AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ ವಿರಾಟ್ ಕೊಹ್ಲಿ

Virat Kohli Records: ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಹೆಸರಿಗೆ ಮತ್ತೊಂದು ವಿಶ್ವ ದಾಖಲೆ ಸೇರ್ಪಡೆಯಾಗಿದೆ. ಈ ಬಾರಿ ಆಸ್ಟ್ರೇಲಿಯಾದ ಮಾಜಿ ಆಟಗಾರ ಮೈಕೆಲ್ ಬೆವೆನ್ ಅವರ ವಿಶ್ವ ದಾಖಲೆಯನ್ನು ಮುರಿದು ಕಿಂಗ್ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಅತ್ಯುತ್ತಮ ಸರಾಸರಿಯೊಂದಿಗೆ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Dec 04, 2025 | 7:24 AM

Share
ಏಕದಿನ ಕ್ರಿಕೆಟ್​​ನಲ್ಲಿ ವಿರಾಟ್ ಕೊಹ್ಲಿಯ (Virat Kohli) ಪಾರುಪತ್ಯ ಮುಂದುವರೆದಿದೆ. ಈ ಪಾರುಪತ್ಯದೊಂದಿಗೆ ಕಿಂಗ್ ಕೊಹ್ಲಿ ಮತ್ತೊಂದು ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಆದರೆ ಈ ಬಾರಿ ನಿರ್ಮಿಸಿರುವುದು ಅಂತಿಂಥ ದಾಖಲೆಯಲ್ಲ. ಬದಲಾಗಿ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಯಾರಿಂದಲೂ ಸಾಧ್ಯವಾಗದ ವರ್ಲ್ಡ್​ ರೆಕಾರ್ಡ್ ಎಂಬುದು ವಿಶೇಷ.

1 / 5
ಸೌತ್ ಆಫ್ರಿಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ 102 ರನ್ ಬಾರಿಸಿದ್ದರು. ಈ 102 ರನ್​​ಗಳೊಂದಿಗೆ ಕಿಂಗ್ ಕೊಹ್ಲಿ ಏಕದಿನ ಕ್ರಿಕೆಟ್​​ನಲ್ಲಿ 50+ ಸರಾಸರಿಯನ್ನು ಮುಂದುವರೆಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್​ ಇತಿಹಾಸದಲ್ಲೇ 4 ಸಾವಿರಕ್ಕೂ ಅಧಿಕ ದಿನಗಳ ಕಾಲ 50+ ಅವರೇಜ್​​ನಲ್ಲಿ ಕಾಣಿಸಿಕೊಂಡ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಇಂತಹದೊಂದು ದಾಖಲೆ ಆಸ್ಟ್ರೇಲಿಯಾದ ಮೈಕೆಲ್ ಬೆವೆನ್ ಹೆಸರಿನಲ್ಲಿತ್ತು. ಆಸ್ಟ್ರೇಲಿಯಾ ಪರ 232 ಏಕದಿನ ಪಂದ್ಯಗಳನ್ನಾಡಿರುವ ಬೆವೆನ್ 53.17 ಸರಾಸರಿಯಲ್ಲಿ ಒಟ್ಟು 6912 ರನ್ ಕಲೆಹಾಕಿದ್ದಾರೆ. ಈ ವೇಳೆ ಅವರು 3409 ದಿನಗಳ ಕಾಲ 50+ ಸರಾಸರಿ ಕಾಯ್ದುಕೊಂಡು ವಿಶ್ವ ದಾಖಲೆ ನಿರ್ಮಿಸಿದ್ದರು.

3 / 5
ಇದೀಗ ಈ ದಾಖಲೆಯನ್ನು ಅಳಿಸಿ ಹಾಕಿ ವಿರಾಟ್ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಕಿಂಗ್ ಕೊಹ್ಲಿ ಈವರೆಗೆ 307 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 14412 ರನ್​ಗಳನ್ನು ಕಲೆಹಾಕಿದ್ದಾರೆ. ಇದರ ನಡುವೆ 4431 ದಿನಗಳ ಕಾಲ 50+ ಅವರೇಜ್ ಅನ್ನು ಕಾಯ್ದುಕೊಂಡಿದ್ದಾರೆ.

4 / 5
ಈ ಮೂಲಕ 54 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ದಿನಗಳ ಕಾಲ 50+ ಅವರೇಜ್ ಕಾಯ್ದುಕೊಂಡ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿಶೇಷ ಎಂದರೆ ಕಿಂಗ್ ಕೊಹ್ಲಿಯನ್ನು ಹೊರತುಪಡಿಸಿ ವಿಶ್ವದ ಬೇರೆ ಯಾವುದೇ ಬ್ಯಾಟರ್​ಗೂ ಏಕದಿನ ಕ್ರಿಕೆಟ್​​ನಲ್ಲಿ 4 ಸಾವಿರಕ್ಕೂ ಅಧಿಕ ದಿನಗಳ ಕಾಲ 50+ ಸರಾಸರಿಯನ್ನು ಕಾಯ್ದುಕೊಳ್ಳಲು ಸಾಧ್ಯವಾಗಿಲ್ಲ. ಇದೀಗ ಯಾರಿಂದಲೂ ಸಾಧ್ಯವಾಗದ ವಿಶೇಷ ವಿಶ್ವ ದಾಖಲೆಗೆ ಕಿಂಗ್ ಕೊಹ್ಲಿ ಕೊರೊಳೊಡ್ಡಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ