AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 15 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ರಿಎಂಟ್ರಿ

Virat Kohli: ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ವಿರಾಟ್ ಕೊಹ್ಲಿ ಆಕರ್ಷಕ ಶತಕ ಬಾರಿಸಿದ್ದರು. ಇದೀಗ ರಾಯ್​ಪುರದಲ್ಲಿ ನಡೆಯಲಿರುವ ದ್ವಿತೀಯ ಪಂದ್ಯಕ್ಕಾಗಿ ಸಜ್ಜಾಗಿದ್ದಾರೆ. ಇನ್ನು ಈ ಸರಣಿಯ ಬಳಿಕ ದೇಶೀಯ ಟೂರ್ನಿ ಆಡಲು ವಿರಾಟ್ ಕೊಹ್ಲಿ ನಿರ್ಧರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 03, 2025 | 8:24 AM

Share
ವಿರಾಟ್ ಕೊಹ್ಲಿ (Virat Kohli) ದೇಶೀಯ ಅಂಗಳಕ್ಕೆ ಮರಳುತ್ತಿದ್ದಾರೆ. ಅದು ಕೂಡ ಬರೋಬ್ಬರಿ 15 ವರ್ಷಗಳ ಬಳಿಕ. ಹೌದು, ಕಿಂಗ್ ಕೊಹ್ಲಿ ಮುಂಬರುವ ವಿಜಯ ಹಝಾರೆ ಏಕದಿನ ಟೂರ್ನಿ ಆಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ಈಗಾಗಲೇ ದೆಹಲಿ ಕ್ರಿಕೆಟ್ ಅಸೋಸಿಯೇಷನ್​ಗೆ ಮಾಹಿತಿ ನೀಡಿದ್ದಾರೆ.

1 / 5
ಮುಂಬರುವ ವಿಜಯ ಹಝಾರೆ ಟೂರ್ನಿಗೆ ತಾನು ಆಯ್ಕೆಗೆ ಲಭ್ಯರಿರುವುದಾಗಿ ವಿರಾಟ್ ಕೊಹ್ಲಿ ದೆಹಲಿ ರಾಜ್ಯ ತಂಡದ ಆಯ್ಕೆ ಸಮಿತಿಗೆ ತಿಳಿಸಿದ್ದಾರೆ.  ಇದರೊಂದಿಗೆ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಬಳಿಕ ಕಿಂಗ್ ಕೊಹ್ಲಿ ದೇಶೀಯ ಟೂರ್ನಿಯಲ್ಲಿ ಬ್ಯಾಟ್ ಬೀಸುವುದು ಖಚಿತವಾಗಿದೆ. ಅದು ಕೂಡ ಕೂಡ ಬರೋಬ್ಬರಿ 15 ವರ್ಷಗಳ ಬಳಿಕ ಎಂಬುದು ವಿಶೇಷ.

2 / 5
ವಿರಾಟ್ ಕೊಹ್ಲಿ ಕೊನೆಯ ಬಾರಿ ವಿಜಯ ಹಝಾರೆ ಟೂರ್ನಿ ಆಡಿದ್ದು 2010 ರಲ್ಲಿ. ಅಂದು ದೆಹಲಿ ಪರ ಐದು ಮ್ಯಾಚ್​ಗಳಲ್ಲಿ ಬ್ಯಾಟ್ ಬೀಸಿದ್ದ ಕೊಹ್ಲಿ 45.80 ಸರಾಸರಿಯಲ್ಲಿ 229 ರನ್ ಗಳಿಸಿದ್ದರು. ಅಲ್ಲದೆ ಐದು ಇನಿಂಗ್ಸ್​ಗಳಲ್ಲಿ ಎರಡು ಅರ್ಧಶತಕಗಳನ್ನು ಸಹ ಬಾರಿಸಿದ್ದರು.

3 / 5
ಇದೀಗ ಬರೋಬ್ಬರಿ 15 ವರ್ಷಗಳ ಬಳಿಕ ಮತ್ತೊಮ್ಮೆ ದೆಹಲಿ ಪರ ಏಕದಿನ ಪಂದ್ಯವನ್ನಾಡಲು ನಿರ್ಧರಿಸಿದ್ದಾರೆ. ಅದರಂತೆ ಡಿಸೆಂಬರ್ 24 ರಿಂದ ಶುರುವಾಗಲಿರುವ ವಿಜಯ ಹಝಾರೆ ಏಕದಿನ ಟೂರ್ನಿಯಲ್ಲಿ ಕಿಂಗ್ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಮೂಲಕ ನ್ಯೂಝಿಲೆಂಡ್ ವಿರುದ್ಧದ ಸರಣಿಗಾಗಿ ಕೊಹ್ಲಿ ಸಿದ್ಧತೆ ನಡೆಸಲಿದ್ದಾರೆ.

4 / 5
ಸೌತ್ ಆಫ್ರಿಕಾ ವಿರುದ್ಧದ ಸರಣಿಯ ಮುಕ್ತಾಯದ ಬೆನ್ನಲ್ಲೇ ವಿಜಯ ಹಝಾರೆ ಟೂರ್ನಿ ಆರಂಭವಾಗಲಿದೆ. ಈ ಟೂರ್ನಿಯಲ್ಲಿ ಲೀಗ್ ಹಂತದಲ್ಲಿ ಕೊಹ್ಲಿ 7 ಪಂದ್ಯಗಳನ್ನಾಡುವ ಸಾಧ್ಯತೆಯಿದೆ. ಇದಾದ ಬಳಿಕ ಜನವರಿ 11 ರಿಂದ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಲಿದೆ. ಅಲ್ಲಿಯವರೆಗೆ ಕಿಂಗ್ ಕೊಹ್ಲಿ ದೇಶೀಯ ಅಂಗಳದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ