Virat Kohli: ಕಿಂಗ್ ಕೊಹ್ಲಿಯ ಅಂತರರಾಷ್ಟ್ರೀಯ ವೃತ್ತಿಜೀವನಕ್ಕೆ ಇಂದಿಗೆ ಭರ್ತಿ 16 ವರ್ಷ..!

16 Years Of Virat Kohli: ಟೀಂ ಇಂಡಿಯಾದ ಅನುಭವಿ ಆಟಗಾರ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಕಾಲಿರಿಸಿ ಇಂದಿಗೆ ಭರ್ತಿ 16 ವರ್ಷ. ಅಂದರೆ 16 ವರ್ಷಗಳ ಹಿಂದೆ ಇದೇ ದಿನ ವಿರಾಟ್ ಕೊಹ್ಲಿ ತಮ್ಮ ಚೊಚ್ಚಲ ಅಂತರರಾಷ್ಟ್ರೀಯ ಪಂದ್ಯವನ್ನಾಡಿದ್ದರು. ಅಂದಿನಿಂದ ಇಂದಿನವರೆಗೆ ಕ್ರಿಕೆಟ್ ಲೋಕದಲ್ಲಿ ಸಾಮ್ರಾಟನಾಗಿ ಮೆರೆದಿರುವ ಕಿಂಗ್ ಕೊಹ್ಲಿ ಲೆಕ್ಕವಿಲ್ಲದಷ್ಟು ದಾಖಲೆಗಳನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on: Aug 18, 2024 | 4:24 PM

ಟೀಂ ಇಂಡಿಯಾದ ಅನುಭವಿ ಆಟಗಾರ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಕಾಲಿರಿಸಿ ಇಂದಿಗೆ ಭರ್ತಿ 16 ವರ್ಷ. ಅಂದರೆ 16 ವರ್ಷಗಳ ಹಿಂದೆ ಇದೇ ದಿನ ವಿರಾಟ್ ಕೊಹ್ಲಿ ತಮ್ಮ ಚೊಚ್ಚಲ ಅಂತರರಾಷ್ಟ್ರೀಯ ಪಂದ್ಯವನ್ನಾಡಿದ್ದರು. ಅಂದಿನಿಂದ ಇಂದಿನವರೆಗೆ ಕ್ರಿಕೆಟ್ ಲೋಕದಲ್ಲಿ ಸಾಮ್ರಾಟನಾಗಿ ಮೆರೆದಿರುವ ಕಿಂಗ್ ಕೊಹ್ಲಿ ಲೆಕ್ಕವಿಲ್ಲದಷ್ಟು ದಾಖಲೆಗಳನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.

1 / 8
2008 ರಲ್ಲಿ ಭಾರತಕ್ಕೆ ಅಂಡರ್ 19 ವಿಶ್ವಕಪ್ ಗೆದ್ದುಕೊಟ್ಟಿದ್ದ ಕೊಹ್ಲಿಗೆ ಭಾರತ ತಂಡದ ಬಾಗಿಲು ತೆರೆದಿತ್ತು. ಆಗಸ್ಟ್ 18, 2008 ರಂದು ಶ್ರೀಲಂಕಾ ವಿರುದ್ಧ ತಮ್ಮ ಚೊಚ್ಚಲ ಏಕದಿನ ಪಂದ್ಯವನ್ನಾಡಿದ್ದ ಕೊಹ್ಲಿಯ ಅಂತರರಾಷ್ಟ್ರೀಯ ವೃತ್ತಿಜೀವನಕ್ಕೆ ನಿರೀಕ್ಷಿತ ಆರಂಭ ಸಿಕ್ಕಿರಲಿಲ್ಲ. ಕೊಹ್ಲಿ ತಮ್ಮ ಮೊದಲ ಪಂದ್ಯದಲ್ಲಿ ಕೇವಲ 12 ರನ್ ಕಲೆಹಾಕಲಷ್ಟೇ ಶಕ್ತರಾಗಿದ್ದರು.

2 / 8
ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದ ಕೊಹ್ಲಿ ಸೋಲಿನೊಂದಿಗೆ ತಮ್ಮ ವೃತ್ತಿಬದುಕನ್ನು ಆರಂಭಿಸಿದ್ದರು. ಕೊಹ್ಲಿಯ ಚೊಚ್ಚಲ ಪಂದ್ಯವನ್ನು ಟೀಂ ಇಂಡಿಯಾ 8 ವಿಕೆಟ್‌ಗಳಿಂದ ಸೋತಿತ್ತು.

3 / 8
ಈ ಪಂದ್ಯದಲ್ಲಿ ಗೌತಮ್ ಗಂಭೀರ್ ಜೊತೆ ಆರಂಭಿಕರಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ 12 ರನ್‌ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದ್ದರು. ತಮ್ಮ ಇನ್ನಿಂಗ್ಸ್‌ನಲ್ಲಿ 22 ಎಸೆತಗಳನ್ನು ಎದುರಿಸಿದ್ದ ಕೊಹ್ಲಿ 1 ಬೌಂಡರಿಯನ್ನೂ ಹೊಡೆದಿದ್ದರು.

4 / 8
2008 ರಲ್ಲಿ ಏಕದಿನ ಕ್ರಿಕೆಟ್​ಗೆ ಕಾಲಿಟ್ಟಿದ್ದ ಕೊಹ್ಲಿ 2 ವರ್ಷಗಳ ನಂತರ ಅಂದರೆ 2010 ರಲ್ಲಿ ಜಿಂಬಾಬ್ವೆ ವಿರುದ್ಧ ಟಿ20 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಜೂನ್ 12, 2010 ರಂದು ಆಡಿದ ಮೊದಲ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ 21 ಎಸೆತಗಳಲ್ಲಿ ಅಜೇಯ 26 ರನ್ ಬಾರಿಸಿದ್ದರು. ಈ ಪಂದ್ಯವನ್ನು ಟೀಂ ಇಂಡಿಯಾ 6 ವಿಕೆಟ್‌ಗಳಿಂದ ಗೆದ್ದುಕೊಂಡಿತ್ತು. ಈ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ 1 ಸಿಕ್ಸರ್ ಮತ್ತು 3 ಬೌಂಡರಿಗಳನ್ನು ಬಾರಿಸಿದ್ದರು.

5 / 8
ಇನ್ನು ಜೂನ್ 20, 2011 ರಂದು ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ವಿರಾಟ್ ಕೊಹ್ಲಿ, ವೆಸ್ಟ್ ಇಂಡೀಸ್ ವಿರುದ್ಧ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡಿದ್ದರು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ 4 ರನ್ ಗಳಿಸಿ ಔಟಾದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಅವರು 54 ಎಸೆತಗಳಲ್ಲಿ 15 ರನ್ ಬಾರಿಸಿದರು.

6 / 8
ಅಂದಿನಿಂದ ಇಂದಿನವರೆಗೆ ಟೀಂ ಇಂಡಿಯಾ ಪರ ಅನೇಕ ಸ್ಮರಣೀಯ ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ತಮ್ಮ ವೃತ್ತಿ ಜೀವನದಲ್ಲಿ ಒಟ್ಟು 113 ಟೆಸ್ಟ್, 295 ಏಕದಿನ ಮತ್ತು 125 ಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.  ಟೆಸ್ಟ್ ಕ್ರಿಕೆಟ್‌ನಲ್ಲಿ ಆಡಿರುವ 191 ಇನ್ನಿಂಗ್ಸ್‌ಗಳಲ್ಲಿ ಕೊಹ್ಲಿ, 29 ಶತಕ ಮತ್ತು 30 ಅರ್ಧ ಶತಕಗಳು ಸೇರಿದಂತೆ ಒಟ್ಟಿ 8848 ರನ್ ಗಳಿಸಿದ್ದಾರೆ. ಟೆಸ್ಟ್​ನಲ್ಲಿ ಅವರ ಗರಿಷ್ಠ ವೈಯಕ್ತಿಕ ಸ್ಕೋರ್ ಔಟಾಗದೆ 254 ರನ್ ಆಗಿದೆ.

7 / 8
ಹಾಗೆಯೇ ಏಕದಿನ ಕ್ರಿಕೆಟ್‌ನ 283 ಇನ್ನಿಂಗ್ಸ್‌ಗಳನ್ನಾಡಿರುವ ವಿರಾಟ್, 50 ಶತಕಗಳು ಮತ್ತು 72 ಅರ್ಧ ಶತಕಗಳು ಸೇರಿದಂತೆ 13906 ರನ್ ಬಾರಿಸಿದ್ದಾರೆ. ಇನ್ನು ಟಿ20 ಕ್ರಿಕೆಟ್​ನಲ್ಲಿ 117 ಇನ್ನಿಂಗ್ಸ್‌ಗಳನ್ನಾಡಿರುವ ಕೊಹ್ಲಿ, 1 ಶತಕ ಮತ್ತು 38 ಅರ್ಧ ಶತಕಗಳು ಸೇರಿದಂತೆ ಒಟ್ಟು 4188 ರನ್ ಗಳಿಸಿದ್ದಾರೆ.

8 / 8
Follow us
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ

ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ

ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್

ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ

Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ

ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್

ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ

ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ

ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ