Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿ ಮುಂದಿದೆ ಮೂರು ಭರ್ಜರಿ ದಾಖಲೆಗಳು

India vs New Zealand: ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯು ಬುಧವಾರದಿಂದ ಶುರುವಾಗಲಿದೆ. ಮೊದಲ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದರೆ, ಎರಡನೇ ಪಂದ್ಯವು ಪುಣೆಯಲ್ಲಿ ನಡೆಯಲಿದೆ. ಹಾಗೆಯೇ ಮೂರನೇ ಪಂದ್ಯಕ್ಕೆ ಮುಂಬೈನ ವಾಂಖೆಡೆ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಝಾಹಿರ್ ಯೂಸುಫ್
|

Updated on: Oct 14, 2024 | 11:26 AM

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಸರಣಿಗೆ ದಿನಗಣನೆ ಶುರುವಾಗಿದೆ. ಅಕ್ಟೋಬರ್ 16 ರಿಂದ ಆರಂಭವಾಗಲಿರುವ ಈ ಸರಣಿಯ ಮೊದಲ ಟೆಸ್ಟ್ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದಲ್ಲಿ ಅಬ್ಬರಿಸಿದರೆ ಕಿಂಗ್ ಕೊಹ್ಲಿ ಹೆಸರಿಗೆ ಕೆಲ ಭರ್ಜರಿ ದಾಖಲೆಗಳು ಸೇರ್ಪಡೆಯಾಗಲಿದೆ. ಹಾಗಿದ್ರೆ ವಿರಾಟ್ ಕೊಹ್ಲಿಯ ಮುಂದಿರುವ ದಾಖಲೆಗಳಾವುವು ಎಂದು ನೋಡೋಣ...

1 / 5
ವಿರಾಟ್ ಕೊಹ್ಲಿ ನ್ಯೂಝಿಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್​ನಲ್ಲಿ ಈವರೆಗೆ 866 ರನ್​ ಕಲೆಹಾಕಿದ್ದಾರೆ. 11 ಪಂದ್ಯಗಳಲ್ಲಿ 45.57 ಸರಾಸರಿಯಲ್ಲಿ ರನ್ ಪೇರಿಸಿರುವ ಕೊಹ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 144 ರನ್​ಗಳನ್ನು ಬಾರಿಸಿದರೆ ಕಿವೀಸ್ ವಿರುದ್ಧ 1000 ರನ್ ಕಲೆಹಾಕಿದ ಭಾರತದ ಮೂರನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಇದಕ್ಕೂ ಮುನ್ನ ರಾಹುಲ್ ದ್ರಾವಿಡ್ (1,659) ಮತ್ತು ಸಚಿನ್ ತೆಂಡೂಲ್ಕರ್ (1,595) ಮಾತ್ರ ಈ ಸಾಧನೆ ಮಾಡಿದ್ದಾರೆ.

2 / 5
ಟೆಸ್ಟ್ ಕ್ರಿಕೆಟ್​ನಲ್ಲಿ 9000 ರನ್ ಪೂರೈಸಲು ವಿರಾಟ್ ಕೊಹ್ಲಿಗೆ ಬೇಕಿರುವುದು ಕೇವಲ 53 ರನ್​ಗಳು ಮಾತ್ರ. ಮೊದಲ ಟೆಸ್ಟ್ ಪಂದ್ಯದಲ್ಲಿ 53 ರನ್ ಬಾರಿಸಿದರೆ ಭಾರತದ ಪರ ಟೆಸ್ಟ್​ನಲ್ಲಿ 9 ಸಾವಿರ ರನ್​ಗಳ ಗಡಿದಾಟಿದ ನಾಲ್ಕನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಈ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ (15,921), ರಾಹುಲ್ ದ್ರಾವಿಡ್ (13,265), ಮತ್ತು ಸುನಿಲ್ ಗವಾಸ್ಕರ್ (10,122) ಮೊದಲ ಮೂರು ಸ್ಥಾನಗಳನ್ನು ಅಲಂಕರಿಸಿದ್ದಾರೆ.

3 / 5
ಹಾಗೆಯೇ ನ್ಯೂಝಿಲೆಂಡ್ ವಿರುದ್ಧ ತವರಿನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಬರೆಯಲು ವಿರಾಟ್ ಕೊಹ್ಲಿಗೆ 337 ರನ್​ಗಳ ಅವಶ್ಯಕತೆಯಿದೆ. ಈ ಸರಣಿಯ ಮೂರು ಪಂದ್ಯಗಳಿಂದ ಕಿಂಗ್ ಕೊಹ್ಲಿ 337 ರನ್​ ಕಲೆಹಾಕಿದರೆ, ನ್ಯೂಝಿಲೆಂಡ್ ವಿರುದ್ಧ ತವರಿನಲ್ಲಿ ಅತೀ ಹೆಚ್ಚು ರನ್ ಬಾರಿಸಿರುವ ರಾಹುಲ್ ದ್ರಾವಿಡ್ (893 ರನ್) ಅವರ ದಾಖಲೆಯನ್ನು ಮುರಿಯಬಹುದು.

4 / 5
ಅದರಂತೆ ನ್ಯೂಝಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಕಡೆಯಿಂದ ಈ ಭರ್ಜರಿ ದಾಖಲೆಗಳನ್ನು ನಿರೀಕ್ಷಿಸಬಹುದು. ಅದರಲ್ಲೂ ಮೊದಲ ಪಂದ್ಯದಲ್ಲೇ ಕಿಂಗ್ ಕೊಹ್ಲಿ ಬ್ಯಾಟ್​ನಿಂದ 9000 ರನ್​ಗಳ ಮೈಲುಗಲ್ಲನ್ನು ಎದುರು ನೋಡಬಹುದು.

5 / 5
Follow us
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ

ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ

ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ

ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ

ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್

ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ

ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ