IND vs SA: ದ್ರಾವಿಡ್- ಸೆಹ್ವಾಗ್ ದಾಖಲೆ ಮುರಿಯುವ ಹೊಸ್ತಿಲಿನಲ್ಲಿ ಕಿಂಗ್ ಕೊಹ್ಲಿ

Updated on: Dec 24, 2023 | 7:09 PM

IND vs SA: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಡಿಸೆಂಬರ್ 26 ರಂದು ಸೆಂಚುರಿಯನ್‌ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ರಾಹುಲ್ ದ್ರಾವಿಡ್ ಮತ್ತು ವೀರೇಂದ್ರ ಸೆಹ್ವಾಗ್ ಅವರ ದೊಡ್ಡ ದಾಖಲೆಯನ್ನು ಮುರಿಯುವ ಸುವರ್ಣಾವಕಾಶ ಒದಗಿ ಬಂದಿದೆ.

1 / 6
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಡಿಸೆಂಬರ್ 26 ರಂದು ಸೆಂಚುರಿಯನ್‌ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ರಾಹುಲ್ ದ್ರಾವಿಡ್ ಮತ್ತು ವೀರೇಂದ್ರ ಸೆಹ್ವಾಗ್ ಅವರ ದೊಡ್ಡ ದಾಖಲೆಯನ್ನು ಮುರಿಯುವ ಸುವರ್ಣಾವಕಾಶ ಒದಗಿ ಬಂದಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಡಿಸೆಂಬರ್ 26 ರಂದು ಸೆಂಚುರಿಯನ್‌ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ರಾಹುಲ್ ದ್ರಾವಿಡ್ ಮತ್ತು ವೀರೇಂದ್ರ ಸೆಹ್ವಾಗ್ ಅವರ ದೊಡ್ಡ ದಾಖಲೆಯನ್ನು ಮುರಿಯುವ ಸುವರ್ಣಾವಕಾಶ ಒದಗಿ ಬಂದಿದೆ.

2 / 6

ವಾಸ್ತವವಾಗಿ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದವರ ಪಟ್ಟಿಯಲ್ಲಿ ಪ್ರಸ್ತುತ 1236 ರನ್ ಕಲೆಹಾಕಿರುವ ವಿರಾಟ್ ಕೊಹ್ಲಿ, ಇನ್ನು ಕೇವಲ 71 ರನ್ ಕಲೆಹಾಕಿದರೆ, ರಾಹುಲ್ ದ್ರಾವಿಡ್ ಮತ್ತು ವೀರೇಂದ್ರ ಸೆಹ್ವಾಗ್ ಅವರ ದಾಖಲೆಯನ್ನು ಮುರಿಯಲ್ಲಿದ್ದಾರೆ.

3 / 6

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ನಲ್ಲಿ ಸಚಿನ್ ತೆಂಡೂಲ್ಕರ್ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಸಚಿನ್ ಆಫ್ರಿಕಾ ವಿರುದ್ಧ 1741 ಟೆಸ್ಟ್ ರನ್ ಗಳಿಸಿದ್ದಾರೆ.

4 / 6

ಸಚಿನ್ ನಂತರ ಎರಡನೇ ಸ್ಥಾನದಲ್ಲಿರುವ ವೀರೇಂದ್ರ ಸೆಹ್ವಾಗ್ 1306 ರನ್ ಕಲೆಹಾಕಿದ್ದಾರೆ.

5 / 6

ಮೂರನೇ ಸ್ಥಾನದಲ್ಲಿರುವ ಟೀಂ ಇಂಡಿಯಾದ ಹಾಲಿ ಕೋಚ್ ರಾಹುಲ್ ದ್ರಾವಿಡ್ ಆಫ್ರಿಕಾ ವಿರುದ್ಧ 1252 ರನ್ ಗಳಿಸಿದ್ದಾರೆ.

6 / 6

ಈಗ ಈ ಮೂವರ ನಂತರದ ಸ್ಥಾನದಲ್ಲಿರುವ ಕೊಹ್ಲಿ ಇನ್ನು 71 ರನ್ ಕಲೆಹಾಕಿದರೆ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಭಾರತೀಯ ಬ್ಯಾಟ್ಸ್‌ಮನ್ ಆಗಲಿದ್ದಾರೆ.

Loading...
Unable to load recommendations.
Follow Us