Virat Kohli: ವಿಶ್ವ ದಾಖಲೆಯ ಹೊಸ್ತಿಲಲ್ಲಿ ಕಿಂಗ್ ಕೊಹ್ಲಿ

|

Updated on: Jun 05, 2024 | 3:45 PM

T20 World Cup 2024: ಈ ಬಾರಿಯ ಟಿ20 ವಿಶ್ವಕಪ್​ನ ಟೀಮ್ ಇಂಡಿಯಾದ ಮೊದಲ ಪಂದ್ಯದಲ್ಲೇ ವಿರಾಟ್ ಕೊಹ್ಲಿ ಭರ್ಜರಿ ದಾಖಲೆಯನ್ನು ಬರೆಯಬಹುದು. ಅದಕ್ಕಾಗಿ ಕಿಂಗ್ ಕೊಹ್ಲಿಗೆ ಬೇಕಿರುವುದು ಕೇವಲ 9 ಫೋರ್​ಗಳು ಮಾತ್ರ. ಅಂದರೆ ಐರ್ಲೆಂಡ್ ವಿರುದ್ಧ ವಿರಾಟ್ ಕೊಹ್ಲಿ 9 ಫೋರ್​ಗಳನ್ನು ಬಾರಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.

1 / 5
T20 World Cup 2024: ಟಿ20 ವಿಶ್ವಕಪ್​ನ 8ನೇ ಪಂದ್ಯದಲ್ಲಿ ಭಾರತ ಮತ್ತು ಐರ್ಲೆಂಡ್ (IND vs IRE) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ಮೂಲಕ ಟಿ20 ವಿಶ್ವಕಪ್​ನಲ್ಲಿ ಹೊಸ ಇತಿಹಾಸ ಬರೆಯುವ ಅವಕಾಶ ವಿರಾಟ್ ಕೊಹ್ಲಿ (Virat Kohli) ಮುಂದಿದೆ.

2 / 5
ಒಂದು ವೇಳೆ ಐರ್ಲೆಂಡ್ ವಿರುದ್ಧ ವಿರಾಟ್ ಕೊಹ್ಲಿ 9 ಫೋರ್​ಗಳನ್ನು ಬಾರಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಅಂದರೆ ಟಿ20 ವಿಶ್ವಕಪ್​ ಇತಿಹಾಸದಲ್ಲೇ ಅತೀ ಹೆಚ್ಚು ಫೋರ್​ಗಳನ್ನು ಸಿಡಿಸಿದ ದಾಖಲೆಯಲು ಕಿಂಗ್ ಕೊಹ್ಲಿಗೆ ಕೇವಲ ಬೌಂಡರಿಗಳ ಅವಶ್ಯಕತೆಯಿದೆ.

3 / 5
ಸದ್ಯ ಈ ದಾಖಲೆ ಶ್ರೀಲಂಕಾದ ಮಹೇಲ ಜಯವರ್ಧನೆ ಹೆಸರಿನಲ್ಲಿದೆ. ಲಂಕಾ ತಂಡದ ಮಾಜಿ ನಾಯಕ ಟಿ20 ವಿಶ್ವಕಪ್​ನಲ್ಲಿ 31 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 111 ಫೋರ್​ಗಳನ್ನು ಬಾರಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

4 / 5
ವಿಶ್ವಕಪ್​ನಲ್ಲಿ 27 ಇನಿಂಗ್ಸ್​ಗಳನ್ನು ಆಡಿರುವ ವಿರಾಟ್ ಕೊಹ್ಲಿ ಇದುವರೆಗೆ 103 ಫೋರ್​ಗಳನ್ನು ಬಾರಿಸಿದ್ದಾರೆ. ಒಂದು ವೇಳೆ ಐರ್ಲೆಂಡ್ ವಿರುದ್ಧ 9 ಫೋರ್ ಸಿಡಿಸಿದರೆ ಜಯವರ್ಧನೆ ಹೆಸರಿನಲ್ಲಿರುವ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಳ್ಳಬಹುದು.

5 / 5
ಹೀಗಾಗಿ ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆಯಲಿರುವ ಐರ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಹೊಸ ಇತಿಹಾಸ ನಿರ್ಮಿಸುವುದನ್ನು ಎದುರು ನೋಡಬಹುದು. ಈ ಹೊಸ ವಿಶ್ವ ದಾಖಲೆಯೊಂದಿಗೆ ಕಿಂಗ್ ಕೊಹ್ಲಿ ಶುಭಾರಂಭ ಮಾಡಲಿದ್ದಾರಾ ಕಾದು ನೋಡಬೇಕಿದೆ.