AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬರಿಸಿ ಬೊಬ್ಬಿರಿದು ವಿರಾಟ್ ಕೊಹ್ಲಿ ಬರೆದ ದಾಖಲೆಗಳು ಒಂದೆರೆಡಲ್ಲ..!

Virat Kohli Records: ವಿರಾಟ್ ಕೊಹ್ಲಿ ಖಾತೆಗೆ 82ನೇ ಶತಕ ಮೂಡಿಬಂದಿದೆ. ಈ ಭರ್ಜರಿ ಶತಕದೊಂದಿಗೆ ಕಿಂಗ್ ಕೊಹ್ಲಿ ಹಲವು ವಿಶ್ವ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ದಾಖಲೆಗಳ ಮೇಲೆ ದಾಖಲೆಗಳನ್ನು ಬರೆಯುತ್ತಾ ಎಂಬುದು ವಿಶೇಷ. ಹಾಗಿದ್ರೆ ವಿರಾಟ್ ಕೊಹ್ಲಿ ಹೆಸರಿಗೆ ಸೇರ್ಪಡೆಯಾದ ಹೊಸ ದಾಖಲೆಗಳಾವುವು ಎಂದು ನೋಡೋಣ...

ಝಾಹಿರ್ ಯೂಸುಫ್
| Edited By: |

Updated on:Feb 24, 2025 | 9:18 AM

Share
ಚಾಂಪಿಯನ್ಸ್ ಟ್ರೋಫಿಯ 5ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. ಅದು ಕೂಡ ಬದ್ಧವೈರಿ ಪಾಕಿಸ್ತಾನ್ ವಿರುದ್ಧ. ದುಬೈನ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ 241 ರನ್ ಕಲೆಹಾಕಿತು. ಈ ಗುರಿಯನ್ನು 42.3 ಓವರ್​ಗಳಲ್ಲಿ ಟೀಮ್ ಇಂಡಿಯಾ ನಿರಾಯಾಸವಾಗಿ ಚೇಸ್ ಮಾಡಿ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

1 / 8
ಈ ಭರ್ಜರಿ ಗೆಲುವಿನ ರೂವಾರಿ ವಿರಾಟ್ ಕೊಹ್ಲಿ. ಏಕೆಂದರೆ ಈ ಮ್ಯಾಚ್​ನಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ ಪಾಕ್ ಬೌಲರ್​ಗಳನ್ನು ಬೆಂಡೆತ್ತುವ ಮೂಲಕ 111 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದೊಂದಿಗೆ ದಾಖಲೆಗಳ ಸರದಾರ ತನ್ನ ಹೆಸರಿಗೆ ಮತ್ತಷ್ಟು ದಾಖಲೆಗಳನ್ನು ಸೇರ್ಪಡೆಗೊಳಿಸಿದರು. ಅದರಂತೆ ಕಿಂಗ್ ಕೊಹ್ಲಿ ಹೆಸರಿಗೆ ಸೇರ್ಪಡೆಯಾಗಿರುವ ಹೊಸ ದಾಖಲೆಗಳಾವುವು ಎಂದು ನೋಡುವುದಾದರೆ...

2 / 8
ರನ್ ಸರದಾರ: ಈ ಪಂದ್ಯದಲ್ಲಿ ಶತಕ ಬಾರಿಸುವುದೊಂದಿಗೆ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್​ನಲ್ಲಿ 14 ಸಾವಿರ ರನ್ ಪೂರೈಸಿದ್ದಾರೆ. ಅದು ಸಹ ಕೇವಲ 287 ಇನಿಂಗ್ಸ್​ಗಳ ಮೂಲಕ. ಇದರೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 14000 ರನ್ ಕಲೆಹಾಕಿದ ವಿಶ್ವ ದಾಖಲೆ ಕಿಂಗ್ ಕೊಹ್ಲಿ ಪಾಲಾಗಿದೆ.

3 / 8
ಫಿಫ್ಟಿ ಪ್ಲಸ್ ಸರದಾರ: ಐಸಿಸಿ ಏಕದಿನ ಟೂರ್ನಿಯಲ್ಲಿ ಅತ್ಯಧಿಕ 50+ ಸ್ಕೋರ್​ಗಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಈ ಹಿಂದೆ 23 ಫಿಫ್ಟಿ ಪ್ಲಸ್ ಸ್ಕೋರ್​ಗಳಿಸಿದ್ದ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದರು. ಇದೀಗ ಈ ದಾಖಲೆಯನ್ನು ಸರಿಗಟ್ಟುವ ಮೂಲಕ ಕಿಂಗ್ ಕೊಹ್ಲಿ ಮೊದಲ ಸ್ಥಾನಕ್ಕೇರಿದ್ದಾರೆ.

4 / 8
ಪಂದ್ಯ ಪುರುಷ: ಈ ಪಂದ್ಯದಲ್ಲಿ ಬಾರಿಸಿದ ಶತಕದೊಂದಿಗೆ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದಾರೆ. ಈ ಮೂಲಕ ಐಸಿಸಿ ಟೂರ್ನಿಯಲ್ಲಿ ಅತ್ಯಧಿಕ ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಆಟಗಾರ ಎನಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿ ಈವರೆಗೆ 14 ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.

5 / 8
ಶತಕ ಸರದಾರ: ಏಕದಿನ ಕ್ರಿಕೆಟ್​ನಲ್ಲಿ 50+ ಶತಕ ಸಿಡಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೂ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಈ ಹಿಂದೆ 50 ಸೆಂಚುರಿಗಳೊಂದಿಗೆ ವಿಶ್ವ ದಾಖಲೆ ಬರೆದಿದ್ದ ಕಿಂಗ್ ಕೊಹ್ಲಿ ಇದೀಗ 51ನೇ ಶತಕದೊಂದಿಗೆ ಐತಿಹಾಸಿಕ ಸಾಧನೆ ಮಾಡಿದ್ದಾರೆ.

6 / 8
ರನ್ ಮೆಷಿನ್: ಪಾಕಿಸ್ತಾನ್ ವಿರುದ್ಧ ಶತಕ ಬಾರಿಸುವುದರೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ 14 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ವಿಶ್ವದ 3ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ (18426) ಹಾಗೂ ಕುಮಾರ್ ಸಂಗಾಕ್ಕರ (14234) ಮೊದಲೆರಡು ಸ್ಥಾನಗಳಲ್ಲಿದ್ದಾರೆ.

7 / 8
ಬೆಸ್ಟ್ ಫೀಲ್ಡರ್: ಇನ್ನು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಎರಡು ಕ್ಯಾಚ್​ಗಳನ್ನು ಸಹ ಹಿಡಿದಿದ್ದಾರೆ. ಇದರೊಂದಿಗೆ ಭಾರತದ ಪರ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ಕ್ಯಾಚ್ ಹಿಡಿದ ಫೀಲ್ಡರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಮೊಹಮ್ಮದ್ ಅಝರುದ್ದೀನ್ (156) ಹೆಸರಿನಲ್ಲಿತ್ತು. ಇದೀಗ 158 ಕ್ಯಾಚ್​ಗಳೊಂದಿಗೆ ಕಿಂಗ್ ಕೊಹ್ಲಿ ಬೆಸ್ಟ್ ಫೀಲ್ಡರ್ ಎನಿಸಿಕೊಂಡಿದ್ದಾರೆ.

8 / 8

Published On - 9:04 am, Mon, 24 February 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ