ಐಪಿಎಲ್ನಲ್ಲಿ ಹಿಂದೆಂದೂ ಕಾಣದ ಭರ್ಜರಿ ದಾಖಲೆ ಬರೆದ ವಿರಾಟ್ ಕೊಹ್ಲಿ
IPL 2026 RCB vs GT: ಐಪಿಎಲ್ನ ಕ್ವಾಲಿಫೈಯರ್-1 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್ಗಳಲ್ಲಿ 254 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡ 19.3 ಓವರ್ಗಳಲ್ಲಿ 162 ರನ್ಗಳಿಗೆ ಆಲೌಟ್ ಆಗಿದ್ದಾರೆ. ಈ ಮೂಲಕ ಆರ್ಸಿಬಿ ತಂಡ 92 ರನ್ಗಳ ಭರ್ಜರಿ ಜಯ ಸಾಧಿಸಿದೆ.
Updated on:May 27, 2026 | 8:00 AM

ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ವಿರಾಟ್ ಕೊಹ್ಲಿ (Virat Kohli) ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ಸತತವಾಗಿ ರನ್ ರಾಶಿ ಪೇರಿಸುವ ಮೂಲಕ. ಇದರೊಂದಿಗೆ ಇಂತಹದೊಂದು ದಾಖಲೆ ಬರೆದ ಮೊದಲ ದಾಂಡಿಗ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: IPL)

ಧರ್ಮಶಾಲಾದ ಹೆಚ್ಪಿಸಿಎ ಮೈದಾನದಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 25 ಎಸೆತಗಳಲ್ಲಿ 43 ರನ್ ಬಾರಿಸಿದ್ದರು. ಈ 43 ರನ್ಗಳೊಂದಿಗೆ ಕಿಂಗ್ ಕೊಹ್ಲಿ ಈ ಬಾರಿಯ ಐಪಿಎಲ್ನಲ್ಲೂ 600 ರನ್ಗಳನ್ನು ಪೂರೈಸಿದ್ದಾರೆ. (PC: IPL)

ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಸತತವಾಗಿ 4 ಬಾರಿ 600 ರನ್ ಕಲೆಹಾಕಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಕೊಹ್ಲಿ 2023 ರಲ್ಲಿ 639 ರನ್ ಕಲೆಹಾಕಿದ್ದರು. ಇದಾದ ಬಳಿಕ 2024 ರಲ್ಲಿ 741 ರನ್ ಬಾರಿಸಿ ಅಬ್ಬರಿಸಿದ್ದರು. (PC: IPL)

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಆದ ವರ್ಷ, ಅಂದರೆ 2025 ರಲ್ಲಿ ವಿರಾಟ್ ಕೊಹ್ಲಿ 657 ರನ್ಗಳ ಕೊಡುಗೆ ನೀಡಿದ್ದರು. ಇದೀಗ 15 ಪಂದ್ಯಗಳ ಮೂಲಕ ಕಿಂಗ್ ಕೊಹ್ಲಿ ಒಂದು ಶತಕ ಹಾಗೂ 4 ಅರ್ಧಶತಕಗಳೊಂದಿಗೆ 600 ರನ್ ಪೂರೈಸಿದ್ದಾರೆ. (PC: IPL)

ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಸತತವಾಗಿ 4 ಸೀಸನ್ಗಳಲ್ಲಿ 600+ ರನ್ ಗಳಿಸಿದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಐಪಿಎಲ್ನಲ್ಲಿ 6 ಬಾರಿ 600+ ರನ್ ಬಾರಿಸಿದ ಏಕೈಕ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. (PC: IPL)
Published On - 7:27 am, Wed, 27 May 26

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




