- Kannada News Photo gallery Cricket photos Virat Kohli Create New Record In T20 Cricket India vs Pakistan
Virat Kohli: ಪಾಕ್ ವಿರುದ್ಧ ಕಣಕ್ಕಿಳಿದು ವಿಶ್ವ ದಾಖಲೆ ನಿರ್ಮಿಸಿದ ಕಿಂಗ್ ಕೊಹ್ಲಿ..!
Virat Kohli: 33 ವರ್ಷದ ವಿರಾಟ್ ಕೊಹ್ಲಿ 100 ಟಿ20 ಪಂದ್ಯಗಳಲ್ಲಿ 92 ಇನಿಂಗ್ಸ್ಗಳನ್ನು ಆಡಿದ್ದಾರೆ. ಈ ವೇಳೆ 50 ಸರಾಸರಿಯಲ್ಲಿ 3343 ರನ್ ಗಳಿಸಿದ್ದಾರೆ.
Updated on: Aug 28, 2022 | 11:44 PM

ದುಬೈನಲ್ಲಿ ನಡೆದ ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ದುಬೈ ಇಂಟರ್ನ್ಯಾಷನಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಕೊಹ್ಲಿ ಟಿ20 ಕ್ರಿಕೆಟ್ನಲ್ಲಿ 100 ಪಂದ್ಯಗಳನ್ನು ಪೂರ್ಣಗೊಳಿಸಿದ್ದಾರೆ.

ಈ ಮೂಲಕ ಮೂರು ಮಾದರಿ ಕ್ರಿಕೆಟ್ನಲ್ಲಿ 100 ಪಂದ್ಯಗಳನ್ನಾಡಿದ ವಿಶ್ವದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.

ಅಂದರೆ 100 ಟೆಸ್ಟ್, 100 ಏಕದಿನ ಮತ್ತು 100 ಟಿ20 ಪಂದ್ಯವಾಡಿದ ಭಾರತದ ಮೊದಲ ಆಟಗಾರ ಹಾಗೂ ವಿಶ್ವದ ಎರಡನೇ ಬ್ಯಾಟ್ಸ್ಮನ್ ಎಂಬ ವಿಶ್ವ ದಾಖಲೆಯನ್ನು ಕೊಹ್ಲಿ ನಿರ್ಮಿಸಿದ್ದಾರೆ. ಇದಕ್ಕೂ ಮುನ್ನ ನ್ಯೂಜಿಲೆಂಡ್ನ ರಾಸ್ ಟೇಲರ್ ಮೂರು ಮಾದರಿಯಲ್ಲೂ 100 ಪಂದ್ಯಗಳನ್ನಾಡಿದ್ದರು. ಇದೀಗ ವಿರಾಟ್ ಕೊಹ್ಲಿ ಕೂಡ ಈ ಸಾಧನೆ ಮಾಡಿರುವುದು ವಿಶೇಷ.

ಇನ್ನು ರೋಹಿತ್ ಶರ್ಮಾ ಬಳಿಕ ಟೀಮ್ ಇಂಡಿಯಾ ಪರ 100 ಟಿ20 ಪಂದ್ಯವಾಡಿದ ಆಟಗಾರ ಎಂಬ ದಾಖಲೆಯನ್ನೂ ಕೂಡ ಕೊಹ್ಲಿ ಬರೆದಿದ್ದಾರೆ.

33 ವರ್ಷದ ವಿರಾಟ್ ಕೊಹ್ಲಿ 100 ಟಿ20 ಪಂದ್ಯಗಳಲ್ಲಿ 92 ಇನಿಂಗ್ಸ್ಗಳನ್ನು ಆಡಿದ್ದಾರೆ. ಈ ವೇಳೆ 50 ಸರಾಸರಿಯಲ್ಲಿ 3343 ರನ್ ಗಳಿಸಿದ್ದಾರೆ. ಹಾಗೆಯೇ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ರನ್ಗಳಿಸಿದ ವಿಶ್ವದ ಮೂರನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.
