- Kannada News Photo gallery Cricket photos T20 World Cup 2024: Virat Kohli Can Break Mahela Jayawardene's Record
Virat Kohli: ವಿಶ್ವ ದಾಖಲೆಯ ಹೊಸ್ತಿಲಲ್ಲಿ ಕಿಂಗ್ ಕೊಹ್ಲಿ
T20 World Cup 2024: ಈ ಬಾರಿಯ ಟಿ20 ವಿಶ್ವಕಪ್ನ ಟೀಮ್ ಇಂಡಿಯಾದ ಮೊದಲ ಪಂದ್ಯದಲ್ಲೇ ವಿರಾಟ್ ಕೊಹ್ಲಿ ಭರ್ಜರಿ ದಾಖಲೆಯನ್ನು ಬರೆಯಬಹುದು. ಅದಕ್ಕಾಗಿ ಕಿಂಗ್ ಕೊಹ್ಲಿಗೆ ಬೇಕಿರುವುದು ಕೇವಲ 9 ಫೋರ್ಗಳು ಮಾತ್ರ. ಅಂದರೆ ಐರ್ಲೆಂಡ್ ವಿರುದ್ಧ ವಿರಾಟ್ ಕೊಹ್ಲಿ 9 ಫೋರ್ಗಳನ್ನು ಬಾರಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.
Updated on: Jun 05, 2024 | 3:45 PM

T20 World Cup 2024: ಟಿ20 ವಿಶ್ವಕಪ್ನ 8ನೇ ಪಂದ್ಯದಲ್ಲಿ ಭಾರತ ಮತ್ತು ಐರ್ಲೆಂಡ್ (IND vs IRE) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ಮೂಲಕ ಟಿ20 ವಿಶ್ವಕಪ್ನಲ್ಲಿ ಹೊಸ ಇತಿಹಾಸ ಬರೆಯುವ ಅವಕಾಶ ವಿರಾಟ್ ಕೊಹ್ಲಿ (Virat Kohli) ಮುಂದಿದೆ.

ಒಂದು ವೇಳೆ ಐರ್ಲೆಂಡ್ ವಿರುದ್ಧ ವಿರಾಟ್ ಕೊಹ್ಲಿ 9 ಫೋರ್ಗಳನ್ನು ಬಾರಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಅಂದರೆ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತೀ ಹೆಚ್ಚು ಫೋರ್ಗಳನ್ನು ಸಿಡಿಸಿದ ದಾಖಲೆಯಲು ಕಿಂಗ್ ಕೊಹ್ಲಿಗೆ ಕೇವಲ ಬೌಂಡರಿಗಳ ಅವಶ್ಯಕತೆಯಿದೆ.

ಸದ್ಯ ಈ ದಾಖಲೆ ಶ್ರೀಲಂಕಾದ ಮಹೇಲ ಜಯವರ್ಧನೆ ಹೆಸರಿನಲ್ಲಿದೆ. ಲಂಕಾ ತಂಡದ ಮಾಜಿ ನಾಯಕ ಟಿ20 ವಿಶ್ವಕಪ್ನಲ್ಲಿ 31 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 111 ಫೋರ್ಗಳನ್ನು ಬಾರಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ವಿಶ್ವಕಪ್ನಲ್ಲಿ 27 ಇನಿಂಗ್ಸ್ಗಳನ್ನು ಆಡಿರುವ ವಿರಾಟ್ ಕೊಹ್ಲಿ ಇದುವರೆಗೆ 103 ಫೋರ್ಗಳನ್ನು ಬಾರಿಸಿದ್ದಾರೆ. ಒಂದು ವೇಳೆ ಐರ್ಲೆಂಡ್ ವಿರುದ್ಧ 9 ಫೋರ್ ಸಿಡಿಸಿದರೆ ಜಯವರ್ಧನೆ ಹೆಸರಿನಲ್ಲಿರುವ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಳ್ಳಬಹುದು.

ಹೀಗಾಗಿ ನ್ಯೂಯಾರ್ಕ್ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆಯಲಿರುವ ಐರ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಹೊಸ ಇತಿಹಾಸ ನಿರ್ಮಿಸುವುದನ್ನು ಎದುರು ನೋಡಬಹುದು. ಈ ಹೊಸ ವಿಶ್ವ ದಾಖಲೆಯೊಂದಿಗೆ ಕಿಂಗ್ ಕೊಹ್ಲಿ ಶುಭಾರಂಭ ಮಾಡಲಿದ್ದಾರಾ ಕಾದು ನೋಡಬೇಕಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More
