- Kannada News Photo gallery Cricket photos Virat Kohli can break Virender Sehwag, Rahul Dravid's unique Record In IND vs SA Test Series
IND vs SA: ದ್ರಾವಿಡ್- ಸೆಹ್ವಾಗ್ ದಾಖಲೆ ಮುರಿಯುವ ಹೊಸ್ತಿಲಿನಲ್ಲಿ ಕಿಂಗ್ ಕೊಹ್ಲಿ
IND vs SA: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಡಿಸೆಂಬರ್ 26 ರಂದು ಸೆಂಚುರಿಯನ್‌ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ರಾಹುಲ್ ದ್ರಾವಿಡ್ ಮತ್ತು ವೀರೇಂದ್ರ ಸೆಹ್ವಾಗ್ ಅವರ ದೊಡ್ಡ ದಾಖಲೆಯನ್ನು ಮುರಿಯುವ ಸುವರ್ಣಾವಕಾಶ ಒದಗಿ ಬಂದಿದೆ.
Updated on: Dec 24, 2023 | 7:09 PM

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಡಿಸೆಂಬರ್ 26 ರಂದು ಸೆಂಚುರಿಯನ್‌ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ರಾಹುಲ್ ದ್ರಾವಿಡ್ ಮತ್ತು ವೀರೇಂದ್ರ ಸೆಹ್ವಾಗ್ ಅವರ ದೊಡ್ಡ ದಾಖಲೆಯನ್ನು ಮುರಿಯುವ ಸುವರ್ಣಾವಕಾಶ ಒದಗಿ ಬಂದಿದೆ.

ವಾಸ್ತವವಾಗಿ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್‌ನಲ್ಲಿ ಅತ್ಯಧಿಕ ರನ್ ಕಲೆಹಾಕಿದವರ ಪಟ್ಟಿಯಲ್ಲಿ ಪ್ರಸ್ತುತ 1236 ರನ್ ಕಲೆಹಾಕಿರುವ ವಿರಾಟ್ ಕೊಹ್ಲಿ, ಇನ್ನು ಕೇವಲ 71 ರನ್ ಕಲೆಹಾಕಿದರೆ, ರಾಹುಲ್ ದ್ರಾವಿಡ್ ಮತ್ತು ವೀರೇಂದ್ರ ಸೆಹ್ವಾಗ್ ಅವರ ದಾಖಲೆಯನ್ನು ಮುರಿಯಲ್ಲಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ನಲ್ಲಿ ಸಚಿನ್ ತೆಂಡೂಲ್ಕರ್ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಸಚಿನ್ ಆಫ್ರಿಕಾ ವಿರುದ್ಧ 1741 ಟೆಸ್ಟ್ ರನ್ ಗಳಿಸಿದ್ದಾರೆ.

ಸಚಿನ್ ನಂತರ ಎರಡನೇ ಸ್ಥಾನದಲ್ಲಿರುವ ವೀರೇಂದ್ರ ಸೆಹ್ವಾಗ್ 1306 ರನ್ ಕಲೆಹಾಕಿದ್ದಾರೆ.

ಮೂರನೇ ಸ್ಥಾನದಲ್ಲಿರುವ ಟೀಂ ಇಂಡಿಯಾದ ಹಾಲಿ ಕೋಚ್ ರಾಹುಲ್ ದ್ರಾವಿಡ್ ಆಫ್ರಿಕಾ ವಿರುದ್ಧ 1252 ರನ್ ಗಳಿಸಿದ್ದಾರೆ.

ಈಗ ಈ ಮೂವರ ನಂತರದ ಸ್ಥಾನದಲ್ಲಿರುವ ಕೊಹ್ಲಿ ಇನ್ನು 71 ರನ್ ಕಲೆಹಾಕಿದರೆ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಭಾರತೀಯ ಬ್ಯಾಟ್ಸ್‌ಮನ್ ಆಗಲಿದ್ದಾರೆ.



















