Virat Kohli: ವಿರಾಟ್ ಕೊಹ್ಲಿಗಾಗಿ ಕಾಯುತ್ತಿದೆ ವಿಶ್ವ ದಾಖಲೆಗಳು..!

T20 World Cup 2024: ಈ ಬಾರಿ ಟಿ20 ವಿಶ್ವಕಪ್ ಜೂನ್ 2 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಯುಎಸ್​ಎ ಮತ್ತು ಕೆನಡಾ ತಂಡಗಳು ಮುಖಾಮುಖಿಯಾಗಲಿದೆ. ಹಾಗೆಯೇ ಜೂನ್ 5 ರಂದು ಐರ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಇನ್ನು 2ನೇ ಪಂದ್ಯದಲ್ಲಿ ಟೀಮ್ ಇಂಡಿಯಾದ ಎದುರಾಳಿ ಪಾಕಿಸ್ತಾನ್. ಹೀಗಾಗಿ ಜೂನ್ 9 ರಂದು ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

|

Updated on: Jun 01, 2024 | 2:30 PM

T20 World Cup 2024: ಟಿ20 ವಿಶ್ವಕಪ್ ಆರಂಭಕ್ಕೆ ಕೌಂಟ್​ ಡೌನ್ ಶುರುವಾಗಿದೆ. ಭಾನುವಾರದಿಂದ (ಜೂ.2) ಆರಂಭವಾಗಲಿರುವ ಚುಟುಕು ಕ್ರಿಕೆಟ್​ ಕದನದಲ್ಲಿ ಹಲವು ದಾಖಲೆಗಳು ನಿರ್ಮಾಣವಾಗುವ ನಿರೀಕ್ಷೆಯಿದೆ. ಈ ನಿರೀಕ್ಷೆಗಳೊಂದಿಗೆ ಒಂದಷ್ಟು ವಿಶ್ವ ದಾಖಲೆ ವಿರಾಟ್ ಕೊಹ್ಲಿ (Virat Kohli) ಪಾಲಾಗುವುದು ಖಚಿತ.

1 / 7
ಏಕೆಂದರೆ ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಕೊಹ್ಲಿ 15 ಪಂದ್ಯಗಳಿಂದ ಕಲೆಹಾಕಿರುವುದು ಬರೋಬ್ಬರಿ 741 ರನ್​ಗಳು. ಇದೀಗ ಭರ್ಜರಿ ಫಾರ್ಮ್​​ನಲ್ಲಿರುವ ಕೊಹ್ಲಿ ಕಡೆಯಿಂದ ಅಮೋಘ ಇನಿಂಗ್ಸ್​ಗಳನ್ನು ನಿರೀಕ್ಷಿಸಬಹುದು.

2 / 7
ಟೀಮ್ ಇಂಡಿಯಾ ಟಿ20 ವಿಶ್ವಕಪ್​ನ ಮೊದಲ ಸುತ್ತಿನಲ್ಲಿ ಟೀಮ್ 4 ಪಂದ್ಯಗಳನ್ನಾಡಲಿದೆ. ಹಾಗೆಯೇ ದ್ವಿತೀಯ ಸುತ್ತಿಗೆ ಪ್ರವೇಶಿಸಿದರೆ 3 ಪಂದ್ಯಗಳನ್ನಾಡಲಿದ್ದಾರೆ. ಇನ್ನು ಸೆಮಿಫೈನಲ್ ಮತ್ತು ಫೈನಲ್ ಆಡಿದ್ರೆ ಒಟ್ಟು 9 ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯಬಹುದು.

3 / 7
ಅದರಂತೆ ಈ 9 ಪಂದ್ಯಗಳ ಮೂಲಕ ಕಿಂಗ್ ಕೊಹ್ಲಿ ಹಲವು ದಾಖಲೆಗಳನ್ನು ನಿರ್ಮಿಸುವ ನಿರೀಕ್ಷೆಯಿದೆ. ಈ ನಿರೀಕ್ಷೆಯೊಂದಿಗೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ವಿರಾಟ್ ಕೊಹ್ಲಿ ಹೆಸರಿಗೆ ದಾಖಲಾಗಲಿರುವ ವಿಶ್ವ ದಾಖಲೆಗಳು ಯಾವುವು ಎಂದು ನೋಡುವುದಾದರೆ...

4 / 7
ಫೋರ್​ಗಳ ದಾಖಲೆ: ಲೀಗ್ ಹಂತದ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ 9 ಫೋರ್​ಗಳನ್ನು ಬಾರಿಸಿದರೆ, ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತೀ ಹೆಚ್ಚು ಫೋರ್ ಸಿಡಿಸಿದ ವಿಶ್ವ ದಾಖಲೆ ಕೊಹ್ಲಿ ಪಾಲಾಗಲಿದೆ. ಸದ್ಯ ಈ ದಾಖಲೆ ಪಟ್ಟಿಯಲ್ಲಿ ಶ್ರೀಲಂಕಾದ ಮಹೇಲ ಜಯವರ್ಧನೆ (111) ಅಗ್ರಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ (103) ದ್ವಿತೀಯ ಸ್ಥಾನದಲ್ಲಿದ್ದಾರೆ.

5 / 7
ರನ್​ಗಳ ದಾಖಲೆ: ಟಿ20 ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಇರುವುದು ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. 2014 ರಲ್ಲಿ 4 ಅರ್ಧಶತಕಗಳೊಂದಿಗೆ ಕೊಹ್ಲಿ 319 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಭರ್ಜರಿ ಫಾರ್ಮ್​ನಲ್ಲಿರುವ ಕೊಹ್ಲಿ ಈ ದಾಖಲೆ ಮುರಿಯುವುದನ್ನು ಎದುರು ನೋಡಬಹುದು.

6 / 7
ರನ್ ಸರದಾರ: ಟಿ20 ವಿಶ್ವಕಪ್ ಇತಿಹಾಸದಲ್ಲೇ 1500 ರನ್​ಗಳನ್ನು ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಳ್ಳಲು ಕಿಂಗ್ ಕೊಹ್ಲಿಗೆ ಬೇಕಿರುವುದು ಕೇವಲ 359 ರನ್​ಗಳು ಮಾತ್ರ. ಹೀಗಾಗಿ ಈ ಬಾರಿಯ ವಿಶ್ವಕಪ್​ನಲ್ಲಿ ವಿರಾಟ್ ಕೊಹ್ಲಿಯ ಬ್ಯಾಟ್​ನಿಂದ ಮತ್ತೊಂದು ಮೈಲುಗಲ್ಲು ಸೃಷ್ಟಿಯಾದರೂ ಅಚ್ಚರಿಪಡಬೇಕಿಲ್ಲ.

7 / 7
Follow us
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ

Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ

Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ

ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ

ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​

‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ

ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್

ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ

ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್