Virat Kohli: ಸೋತರೂ ಟಿ20 ವಿಶ್ವಕಪ್ನಲ್ಲಿ ವಿಶ್ವ ದಾಖಲೆ ಬರೆದ ಕಿಂಗ್ ಕೊಹ್ಲಿ
T20 World Cup 2022: ವಿರಾಟ್ ಕೊಹ್ಲಿ 11 ಎಸೆತಗಳನ್ನು ಎದುರಿಸಿ 12 ರನ್ಗಳಿಸಿ ಔಟಾಗಿದ್ದರು. ಆದರೆ ಈ ಎರಡಂಕಿ ಮೊತ್ತದ ಮೂಲಕ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ನಲ್ಲಿ ದಾಖಲೆ ಬರೆದಿರುವುದು ವಿಶೇಷ.
Updated on: Oct 30, 2022 | 8:24 PM

ಪರ್ತ್ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 11 ಎಸೆತಗಳನ್ನು ಎದುರಿಸಿ 12 ರನ್ಗಳಿಸಿ ಔಟಾಗಿದ್ದರು. ಆದರೆ ಈ ಎರಡಂಕಿ ಮೊತ್ತದ ಮೂಲಕ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ನಲ್ಲಿ ದಾಖಲೆ ಬರೆದಿರುವುದು ವಿಶೇಷ.

ಈ 12 ರನ್ಗಳೊಂದಿಗೆ ಟಿ20 ವಿಶ್ವಕಪ್ನಲ್ಲಿ ಸಾವಿರ ರನ್ ಪೂರೈಸಿದ ಮೊದಲ ಭಾರತೀಯ ಆಟಗಾರ ಎಂಬ ದಾಖಲೆಯನ್ನು ಕಿಂಗ್ ಕೊಹ್ಲಿ ಬರೆದಿದ್ದಾರೆ.

ವಿಶೇಷ ಎಂದರೆ ಟಿ20 ವಿಶ್ವಕಪ್ ಇತಿಹಾಸದಲ್ಲೇ ಈ ಸಾಧನೆ ಮಾಡಿದ್ದು ಕೇವಲ ಇಬ್ಬರು ಬ್ಯಾಟರ್ಗಳು. ಅದರಲ್ಲಿ ಇದೀಗ 2ನೇ ಬ್ಯಾಟ್ಸ್ಮನ್ ಆಗಿ ಕಿಂಗ್ ಕೊಹ್ಲಿ ಹೊರಹೊಮ್ಮಿದ್ದಾರೆ.

ಇದಕ್ಕೂ ಮುನ್ನ ಶ್ರೀಲಂಕಾದ ಮಾಜಿ ನಾಯಕ ಮಹೇಲ ಜಯವರ್ಧನೆ ಈ ಸಾಧನೆ ಮಾಡಿದ್ದರು. ಜಯವರ್ಧನೆ ಟಿ20 ವಿಶ್ವಕಪ್ನಲ್ಲಿ 31 ಇನಿಂಗ್ಸ್ ಮೂಲಕ ಒಟ್ಟು 1016 ರನ್ ಕಲೆಹಾಕಿ ವಿಶ್ವ ದಾಖಲೆ ನಿರ್ಮಿಸಿದ್ದರು.

ಇದೀಗ 22 ಟಿ20 ವಿಶ್ವಕಪ್ ಇನಿಂಗ್ಸ್ ಮೂಲಕ ವಿರಾಟ್ ಕೊಹ್ಲಿ ಒಟ್ಟು 1001 ರನ್ ಕಲೆಹಾಕಿದ್ದಾರೆ. ಈ ಮೂಲಕ ಜಯವರ್ಧನೆ ಬಳಿಕ ಟಿ20 ವಿಶ್ವಕಪ್ನಲ್ಲಿ ಸಾವಿರ ರನ್ ಬಾರಿಸಿದ 2ನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.

ವಿಶೇಷ ಎಂದರೆ ಕಿಂಗ್ ಕೊಹ್ಲಿ ಟಿ20 ವಿಶ್ವಕಪ್ನಲ್ಲಿ ಅತ್ಯಂತ ವೇಗವಾಗಿ ಸಾವಿರ ರನ್ ಪೂರೈಸಿದ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅಂದರೆ ಈ ಸಾಧನೆ ಮಾಡಲು ಜಯವರ್ಧನೆ 31 ಇನಿಂಗ್ಸ್ ಆಡಿದ್ರೆ, ಕಿಂಗ್ ಕೊಹ್ಲಿ ಕೇವಲ 22 ಇನಿಂಗ್ಸ್ ಮೂಲಕ ಈ ವಿಶ್ವ ದಾಖಲೆ ಬರೆದಿರುವುದು ವಿಶೇಷ.

ಇನ್ನು ವಿರಾಟ್ ಕೊಹ್ಲಿಗೆ ಮಹೇಲ ಜಯವರ್ಧನೆ ಹೆಸರಿನಲ್ಲಿರುವ ವಿಶ್ವ ದಾಖಲೆ ಮುರಿಯಲು ಕೇವಲ 16 ರನ್ಗಳ ಅವಶ್ಯಕತೆಯಿದೆ. ಹೀಗಾಗಿ ಮುಂದಿನ ಪಂದ್ಯಗಳ ಮೂಲಕ ಟಿ20 ವಿಶ್ವಕಪ್ನ ಟಾಪ್ ರನ್ ಸರದಾರನಾಗಿ ಕಿಂಗ್ ಕೊಹ್ಲಿ ಹೊರಹೊಮ್ಮುವ ನಿರೀಕ್ಷೇಯಿದೆ.

TV9 Kannada
Read More



