ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಮತ್ತೊಂದು ವಿಶ್ವ ದಾಖಲೆಗೆ ಕೊರಳೊಡ್ಡಿದ್ದಾರೆ. ಈ ಬಾರಿ ಅವರು ಬರೆದಿರುವ ದಾಖಲೆ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಎಂಬುದು ವಿಶೇಷ. ಅಂದರೆ ಕೊಹ್ಲಿಗಿಂತ ಮುಂಚೆ ಏಕದಿನ ಕ್ರಿಕೆಟ್ನಲ್ಲಿ ಈ ದಾಖಲೆಯನ್ನು ಯಾವುದೇ ಬ್ಯಾಟರ್ ಬರೆದಿರಲಿಲ್ಲ. ಇದೀಗ ಅಂತಹದೊಂದು ದಾಖಲೆ ಬರೆದು ಕಿಂಗ್ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.
Updated on:Nov 04, 2026 | 12:15 PM

ಏಕದಿನ ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ರನ್ ರಾಶಿ ಪೇರಿಸುವ ಮೂಲಕ. ಈ ರನ್ ರಾಶಿಯೊಂದಿಗೆ ಕಿಂಗ್ ಕೊಹ್ಲಿ ಏಕದಿನ ಕ್ರಿಕೆಟ್ನಲ್ಲಿ ಯಾರಿಂದಲೂ ಸಾಧ್ಯವಾಗದ ದಾಖಲೆಯ ಶಿಖರವನ್ನೇರಿದ್ದಾರೆ. (PC: Gettyimages)

ಆಕ್ಲೆಂಡ್ನ ಈಡನ್ ಪಾರ್ಕ್ನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ ತಾನೆದುರಿಸಿದ ಮೂರನೇ ಎಸೆತದಲ್ಲೇ ಫೋರ್ ಬಾರಿಸಿದರು. ಈ ನಾಲ್ಕು ರನ್ಗಳೊಂದಿಗೆ ಕಿಂಗ್ ಕೊಹ್ಲಿ ಏಕದಿನ ಕ್ರಿಕೆಟ್ನಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ 13 ಸಾವಿರ ರನ್ ಪೂರೈಸಿದ್ದಾರೆ. (PC: Gettyimages)

ಈ ಮೂಲಕ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು 13 ಸಾವಿರ ರನ್ ಕಲೆಹಾಕಿದ ವಿಶ್ವದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಅಂದರೆ ಕೊಹ್ಲಿಯನ್ನು ಹೊರತುಪಡಿಸಿ ಒಡಿಐ ಕ್ರಿಕೆಟ್ನಲ್ಲಿ ಯಾವುದೇ ಬ್ಯಾಟರ್ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ 13 ಸಾವಿರ ರನ್ ಗಳಿಸಿಲ್ಲ. (PC: Gettyimages)

ಈ ಹಿಂದೆ ಏಕದಿನ ಕ್ರಿಕೆಟ್ನಲ್ಲಿ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ 330 ಇನಿಂಗ್ಸ್ಗಳ ಮೂಲಕ 12,662 ರನ್ ಗಳಿಸಿದ್ದೇ ಸರ್ವಶ್ರೇಷ್ಠ ದಾಖಲೆಯಾಗಿತ್ತು. ಈ ದಾಖಲೆಯನ್ನು ಈ ವರ್ಷದ ಆರಂಭದಲ್ಲೇ ಅಳಿಸಿ ಹಾಕಿದ್ದ ವಿರಾಟ್ ಕೊಹ್ಲಿ ಇದೀಗ ಹೊಸ ಇತಿಹಾಸ ನಿರ್ಮಿಸಿದ್ದಾರೆ. (PC: Gettyimages)

ಏಕದಿನ ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಈವರೆಗೆ 251 ಇನಿಂಗ್ಸ್ ಆಡಿದ್ದಾರೆ. ಈ ವೇಳೆ ಬರೋಬ್ಬರಿ 13000* ರನ್ ಗಳಿಸುವ ಮೂಲಕ ಒನ್ ಡೇ ಇಂಟರ್ನ್ಯಾಷನಲ್ ಕ್ರಿಕೆಟ್ ಇತಿಹಾಸದಲ್ಲೇ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ 13 ಸಾವಿರ ರನ್ ಕಲೆಹಾಕಿದ ವಿಶ್ವದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ. (PC: Gettyimages)
Published On - 12:14 pm, Wed, 4 November 26

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



