AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಕಿಂಗ್ ಈಸ್ ಬ್ಯಾಕ್: ಸ್ಪೋಟಕ ಸೆಂಚುರಿ ಸಿಡಿಸಿದ ವಿರಾಟ್ ಕೊಹ್ಲಿ

Virat Kohli: ಪರ್ತ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಕರ್ಷಕ ಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಹೊಸ ಮೈಲುಗಲ್ಲು ದಾಟಿದ್ದಾರೆ. ಈ ಶತಕದೊಂದಿಗೆ ಕಿಂಗ್ ಕೊಹ್ಲಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 2 ಸಾವಿರ ರನ್ ಪೂರೈಸಿದ 7ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on:Nov 24, 2024 | 2:53 PM

Share
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲೇ ವಿರಾಟ್ ಕೊಹ್ಲಿ ಅಬ್ಬರಿಸಿದ್ದಾರೆ. ಪರ್ತ್​ನ ಒಪ್ಟಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ವಿರಾಟ್ ಕೊಹ್ಲಿ 143 ಎಸೆತಗಳಲ್ಲಿ ಸ್ಪೋಟಕ ಶತಕ ಸಿಡಿಸಿದ್ದಾರೆ.

1 / 5
ಇದು ವಿರಾಟ್ ಕೊಹ್ಲಿಯ ಬ್ಯಾಟ್​ನಿಂದ ವರ್ಷಗಳ ಬಳಿಕ ಮೂಡಿಬರುತ್ತಿರುವ ಟೆಸ್ಟ್ ಶತಕ ಎಂಬುದು ವಿಶೇಷ. ಅಂದರೆ 2023ರ ಜುಲೈ 21ರಂದು ವೆಸ್ಟ್ ಇಂಡೀಸ್ ವಿರುದ್ಧ ಕೊನೆಯ ಟೆಸ್ಟ್ ಶತಕ ಬಾರಿಸಿದ್ದರು. ಇದಾದ ಬಳಿಕ ಅವರು ಮೂರಂಕಿ ಮೊತ್ತ ಕಲೆಹಾಕಿರಲಿಲ್ಲ.

2 / 5
ಇದೀಗ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಆಸೀಸ್​ ಪಿಚ್​ನಲ್ಲೇ ಅಬ್ಬರಿಸುವ ಮೂಲಕ ಮೂರನೇ ಟೆಸ್ಟ್ ಕೆರಿಯರ್​ನ 30ನೇ ಶತಕ ಪೂರೈಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಮೂವತ್ತು ಸೆಂಚುರಿ ಸಿಡಿಸಿದ ವಿಶ್ವದ 16ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 5
ಈ ಶತಕದೊಂದಿಗೆ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್​ನಲ್ಲಿ ಅತ್ಯಧಿಕ ಶತಕ ಬಾರಿಸಿದ ಭಾರತೀಯ ಬ್ಯಾಟರ್​ಗಳ ಪಟ್ಟಿಯಲ್ಲೂ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ 9 ಶತಕಗಳೊಂದಿಗೆ ಸಚಿನ್ ತೆಂಡೂಲ್ಕರ್ ಮೊದಲ ಸ್ಥಾನದಲ್ಲಿದ್ದರು. ಇದೀಗ ಆಸ್ಟ್ರೇಲಿಯಾ ವಿರುದ್ಧ 9ನೇ ಟೆಸ್ಟ್ ಸೆಂಚುರಿ ಸಿಡಿಸಿ ವಿರಾಟ್ ಕೊಹ್ಲಿ ಈ ದಾಖಲೆಯನ್ನು ಸರಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

4 / 5
ಇನ್ನು ವಿರಾಟ್ ಕೊಹ್ಲಿಯ ಈ ಭರ್ಜರಿ ಶತಕದೊಂದಿಗೆ ಟೀಮ್ ಇಂಡಿಯಾ 6 ವಿಕೆಟ್ ಕಳೆದುಕೊಂಡು 487 ರನ್​ಗಳಿಸಿ ದ್ವಿತೀಯ ಇನಿಂಗ್ಸ್ ಡಿಕ್ಲೇರ್ ಘೋಷಿಸಿದೆ. ಅತ್ತ ಮೊದಲ ಇನಿಂಗ್ಸ್​ನಲ್ಲಿ 46 ರನ್​ಗಳ ಹಿನ್ನಡೆ ಹೊಂದಿದ್ದ ಆಸ್ಟ್ರೇಲಿಯಾ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ ಗೆಲ್ಲಲು 534 ರನ್​ ಕಲೆಹಾಕಬೇಕಿದೆ.

5 / 5

Published On - 2:45 pm, Sun, 24 November 24

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್

ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!

ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ