Virat Kohli: ವಿರಾಟ್ ಕೊಹ್ಲಿ ಮುಂದಿದೆ ಮೂರು ಭರ್ಜರಿ ದಾಖಲೆಗಳು
India vs New Zealand: ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯು ಬುಧವಾರದಿಂದ ಶುರುವಾಗಲಿದೆ. ಮೊದಲ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದರೆ, ಎರಡನೇ ಪಂದ್ಯವು ಪುಣೆಯಲ್ಲಿ ನಡೆಯಲಿದೆ. ಹಾಗೆಯೇ ಮೂರನೇ ಪಂದ್ಯಕ್ಕೆ ಮುಂಬೈನ ವಾಂಖೆಡೆ ಸ್ಟೇಡಿಯಂ ಆತಿಥ್ಯವಹಿಸಲಿದೆ.
1 / 5
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಸರಣಿಗೆ ದಿನಗಣನೆ ಶುರುವಾಗಿದೆ. ಅಕ್ಟೋಬರ್ 16 ರಿಂದ ಆರಂಭವಾಗಲಿರುವ ಈ ಸರಣಿಯ ಮೊದಲ ಟೆಸ್ಟ್ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದಲ್ಲಿ ಅಬ್ಬರಿಸಿದರೆ ಕಿಂಗ್ ಕೊಹ್ಲಿ ಹೆಸರಿಗೆ ಕೆಲ ಭರ್ಜರಿ ದಾಖಲೆಗಳು ಸೇರ್ಪಡೆಯಾಗಲಿದೆ. ಹಾಗಿದ್ರೆ ವಿರಾಟ್ ಕೊಹ್ಲಿಯ ಮುಂದಿರುವ ದಾಖಲೆಗಳಾವುವು ಎಂದು ನೋಡೋಣ...
2 / 5
ವಿರಾಟ್ ಕೊಹ್ಲಿ ನ್ಯೂಝಿಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್ನಲ್ಲಿ ಈವರೆಗೆ 866 ರನ್ ಕಲೆಹಾಕಿದ್ದಾರೆ. 11 ಪಂದ್ಯಗಳಲ್ಲಿ 45.57 ಸರಾಸರಿಯಲ್ಲಿ ರನ್ ಪೇರಿಸಿರುವ ಕೊಹ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 144 ರನ್ಗಳನ್ನು ಬಾರಿಸಿದರೆ ಕಿವೀಸ್ ವಿರುದ್ಧ 1000 ರನ್ ಕಲೆಹಾಕಿದ ಭಾರತದ ಮೂರನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಇದಕ್ಕೂ ಮುನ್ನ ರಾಹುಲ್ ದ್ರಾವಿಡ್ (1,659) ಮತ್ತು ಸಚಿನ್ ತೆಂಡೂಲ್ಕರ್ (1,595) ಮಾತ್ರ ಈ ಸಾಧನೆ ಮಾಡಿದ್ದಾರೆ.
3 / 5
ಟೆಸ್ಟ್ ಕ್ರಿಕೆಟ್ನಲ್ಲಿ 9000 ರನ್ ಪೂರೈಸಲು ವಿರಾಟ್ ಕೊಹ್ಲಿಗೆ ಬೇಕಿರುವುದು ಕೇವಲ 53 ರನ್ಗಳು ಮಾತ್ರ. ಮೊದಲ ಟೆಸ್ಟ್ ಪಂದ್ಯದಲ್ಲಿ 53 ರನ್ ಬಾರಿಸಿದರೆ ಭಾರತದ ಪರ ಟೆಸ್ಟ್ನಲ್ಲಿ 9 ಸಾವಿರ ರನ್ಗಳ ಗಡಿದಾಟಿದ ನಾಲ್ಕನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಈ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ (15,921), ರಾಹುಲ್ ದ್ರಾವಿಡ್ (13,265), ಮತ್ತು ಸುನಿಲ್ ಗವಾಸ್ಕರ್ (10,122) ಮೊದಲ ಮೂರು ಸ್ಥಾನಗಳನ್ನು ಅಲಂಕರಿಸಿದ್ದಾರೆ.
4 / 5
ಹಾಗೆಯೇ ನ್ಯೂಝಿಲೆಂಡ್ ವಿರುದ್ಧ ತವರಿನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಬರೆಯಲು ವಿರಾಟ್ ಕೊಹ್ಲಿಗೆ 337 ರನ್ಗಳ ಅವಶ್ಯಕತೆಯಿದೆ. ಈ ಸರಣಿಯ ಮೂರು ಪಂದ್ಯಗಳಿಂದ ಕಿಂಗ್ ಕೊಹ್ಲಿ 337 ರನ್ ಕಲೆಹಾಕಿದರೆ, ನ್ಯೂಝಿಲೆಂಡ್ ವಿರುದ್ಧ ತವರಿನಲ್ಲಿ ಅತೀ ಹೆಚ್ಚು ರನ್ ಬಾರಿಸಿರುವ ರಾಹುಲ್ ದ್ರಾವಿಡ್ (893 ರನ್) ಅವರ ದಾಖಲೆಯನ್ನು ಮುರಿಯಬಹುದು.
5 / 5
ಅದರಂತೆ ನ್ಯೂಝಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಕಡೆಯಿಂದ ಈ ಭರ್ಜರಿ ದಾಖಲೆಗಳನ್ನು ನಿರೀಕ್ಷಿಸಬಹುದು. ಅದರಲ್ಲೂ ಮೊದಲ ಪಂದ್ಯದಲ್ಲೇ ಕಿಂಗ್ ಕೊಹ್ಲಿ ಬ್ಯಾಟ್ನಿಂದ 9000 ರನ್ಗಳ ಮೈಲುಗಲ್ಲನ್ನು ಎದುರು ನೋಡಬಹುದು.