Virat Kohli: ಕೊನೆಯ ಪಂದ್ಯದಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ವಿರಾಟ್ ಕೊಹ್ಲಿ

|

Updated on: Jun 30, 2024 | 11:30 AM

T20 World Cup 2024 Final: ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 76 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಕಿಂಗ್ ಕೊಹ್ಲಿ ಟಿ20 ವಿಶ್ವಕಪ್​ನಲ್ಲಿ ಅತ್ಯಂತ ಹೀನಾಯ ದಾಖಲೆಯೊಂದನ್ನು ಬರೆದಿದ್ದಾರೆ.

1 / 5
T20 World Cup 2024: ಟಿ20 ವಿಶ್ವಕಪ್​ನ ಫೈನಲ್ ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು.

2 / 5
ಆರಂಭದಲ್ಲಿ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಕೊಹ್ಲಿ, ವಿಕೆಟ್ ಬೀಳುತ್ತಿದ್ದಂತೆ ಜವಾಬ್ದಾರಿಯುತವಾಗಿ ಇನಿಂಗ್ಸ್ ಕಟ್ಟಿದರು. ಪರಿಣಾಮ ಅರ್ಧಶತಕ ಪೂರೈಸಲುಬರೋಬ್ಬರಿ 48 ಎಸೆತಗಳನ್ನು ತೆಗೆದುಕೊಂಡರು. ಇದರೊಂದಿಗೆ ಟಿ20 ವಿಶ್ವಕಪ್ ಫೈನಲ್​ನಲ್ಲಿ ನಿಧಾನವಾಗಿ ಅರ್ಧಶತಕ ಬಾರಿಸಿದ ಭಾರತೀಯ ಬ್ಯಾಟರ್ ಎಂಬ ಕೆಟ್ಟ ದಾಖಲೆಯೊಂದು ಕೊಹ್ಲಿ ಪಾಲಾಯಿತು.

3 / 5
ಅಲ್ಲದೆ ಟಿ20 ವಿಶ್ವಕಪ್ ಫೈನಲ್ ಇತಿಹಾಸದಲ್ಲಿ ಅರ್ಧಶತಕ ಪೂರೈಸಲು ಅತೀ ಹೆಚ್ಚು ಎಸೆತಗಳನ್ನು ಎದುರಿಸಿದ 2ನೇ ಬ್ಯಾಟರ್ ಎಂಬ ಕೆಟ್ಟ ದಾಖಲೆಯನ್ನು ಕೂಡ ಕೊಹ್ಲಿ ತಮ್ಮದಾಗಿಸಿಕೊಂಡರು. ಈ ಪಟ್ಟಿಯಲ್ಲಿ 2010ರ ಟಿ20 ವಿಶ್ವಕಪ್​ನಲ್ಲಿ 49 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಡೇವಿಡ್ ಹಸ್ಸಿ ಅಗ್ರಸ್ಥಾನದಲ್ಲಿದ್ದಾರೆ.

4 / 5
ಇನ್ನು ಅತೀ ಹೆಚ್ಚು ಎಸೆತಗಳನ್ನು ಎದುರಿಸಿ ಅರ್ಧಶತಕ ಬಾರಿಸಿ ಟಿ20 ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಏಕೈಕ ಆಟಗಾರನಾಗಿ ವಿರಾಟ್ ಕೊಹ್ಲಿ ಹೊರಹೊಮ್ಮಿದ್ದಾರೆ. ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತೀ ನಿಧಾನವಾಗಿ ಹಾಫ್ ಸೆಂಚುರಿ ಸಿಡಿಸಿದ 2ನೇ ಬ್ಯಾಟರ್ ಎಂಬ ಕಳಪೆ ದಾಖಲೆಯನ್ನೂ ಕೂಡ ಬರೆದಿದ್ದಾರೆ. ಈ ಪಟ್ಟಿಯಲ್ಲಿ ಯುಸ್​ಎ ವಿರುದ್ಧ 49 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಸೂರ್ಯಕುಮಾರ್ ಯಾದವ್ ಮೊದಲ ಸ್ಥಾನದಲ್ಲಿದ್ದಾರೆ.

5 / 5
ಒಟ್ಟಿನಲ್ಲಿ ಟೀಮ್ ಇಂಡಿಯಾ ಪರ 117 ಟಿ20 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ ತಮ್ಮ ಕೆರಿಯರ್​ನ ಕೊನೆಯ ಪಂದ್ಯದಲ್ಲಿ ಅತ್ಯಂತ ನಿಧಾನವಾಗಿ ಅರ್ಧಶತಕ ಪೂರೈಸಿ ಕೆಟ್ಟ ದಾಖಲೆಯೊಂದನ್ನು ಬರೆದಿದ್ದಾರೆ. ಈ ಹೀನಾಯ ದಾಖಲೆಯೊಂದಿಗೆ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿರುವುದು ವಿಶೇಷ.