Virat Kohli: ಭರ್ಜರಿ ಸೆಂಚುರಿ ಸಿಡಿಸಿದ ಕಿಂಗ್ ಕೊಹ್ಲಿ
TV9 Web | Updated By: ಝಾಹಿರ್ ಯೂಸುಫ್
Updated on:
Jan 10, 2023 | 4:53 PM
Virat Kohli Century: ಅರ್ಧಶತಕದ ಬೆನ್ನಲ್ಲೇ ವಿಕೆಟ್ ಕೀಪರ್ ಕುಸಾಲ್ ಮೆಂಡಿಸ್ ವಿರಾಟ್ ಕೊಹ್ಲಿಯ ಕ್ಯಾಚ್ ಕೈಚೆಲ್ಲಿದ್ದರು. ಇದರ ಸಂಪೂರ್ಣ ಲಾಭ ಪಡೆದ ಕಿಂಗ್ ಕೊಹ್ಲಿ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದರು.
1 / 5
ಗುವಾಹಟಿಯಲ್ಲಿ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕಿಂಗ್ ಕೊಹ್ಲಿ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ 47 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು.
2 / 5
ಅರ್ಧಶತಕದ ಬೆನ್ನಲ್ಲೇ ವಿಕೆಟ್ ಕೀಪರ್ ಕುಸಾಲ್ ಮೆಂಡಿಸ್ ವಿರಾಟ್ ಕೊಹ್ಲಿಯ ಕ್ಯಾಚ್ ಕೈಚೆಲ್ಲಿದ್ದರು. ಇದರ ಸಂಪೂರ್ಣ ಲಾಭ ಪಡೆದ ಕಿಂಗ್ ಕೊಹ್ಲಿ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದರು. ಅದರಂತೆ 69 ಎಸೆತಗಳಲ್ಲಿ 81 ಬಾರಿಸಿದ್ದರು. ಈ ವೇಳೆ ದುಸನ್ ಶಾನಕ ಕೂಡ ಕೊಹ್ಲಿಯ ಕ್ಯಾಚ್ ಕೈಬಿಟ್ಟರು. ಇದಾದ ಬಳಿಕ ಆಕರ್ಷಕ ಹೊಡೆತಗಳ ಮೂಲಕ ಗಮನ ಸೆಳೆದ ಕಿಂಗ್ ಕೊಹ್ಲಿ ಶತಕದತ್ತ ಮುನ್ನುಗ್ಗಿದರು.
3 / 5
ಅದರಂತೆ 80 ಎಸೆತಗಳಲ್ಲಿ 10 ಫೋರ್ ಹಾಗೂ 1 ಸಿಕ್ಸ್ನೊಂದಿಗೆ ವಿರಾಟ್ ಕೊಹ್ಲಿ ಶತಕ ಪೂರೈಸಿದರು. ವಿಶೇಷ ಎಂದರೆ ಇದು ಕಿಂಗ್ ಕೊಹ್ಲಿಯ 45ನೇ ಏಕದಿನ ಶತಕವಾಗಿದೆ.
4 / 5
ಇದರೊಂದಿಗೆ ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ಸೆಂಚುರಿ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಕಿಂಗ್ ಕೊಹ್ಲಿ 2ನೇ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಅಲ್ಲದೆ ಒನ್ಡೇ ಕ್ರಿಕೆಟ್ನಲ್ಲಿ 45 ಶತಕ ಬಾರಿಸಿದ 2ನೇ ಬ್ಯಾಟರ್ ಎಂಬ ವಿಶ್ವ ದಾಖಲೆ ಬರೆದಿದ್ದಾರೆ.
5 / 5
ಇದಕ್ಕೂ ಮುನ್ನ ಏಕದಿನ ಕ್ರಿಕೆಟ್ನಲ್ಲಿ ಸಚಿನ್ ತೆಂಡೂಲ್ಕರ್ 45+ ಶತಕ ಬಾರಿಸಿದ್ದರು. ಇದೀಗ ಈ ಸಾಧನೆ ಮಾಡಿದ 2ನೇ ಬ್ಯಾಟರ್ ಆಗಿ ಕಿಂಗ್ ಕೊಹ್ಲಿ ಕಾಣಿಸಿಕೊಂಡಿರುವುದು ವಿಶೇಷ.
Published On - 4:53 pm, Tue, 10 January 23