Virat Kohli: ಪಾಕ್ ವಿರುದ್ಧ ಕಣಕ್ಕಿಳಿದು ವಿಶ್ವ ದಾಖಲೆ ನಿರ್ಮಿಸಿದ ಕಿಂಗ್ ಕೊಹ್ಲಿ..!

Edited By:

Updated on: Aug 28, 2022 | 11:44 PM

Virat Kohli: 33 ವರ್ಷದ ವಿರಾಟ್ ಕೊಹ್ಲಿ 100 ಟಿ20 ಪಂದ್ಯಗಳಲ್ಲಿ 92 ಇನಿಂಗ್ಸ್​ಗಳನ್ನು ಆಡಿದ್ದಾರೆ. ಈ ವೇಳೆ 50 ಸರಾಸರಿಯಲ್ಲಿ 3343 ರನ್ ಗಳಿಸಿದ್ದಾರೆ.

1 / 5
ದುಬೈನಲ್ಲಿ ನಡೆದ ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ದುಬೈ ಇಂಟರ್​ನ್ಯಾಷನಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ 100 ಪಂದ್ಯಗಳನ್ನು ಪೂರ್ಣಗೊಳಿಸಿದ್ದಾರೆ.

ದುಬೈನಲ್ಲಿ ನಡೆದ ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ದುಬೈ ಇಂಟರ್​ನ್ಯಾಷನಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ 100 ಪಂದ್ಯಗಳನ್ನು ಪೂರ್ಣಗೊಳಿಸಿದ್ದಾರೆ.

2 / 5

ಈ ಮೂಲಕ ಮೂರು ಮಾದರಿ ಕ್ರಿಕೆಟ್​ನಲ್ಲಿ 100 ಪಂದ್ಯಗಳನ್ನಾಡಿದ ವಿಶ್ವದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.

3 / 5

ಅಂದರೆ 100 ಟೆಸ್ಟ್, 100 ಏಕದಿನ ಮತ್ತು 100 ಟಿ20 ಪಂದ್ಯವಾಡಿದ ಭಾರತದ ಮೊದಲ ಆಟಗಾರ ಹಾಗೂ ವಿಶ್ವದ ಎರಡನೇ ಬ್ಯಾಟ್ಸ್​ಮನ್ ಎಂಬ ವಿಶ್ವ ದಾಖಲೆಯನ್ನು ಕೊಹ್ಲಿ ನಿರ್ಮಿಸಿದ್ದಾರೆ. ಇದಕ್ಕೂ ಮುನ್ನ ನ್ಯೂಜಿಲೆಂಡ್​ನ ರಾಸ್ ಟೇಲರ್ ಮೂರು ಮಾದರಿಯಲ್ಲೂ 100 ಪಂದ್ಯಗಳನ್ನಾಡಿದ್ದರು. ಇದೀಗ ವಿರಾಟ್ ಕೊಹ್ಲಿ ಕೂಡ ಈ ಸಾಧನೆ ಮಾಡಿರುವುದು ವಿಶೇಷ.

4 / 5

ಇನ್ನು ರೋಹಿತ್ ಶರ್ಮಾ ಬಳಿಕ ಟೀಮ್ ಇಂಡಿಯಾ ಪರ 100 ಟಿ20 ಪಂದ್ಯವಾಡಿದ ಆಟಗಾರ ಎಂಬ ದಾಖಲೆಯನ್ನೂ ಕೂಡ ಕೊಹ್ಲಿ ಬರೆದಿದ್ದಾರೆ.

5 / 5

33 ವರ್ಷದ ವಿರಾಟ್ ಕೊಹ್ಲಿ 100 ಟಿ20 ಪಂದ್ಯಗಳಲ್ಲಿ 92 ಇನಿಂಗ್ಸ್​ಗಳನ್ನು ಆಡಿದ್ದಾರೆ. ಈ ವೇಳೆ 50 ಸರಾಸರಿಯಲ್ಲಿ 3343 ರನ್ ಗಳಿಸಿದ್ದಾರೆ. ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ವಿಶ್ವದ ಮೂರನೇ ಬ್ಯಾಟ್ಸ್​ಮನ್​ ಎನಿಸಿಕೊಂಡಿದ್ದಾರೆ.

Loading...
Unable to load recommendations.
Follow Us