....

2 / 7
14000 ರನ್ಸ್: ಏಕದಿನ ಕ್ರಿಕೆಟ್​ನಲ್ಲಿ 14 ಸಾವಿರ ರನ್ ಪೂರೈಸಲು ವಿರಾಟ್ ಕೊಹ್ಲಿಗೆ ಬೇಕಿರುವುದು ಕೇವಲ 37 ರನ್​ಗಳು ಮಾತ್ರ. ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ಕಿಂಗ್ ಕೊಹ್ಲಿ 37 ರನ್ ಬಾರಿಸಿದರೆ, ಏಕದಿನ ಕ್ರಿಕೆಟ್​ ಇತಿಹಾಸದಲ್ಲೇ ಅತೀ ವೇಗವಾಗಿ 14000 ರನ್​ ಕಲೆಹಾಕಿದ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.

3 / 7
ಟಾಪ್-3 ರನ್​ ಸರಾದರ: ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಟಾಪ್-3 ರನ್ ಸರದಾರ ಎನಿಸಿಕೊಳ್ಳಲು ವಿರಾಟ್ ಕೊಹ್ಲಿ 105 ರನ್​ಗಳನ್ನು ಬಾರಿಸಿದರೆ ಸಾಕು. ಈವರೆಗೆ 27,381 ರನ್​ಗಳಿಸಿರುವ ಕೊಹ್ಲಿ ಸದ್ಯ 4ನೇ ಸ್ಥಾನದಲ್ಲಿದ್ದು, ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ ಗಳಿಸಿದ 3ನೇ ಬ್ಯಾಟರ್ ಎನಿಸಿಕೊಳ್ಳಬಹುದು.

4 / 7
ಅತ್ಯಧಿಕ ಸ್ಕೋರರ್: ಚಾಂಪಿಯನ್ಸ್ ಟ್ರೋಫಿಯಲ್ಲಿ ವಿರಾಟ್ ಕೊಹ್ಲಿ ಈವರೆಗೆ 529 ರನ್​ ಗಳಿಸಿದ್ದಾರೆ. ಈ ಬಾರಿಯ ಟೂರ್ನಿಯಲ್ಲಿ 263 ರನ್​ ಬಾರಿಸಿದರೆ,  ವೆಸ್ಟ್ ಇಂಡೀಸ್‌ನ ಮಾಜಿ ನಾಯಕ ಕ್ರಿಸ್ ಗೇಲ್ ಅವರ 791 ರನ್‌ಗಳ ದಾಖಲೆಯನ್ನು ಮುರಿದು ಹೊಸ ಇತಿಹಾಸ ನಿರ್ಮಿಸಬಹುದು.

5 / 7
ಅತೀ ಹೆಚ್ಚು ಅರ್ಧಶತಕ: ಚಾಂಪಿಯನ್ಸ್ ಟ್ರೋಫಿಯಲ್ಲಿ ವಿರಾಟ್ ಕೊಹ್ಲಿ ಈವರೆಗೆ 5 ಅರ್ಧಶತಕಗಳನ್ನು ಬಾರಿಸಿದ್ದಾರೆ. ಟೀಮ್ ಇಂಡಿಯಾ ಪರ ಚಾಂಪಿಯನ್ಸ್ ಟ್ರೋಫಿಯಲ್ಲಿ 6 ಅರ್ಧಶತಕ ಸಿಡಿಸಿರುವ ರಾಹುಲ್ ದ್ರಾವಿಡ್ ಅವರ ದಾಖಲೆ ಮುರಿಯಲು ಕಿಂಗ್ ಕೊಹ್ಲಿ ಬಾರಿ 2 ಹಾಫ್ ಸೆಂಚುರಿ ಬಾರಿಸಿದರೆ ಸಾಕು.

6 / 7
ಟ್ರೋಫಿಗಳ ಸರದಾರ: ಈ ಬಾರಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ಅತೀ ಹೆಚ್ಚು ಐಸಿಸಿ ಟ್ರೋಫಿ ಗೆದ್ದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನಕ್ಕೇರಲಿದ್ದಾರೆ. ಕಿಂಗ್ ಕೊಹ್ಲಿ ಈವರೆಗೆ 4 ಐಸಿಸಿ ಟ್ರೋಫಿ ಗೆದ್ದಿದ್ದಾರೆ. ಇದೀಗ ರಿಕಿ ಪಾಂಟಿಂಗ್ (5) ಹೆಸರಿನಲ್ಲಿರುವ ವಿಶ್ವ ದಾಖಲೆ ಸರಿಗಟ್ಟಲು ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಗೆಲ್ಲಬೇಕಿದೆ.

7 / 7
Follow us
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ

ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್

ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್

ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ

ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ

ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ

VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್

ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್

ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ

ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ