- Kannada News Photo gallery Cricket photos Virat Kohli Created Unwanted Record In T20 World Cup 2024 Final
Virat Kohli: ಕೊನೆಯ ಪಂದ್ಯದಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ವಿರಾಟ್ ಕೊಹ್ಲಿ
T20 World Cup 2024 Final: ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 76 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಕಿಂಗ್ ಕೊಹ್ಲಿ ಟಿ20 ವಿಶ್ವಕಪ್ನಲ್ಲಿ ಅತ್ಯಂತ ಹೀನಾಯ ದಾಖಲೆಯೊಂದನ್ನು ಬರೆದಿದ್ದಾರೆ.
Updated on: Jun 30, 2024 | 11:30 AM

T20 World Cup 2024: ಟಿ20 ವಿಶ್ವಕಪ್ನ ಫೈನಲ್ ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು.

ಆರಂಭದಲ್ಲಿ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಕೊಹ್ಲಿ, ವಿಕೆಟ್ ಬೀಳುತ್ತಿದ್ದಂತೆ ಜವಾಬ್ದಾರಿಯುತವಾಗಿ ಇನಿಂಗ್ಸ್ ಕಟ್ಟಿದರು. ಪರಿಣಾಮ ಅರ್ಧಶತಕ ಪೂರೈಸಲುಬರೋಬ್ಬರಿ 48 ಎಸೆತಗಳನ್ನು ತೆಗೆದುಕೊಂಡರು. ಇದರೊಂದಿಗೆ ಟಿ20 ವಿಶ್ವಕಪ್ ಫೈನಲ್ನಲ್ಲಿ ನಿಧಾನವಾಗಿ ಅರ್ಧಶತಕ ಬಾರಿಸಿದ ಭಾರತೀಯ ಬ್ಯಾಟರ್ ಎಂಬ ಕೆಟ್ಟ ದಾಖಲೆಯೊಂದು ಕೊಹ್ಲಿ ಪಾಲಾಯಿತು.

ಅಲ್ಲದೆ ಟಿ20 ವಿಶ್ವಕಪ್ ಫೈನಲ್ ಇತಿಹಾಸದಲ್ಲಿ ಅರ್ಧಶತಕ ಪೂರೈಸಲು ಅತೀ ಹೆಚ್ಚು ಎಸೆತಗಳನ್ನು ಎದುರಿಸಿದ 2ನೇ ಬ್ಯಾಟರ್ ಎಂಬ ಕೆಟ್ಟ ದಾಖಲೆಯನ್ನು ಕೂಡ ಕೊಹ್ಲಿ ತಮ್ಮದಾಗಿಸಿಕೊಂಡರು. ಈ ಪಟ್ಟಿಯಲ್ಲಿ 2010ರ ಟಿ20 ವಿಶ್ವಕಪ್ನಲ್ಲಿ 49 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಡೇವಿಡ್ ಹಸ್ಸಿ ಅಗ್ರಸ್ಥಾನದಲ್ಲಿದ್ದಾರೆ.

ಇನ್ನು ಅತೀ ಹೆಚ್ಚು ಎಸೆತಗಳನ್ನು ಎದುರಿಸಿ ಅರ್ಧಶತಕ ಬಾರಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಏಕೈಕ ಆಟಗಾರನಾಗಿ ವಿರಾಟ್ ಕೊಹ್ಲಿ ಹೊರಹೊಮ್ಮಿದ್ದಾರೆ. ಹಾಗೆಯೇ ಟಿ20 ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಪರ ಅತೀ ನಿಧಾನವಾಗಿ ಹಾಫ್ ಸೆಂಚುರಿ ಸಿಡಿಸಿದ 2ನೇ ಬ್ಯಾಟರ್ ಎಂಬ ಕಳಪೆ ದಾಖಲೆಯನ್ನೂ ಕೂಡ ಬರೆದಿದ್ದಾರೆ. ಈ ಪಟ್ಟಿಯಲ್ಲಿ ಯುಸ್ಎ ವಿರುದ್ಧ 49 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಸೂರ್ಯಕುಮಾರ್ ಯಾದವ್ ಮೊದಲ ಸ್ಥಾನದಲ್ಲಿದ್ದಾರೆ.

ಒಟ್ಟಿನಲ್ಲಿ ಟೀಮ್ ಇಂಡಿಯಾ ಪರ 117 ಟಿ20 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ ತಮ್ಮ ಕೆರಿಯರ್ನ ಕೊನೆಯ ಪಂದ್ಯದಲ್ಲಿ ಅತ್ಯಂತ ನಿಧಾನವಾಗಿ ಅರ್ಧಶತಕ ಪೂರೈಸಿ ಕೆಟ್ಟ ದಾಖಲೆಯೊಂದನ್ನು ಬರೆದಿದ್ದಾರೆ. ಈ ಹೀನಾಯ ದಾಖಲೆಯೊಂದಿಗೆ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿರುವುದು ವಿಶೇಷ.




