- Kannada News Photo gallery Cricket photos Virat Kohli Completes 300 Catches in International Cricket
Virat Kohli: ಫೀಲ್ಡಿಂಗ್ ಮೂಲಕವೇ ಹೊಸ ದಾಖಲೆ ನಿರ್ಮಿಸಿದ ವಿರಾಟ್ ಕೊಹ್ಲಿ
Virat Kohli Records: ಈ ಪಂದ್ಯದಲ್ಲಿ ಟಾಸ್ ಗೆದ್ದ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡವು 480 ರನ್ಗಳಿಸಿ ಆಲೌಟ್ ಆಗಿತ್ತು. ಈ ವೇಳೆ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಥನ್ ಲಿಯಾನ್ ಅಶ್ವಿನ್ ಎಸೆತದಲ್ಲಿ ಕೊಹ್ಲಿಗೆ ಕ್ಯಾಚ್ ನೀಡಿ ನಿರ್ಗಮಿಸಿದ್ದರು.
Updated on: Mar 11, 2023 | 8:33 PM

ಅಹಮದಾಬಾದ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಫೀಲ್ಡಿಂಗ್ ಮೂಲಕ ಎಂಬುದು ವಿಶೇಷ.

ಹೌದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡವು 480 ರನ್ಗಳಿಸಿ ಆಲೌಟ್ ಆಗಿತ್ತು. ಈ ವೇಳೆ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಥನ್ ಲಿಯಾನ್ ಅಶ್ವಿನ್ ಎಸೆತದಲ್ಲಿ ಕೊಹ್ಲಿಗೆ ಕ್ಯಾಚ್ ನೀಡಿ ನಿರ್ಗಮಿಸಿದ್ದರು.

ಲಿಯಾನ್ ನೀಡಿದ ಕ್ಯಾಚ್ ಹಿಡಿಯುತ್ತಿದ್ದಂತೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 300 ಕ್ಯಾಚ್ ಪಡೆದ ಆಟಗಾರರ ಪಟ್ಟಿಗೆ ವಿರಾಟ್ ಕೊಹ್ಲಿ ಸೇರ್ಪಡೆಯಾದರು. ವಿಶೇಷ ಎಂದರೆ ಟೀಮ್ ಇಂಡಿಯಾ ಪರ ಈ ಸಾಧನೆ ಮಾಡಿದ್ದು ರಾಹುಲ್ ದ್ರಾವಿಡ್ ಹಾಗೂ ವಿರಾಟ್ ಕೊಹ್ಲಿ ಮಾತ್ರ.

ಟೀಮ್ ಇಂಡಿಯಾ ಪರ ಅತ್ಯಧಿಕ ಕ್ಯಾಚ್ ಹಿಡಿದ ಆಟಗಾರರ ಪಟ್ಟಿಯಲ್ಲಿ ಭಾರತ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅಗ್ರಸ್ಥಾನದಲ್ಲಿದ್ದಾರೆ. ದ್ರಾವಿಡ್ 509 ಪಂದ್ಯಗಳಲ್ಲಿ ಒಟ್ಟು 334 ಕ್ಯಾಚ್ಗಳನ್ನು ಹಿಡಿದಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 300 ಕ್ಕೂ ಅಧಿಕ ಕ್ಯಾಚ್ ಹಿಡಿದ 5ನೇ ಆಟಗಾರ ಎನಿಸಿಕೊಂಡಿದ್ದಾರೆ.

ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಕ್ಯಾಚ್ ಹಿಡಿದ ವಿಶ್ವ ದಾಖಲೆ ಶ್ರೀಲಂಕಾದ ಮಾಜಿ ನಾಯಕ ಮಹೇಲ ಜಯವರ್ಧನೆ ಹೆಸರಿನಲ್ಲಿದೆ. ಜಯವರ್ಧನೆ 652 ಪಂದ್ಯಗಳಲ್ಲಿ 440 ಕ್ಯಾಚ್ಗಳನ್ನು ಹಿಡಿದು ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಇದೀಗ 494 ಪಂದ್ಯಗಳ ಮೂಲಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 300 ಕ್ಯಾಚ್ಗಳನ್ನು ಹಿಡಿದಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತದ 2ನೇ ಆಟಗಾರ ಹಾಗೂ ವಿಶ್ವದ 7ನೇ ಕ್ರಿಕೆಟಿಗ ಎಂಬ ದಾಖಲೆಯನ್ನು ಕಿಂಗ್ ಕೊಹ್ಲಿ ನಿರ್ಮಿಸಿದ್ದಾರೆ.




