Virat Kohli: ಕ್ಯಾಚ್ ಹಿಡಿದು ಹಲವು ದಾಖಲೆ ಬರೆದ ವಿರಾಟ್ ಕೊಹ್ಲಿ
TV9 Web | Updated By: ಝಾಹಿರ್ ಯೂಸುಫ್
Updated on:
Sep 04, 2023 | 8:31 PM
Virat Kohli Records: ಕಿಂಗ್ ಕೊಹ್ಲಿ 277 ಏಕದಿನ ಪಂದ್ಯಗಳಿಂದ ಒಟ್ಟು 143 ಕ್ಯಾಚ್ಗಳನ್ನು ಹಿಡಿದು ಈ ಸಾಧನೆ ಮಾಡಿದ್ದಾರೆ. ಹಾಗೆಯೇ ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ಕ್ಯಾಚ್ಗಳನ್ನು ಹಿಡಿದ ವಿಶ್ವದ ನಾಲ್ಕನೇ ಫೀಲ್ಡರ್ ಎನಿಸಿಕೊಂಡಿದ್ದಾರೆ.
1 / 10
ಏಷ್ಯಾಕಪ್ನ 5ನೇ ಪಂದ್ಯದಲ್ಲಿ ಒಂದು ಕ್ಯಾಚ್ ಹಿಡಿಯುವ ಮೂಲಕ ವಿರಾಟ್ ಕೊಹ್ಲಿ 3 ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದರ ಜೊತೆಗೆ ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ಕ್ಯಾಚ್ ಹಿಡಿದ ವಿಶ್ವದ 4ನೇ ಆಟಗಾರ ಎನಿಸಿಕೊಂಡಿದ್ದಾರೆ.
2 / 10
ನೇಪಾಳ ವಿರುದ್ಧದ ಈ ಪಂದ್ಯದಲ್ಲಿ ಆಸಿಫ್ ಶೇಖ್ ಅವರ ಕ್ಯಾಚ್ ಹಿಡಿಯುವ ಮೂಲಕ ವಿರಾಟ್ ಕೊಹ್ಲಿ ಮಲ್ಟಿ ನೇಷನ್ ಟೂರ್ನಿಗಳಲ್ಲಿ 100 ಕ್ಯಾಚ್ಗಳನ್ನು ಹಿಡಿದ 2ನೇ ಭಾರತೀಯ ಎನಿಸಿಕೊಂಡರು.
3 / 10
ಅಲ್ಲದೆ ಬಹು ರಾಷ್ಟ್ರಗಳು ಪಾಲ್ಗೊಳ್ಳುವ ಟೂರ್ನಿಯಲ್ಲಿ ಅತ್ಯಧಿಕ ಕ್ಯಾಚ್ ಹಿಡಿದಿದ್ದ ಭಾರತ ತಂಡ ಮಾಜಿ ನಾಯಕ ಮೊಹಮ್ಮದ್ ಅಝರುದ್ದೀನ್ ಅವರ ದಾಖಲೆಯನ್ನು ಸರಿಗಟ್ಟಿದರು.
4 / 10
ಅಝರ್ ಬಹು ರಾಷ್ಟ್ರಗಳ ಟೂರ್ನಿಯಲ್ಲಿ 100 ಕ್ಯಾಚ್ಗಳನ್ನು ಹಿಡಿದ ಮೊದಲ ಭಾರತೀಯ ಎಂಬ ದಾಖಲೆ ನಿರ್ಮಿಸಿದ್ದರು. ಇದೀಗ ವಿರಾಟ್ ಕೊಹ್ಲಿ ಕೂಡ ನೂರು ಕ್ಯಾಚ್ಗಳನ್ನು ಹಿಡಿಯುವ ಮೂಲಕ ಈ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ 2ನೇ ಭಾರತೀಯ ಎನಿಸಿಕೊಂಡಿದ್ದಾರೆ.
5 / 10
ಹಾಗೆಯೇ ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ಕ್ಯಾಚ್ಗಳನ್ನು ಹಿಡಿದ 2ನೇ ಭಾರತೀಯ ಎಂಬ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ. ಈ ಪಟ್ಟಿಯಲ್ಲೂ ಅಝರುದ್ದೀನ್ ಅಗ್ರಸ್ಥಾನದಲ್ಲಿದ್ದಾರೆ.
6 / 10
ಮೊಹಮ್ಮದ್ ಅಝರುದ್ದೀನ್ 334 ಏಕದಿನ ಪಂದ್ಯಗಳಲ್ಲಿ ಒಟ್ಟು 156 ಕ್ಯಾಚ್ಗಳನ್ನು ಹಿಡಿದು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಇದೀಗ ವಿರಾಟ್ ಕೊಹ್ಲಿ ದ್ವಿತೀಯ ಸ್ಥಾನಕ್ಕೇರಿರುವುದು ವಿಶೇಷ.
7 / 10
ಕಿಂಗ್ ಕೊಹ್ಲಿ 277 ಏಕದಿನ ಪಂದ್ಯಗಳಿಂದ ಒಟ್ಟು 143 ಕ್ಯಾಚ್ಗಳನ್ನು ಹಿಡಿದು ಈ ಸಾಧನೆ ಮಾಡಿದ್ದಾರೆ. ಹಾಗೆಯೇ ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ಕ್ಯಾಚ್ಗಳನ್ನು ಹಿಡಿದ ವಿಶ್ವದ ನಾಲ್ಕನೇ ಫೀಲ್ಡರ್ ಎನಿಸಿಕೊಂಡಿದ್ದಾರೆ.
8 / 10
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಶ್ರೀಲಂಕಾದ ಮಹೇಲ ಜಯವರ್ಧನೆ. ಜಯವರ್ಧನೆ 218 ಕ್ಯಾಚ್ಗಳನ್ನು ಹಿಡಿದು ಅಗ್ರಸ್ಥಾನದಲ್ಲಿದ್ದರೆ, 160 ಕ್ಯಾಚ್ ಹಿಡಿದಿರುವ ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಹಾಗೆಯೇ ಭಾರತದ ಅಝರುದ್ದೀನ್ 156 ಕ್ಯಾಚ್ಗಳೊಂದಿಗೆ 3ನೇ ಸ್ಥಾನ ಅಲಂಕರಿಸಿದರೆ, 143 ಕ್ಯಾಚ್ ಹಿಡಿದಿರುವ ವಿರಾಟ್ ಕೊಹ್ಲಿ 4ನೇ ಸ್ಥಾನಕ್ಕೇರಿದ್ದಾರೆ.
9 / 10
ಇದೀಗ ಕೇವಲ 277 ಏಕದಿನ ಪಂದ್ಯಗಳ ಮೂಲಕ ಒಟ್ಟು 143 ಕ್ಯಾಚ್ ಹಿಡಿದಿರುವ ವಿರಾಟ್ ಕೊಹ್ಲಿ 4ನೇ ಸ್ಥಾನಕ್ಕೇರಿದ್ದಾರೆ. ಈ ಮೂಲಕ ಫೀಲ್ಡಿಂಗ್ನಲ್ಲೂ ಹೊಸ ದಾಖಲೆ ನಿರ್ಮಿಸುವತ್ತ ದಾಪುಗಾಲಿಟ್ಟಿದ್ದಾರೆ.
10 / 10
ಅಂದರೆ ಮುಂಬರುವ ಪಂದ್ಯಗಳಲ್ಲಿ 14 ಕ್ಯಾಚ್ಗಳನ್ನು ಹಿಡಿದರೆ ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ಕ್ಯಾಚ್ಗಳನ್ನು ಹಿಡಿದ ದಾಖಲೆ ವಿರಾಟ್ ಕೊಹ್ಲಿ ಪಾಲಾಗಲಿದೆ. ಸದ್ಯ ಏಷ್ಯಾಕಪ್ ಆಡುತ್ತಿರುವ ಕೊಹ್ಲಿ ಮುಂಬರುವ ಏಕದಿನ ವಿಶ್ವಕಪ್ ಮೂಲಕ ಈ ಸಾಧನೆ ಮಾಡಲಿದ್ದಾರಾ ಕಾದು ನೋಡಬೇಕಿದೆ.
Published On - 8:29 pm, Mon, 4 September 23